UAPA Act: ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು ದೇಶ ವಿರೋಧಿ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಆದೇಶದಲ್ಲಿ, ಗೃಹ ಸಚಿವಾಲಯವು ನಯೀಮ್ ಅಹ್ಮದ್ ಖಾನ್ ನೇತೃತ್ವದ ಜೆಕೆಎನ್ಎಫ್ ಅನ್ನು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿ ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಹರಡುತ್ತಿರುವ ಕಾಣಕ್ಕಾಗಿ ಕೇಂದ್ರ ಸರ್ಕಾರವು ಯುಎಪಿಎ ಅಡಿಯಲ್ಲಿ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ನಿಷೇಧಿಸಿದೆ. ಜೆಕೆಎನ್ಎಫ್ ಸದಸ್ಯರು ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ಆಗಾಗ್ಗೆ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದಾರೆ’ ಹೀಗಾಗಿ ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ಜನರಲ್ಲಿ ಅಸಮಾಧಾನದ ಬೀಜ ಬಿತ್ತುತ್ತಾ, ಭದ್ರತೆ ಹಾಗೂ ಸಾರ್ವಭೌಮತೆಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ನ್ಯಾಷನಲ್ ಫ್ರಂಟ್ ಮೇಲೆ ಐದು ವರ್ಷಗಳ ನಿಷೇಧ ಹೇರಿದೆ. ಆದೇಶದಲ್ಲಿ, ಗೃಹ ಸಚಿವಾಲಯವು ನಯೀಮ್ ಅಹ್ಮದ್ ಖಾನ್ ನೇತೃತ್ವದ ಜೆಕೆಎನ್ಎಫ್ ಅನ್ನು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿ ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.
ದೇಶದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಯೋತ್ಪಾದಕ ಶಕ್ತಿಗಳನ್ನು ಬೇರುಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಮಾಧ್ಯಮ ಫ್ಲ್ಯಾಟ್ಫಾರ್ಮ್ ಎಕ್ಸ್ನಲ್ಲಿ ನಿಷೇಧದ ಬಗ್ಗೆ ಮಾಹಿತಿ ನೀಡಿದರು.
ಮತ್ತಷ್ಟು ಓದಿ: ಉಗ್ರ ಚಟುವಟಿಕೆಗೆ ಹಣ ಸಂಗ್ರಹ ಮಾಡುತ್ತಿದ್ದ ಐವರನ್ನು ವಶ ಪಡೆದ ಇಡಿ: ಬೆಂಗಳೂರಿನ ಪ್ರತಿಷ್ಠಿತ ಬ್ಯಾಂಕ್ನಲ್ಲಿತ್ತು ಪಿಎಫ್‌ಐನ ಖಾತೆ
ಫೆಬ್ರವರಿ 28 ರಂದು ಕೇಂದ್ರವು ಮುಸ್ಲಿಂ ಕಾನ್ಫರೆನ್ಸ್, ಜಮ್ಮು ಮತ್ತು ಕಾಶ್ಮೀರ ಮತ್ತು ಮುಸ್ಲಿಂ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರ ಸಂಘಟನೆಯನ್ನು ನಿಷೇಧಿಸಿತ್ತು.
ಜೆಕೆಎನ್ಎಫ್ ಕಾಶ್ಮೀರದ ಜನರು ಚುನಾವಣೆಯಲ್ಲಿ ಭಾಗಿಯಾಗದಂತೆ ಬೆದರಿಕೆ ಒಡ್ಡುತ್ತಿದೆ. ಆ ಮೂಲಕ ಭಾರತೀಯ ಪ್ರಜಾಪ್ರಭುತ್ವದ ಸಾಂವಿಧಾನಿಕವಾಗಿ ಮೂಲಭೂತ ಹಕ್ಕುಗಳಿಗೆ ಅಡ್ಡಿಪಡಿಸಿದೆ ಎಂದು ಸರ್ಕಾರ ಹೇಳಿದೆ. ಫ್ರಂಟ್ ಮತ್ತು ಅದರ ಸದಸ್ಯರು ತಮ್ಮ ಚಟುವಟಿಕೆಗಳಿಂದ ದೇಶದ ಸಾಂವಿಧಾನಿಕ ಅಧಿಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಗೆ ಸಂಪೂರ್ಣ ಅಗೌರವ ತೋರಿಸುತ್ತಾರೆ ಎಂದು ಸರ್ಕಾರ ಹೇಳಿದೆ.
2017ರ ಜುಲೈ 24ರಂದು ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ ಮೊದಲ ಪ್ರತ್ಯೇಕತಾವಾದಿ ನಾಯಕರಲ್ಲಿ ಖಾನ್ ಕೂಡ ಒಬ್ಬರು, ಅವರು ಈಗ ಜೈಲಿನಲ್ಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುವ ಮೂಲಕ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡುವ ಮೂಲಕ ