Petrol Diesel prices reduced: ಭಾರಿ ಇಳಿಕೆಯಾಯ್ತು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ! ಪೆಟ್ರೋಲ್-ಡೀಸೆಲ್ ಬೆಲೆಯೂ ಕಡಿಮೆ: ಏನಿದರ ಲೆಕ್ಕಾಚಾರ?
ಇದೀಗ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಇಳಿಕೆ ಮಾಡಿದೆ.
ನವದೆಹಲಿ: ಅತ್ಯಾವಶ್ಯಕ ಸರಕು ಪಟ್ಟಿಗೆ ಸೇರಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೆ ತಲುಪಿ, ತುಂಬಾ ತುಟ್ಟಿಯಾಗಿವೆ. ವಾಹನ ಸವಾರರು ಈ ಪೆಟ್ರೋಲ್-ಡೀಸೆಲ್ ರೇಟ್ ಕೇಳಿಯೇ ಬೆಚ್ಚಿಬೀಳುವಂತಾಗಿದೆ. ಆದರೆ ಈ ದುಃಸ್ವಪ್ನದಿಂದ ಹೊರಬರಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಂದು ಸಮಾಧಾನಕರ ಸುದ್ದಿ ಹಂಚಿಕೊಂಡಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ ಮಾಡಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.
ತಗ್ಗಿತು ಪೆಟ್ರೋಲ್-ಡೀಸೆಲ್ ಬೆಲೆ
ಇದೀಗ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಇಳಿಕೆ ಮಾಡಿದೆ. ಇನ್ನು ಡೀಸೆಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್‌ಗೆ 6 ರೂಪಾಯಿ ಇಳಿಕೆಯಾಗಿದೆ. ತತ್ಫಲವಾಗಿ, ಅಬಕಾರಿ ಸುಂಕ ಕಡಿತ ಹಿನ್ನೆಲೆ ಪೆಟ್ರೋಲ್ ದರ 9.5 ರೂ. ಇಳಿಕೆಯಾಗಲಿದೆ. ಅಬಕಾರಿ ಸುಂಕ ಕಡಿತ ಹಿನ್ನೆಲೆ ಡೀಸೆಲ್ ದರವೂ 7 ರೂ. ಇಳಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್, ಸಂತಸ:
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿದ್ದು ಈ ಬೆಲೆ ಇಳಿಕೆಯಿಂದ ಜನರು ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ನಮಗೆ ಯಾವಾಗಲೂ ಜನರೇ ಮೊದಲು. ಇಂದಿನ ನಿರ್ಧಾರಗಳು ಸಕಾರಾತ್ಮಕ ಪರಿಣಾಮ ಬೀರುತ್ತವೆ. ವಿಶೇಷವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರ್ಧಾರವು ವಿವಿಧ ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಿಂದ ಜನರು ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಅಡುಗೆ ಸಿಲಿಂಡರ್‌ಗೆ 200 ರೂಪಾಯಿ ಸಹಾಯಧನ!
ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್ ಬಳಸುವವರಿಗೂ ಗುಡ್ ನ್ಯೂಸ್ ನೀಡಿದೆ ಕೇಂದ್ರ ಸರ್ಕಾರ. ಆದರೆ ಇದು ಉಜ್ವಲ ಯೋಜನೆಯಡಿ ಸಿಲಿಂಡರ್ ಬಳಸುವವರಿಗೆ ಮಾತ್ರ ಅನ್ವಯವಾಗಲಿದೆ. ಅದರಂತೆ ಪ್ರತಿ ಅಡುಗೆ ಅನಿಲ ಸಿಲಿಂಡರ್‌ಗೆ 200 ರೂಪಾಯಿ ಸಹಾಯಧನ ದೊರೆಯಲಿದೆ. ಪ್ರಸಕ್ತ ವರ್ಷ ಗರಿಷ್ಠ 12 ಸಿಲಿಂಡರ್‌ಗಳಿಗೆ 200 ರೂಪಾಯಿ ಸಹಾಯಧನ ಸಮದಾಯವಾಗಲಿದೆ.
