OBC Reservation: ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ; ಕೇಂದ್ರ ಸರ್ಕಾರ ಘೋಷಣೆ
OBC Reservation in Medical Education: ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ. 27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ನವದೆಹಲಿ: ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ. 27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಹಾಗೇ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ.
ಈ ಮೀಸಲಾತಿ ಎಂಬಿಬಿಎಸ್ (MBBS) ಮತ್ತು ಬಿಡಿಎಸ್(BDS)ಗೂ ಅನ್ವಯವಾಗಲಿದೆ. ಹಾಗೇ, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಒಬಿಸಿ )OBC) ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.
ಮೆಡಿಕಲ್ ಕಾಲೇಜುಗಳಲ್ಲಿ ಓಬಿಸಿ (OBC) ಮತ್ತು ಇಡಬ್ಲುಎಸ್ (EWS) ಕೆಟಗರಿಯ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳ ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ.
ಈ ಮೀಸಲಾತಿಯಿಂದಾಗಿ ಎಂಬಿಬಿಎಸ್ನ 1,500 ಒಬಿಸಿ (OBC) ಅಭ್ಯರ್ಥಿಗಳು, ಸ್ನಾತಕೋತ್ತರ ವಿಭಾಗದ 2,500 ಒಬಿಸಿ ವಿದ್ಯಾರ್ಥಿಗಳು, ಎಂಬಿಬಿಎಸ್ನ ಆರ್ಥಿಕವಾಗಿ ಹಿಂದುಳಿದ (EWS) 550 ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿಭಾಗದ 1000 EWS ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
(Central Government Announces 27% Reservation for OBC in Medical Education 10% Reservation for EWS)
Published On - 3:45 pm, Thu, 29 July 21