ಸಿಮೆಂಟ್ ದರವನ್ನು ಇಳಿಸಲೂ ಕೇಂದ್ರ ಸರ್ಕಾರ ಮುಂದು!
ಸಿಮೆಂಟ್ ದರವನ್ನು ಇಳಿಸಲೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ. ದೇಶಾದ್ಯಂತ ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಹಾಗೂ ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ತೇವೆ. ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮೇಲಿನ ಎಲ್ಲಾ ನಿರ್ದಿಷ್ಟ ವಿವರಗಳೊಂದಿಗೆ ಕೆಲ ಗಂಟೆಗಳಲ್ಲೇ ಅಧಿಸೂಚನೆ ಹೊರಡಿಸುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ರೈತರಿಗೂ ಸಿಕ್ತು ಖುಶ್ ಕುಶನ್!
ರೈತರಿಗೂ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ ರಸಗೊಬ್ಬರಕ್ಕೆ ಹೆಚ್ಚುವರಿ ಸಬ್ಸಿಡಿ ನೀಡಲು ನಿರ್ಧರಿಸಿದೆ. ಬಜೆಟ್‌ನಲ್ಲಿ ₹ 1.05 ಲಕ್ಷ ಕೋಟಿ ರಸಗೊಬ್ಬರ ಸಬ್ಸಿಡಿ ಜೊತೆಗೆ ಇದೀಗ ಹೆಚ್ಚುವರಿಯಾಗಿ ₹ 1.10 ಲಕ್ಷ ಕೋಟಿಯನ್ನು ಘೋಷಿಸಲಾಗಿದ್ದು, ಇದರಿಂದ ನಮ್ಮ ರೈತರಿಗೆ ಮತ್ತಷ್ಟು ಕುಶನ್ ನೀಡದಂತಾಗಿದೆ ಎಂದು ಟ್ವೀಟ್ ನಲ್ಲಿ ನಿರ್ಮಲಾ ತಿಳಿಸಿದ್ದಾರೆ.
ಆಮದು ಪ್ಲಾಸ್ಟಿಕ್ ಉತ್ಪನ್ನ ಮೇಲೆಯೂ ಅಬಕಾರಿ ಸುಂಕ ಇಳಿಕೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೂ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಆಮದು ಪ್ಲಾಸ್ಟಿಕ್ ಉತ್ಪನ್ನ ಮೇಲೆಯೂ ಅಬಕಾರಿ ಸುಂಕ ಇಳಿಕೆ ಮಾಡಿದ್ದಾರೆ. ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳ ಬೆಲೆ ತಗ್ಗಲಿದೆ. ತನ್ಮೂಲಕ ಎಲ್ಲ ಪ್ಲಾಸ್ಟಿಕ್ ಉತ್ಪನ್ನಗಳ ಬೆಲೆ ಇಳಿಸಲು ಕ್ರಮ ಕೈಗೊಂಡಿದ್ದೇವೆ. ಕಚ್ಚಾ ವಸ್ತು, ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕ ಇಳಿಸ್ತೇವೆ. ಇದು ಅಂತಿಮವಾಗಿ ಉತ್ಪನ್ನಗಳ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
Also Read: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ಡಿಸಿ ಮಂಜುನಾಥ್ ವಿರುದ್ದವೂ ದೂರುದಾರ ಅರೋಪ
ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಸಾರಾಂಶ ಹೀಗಿದೆ:
7/12 We are reducing the Central excise duty on Petrol by ₹ 8 per litre and on Diesel by ₹ 6 per litre.This will reduce the price of petrol by ₹ 9.5 per litre and of Diesel by ₹ 7 per litre.
It will have revenue implication of around ₹ 1 lakh crore/year for the government.
— Nirmala Sitharaman (@nsitharaman) May 21, 2022
We are reducing the Central excise duty on Petrol by Rs 8 per litre and on Diesel by Rs 6 per litre. This will reduce the price of petrol by Rs 9.5 per litre and of Diesel by Rs 7 per litre: Union Finance Minister Nirmala Sitharaman
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Sat, 21 May 22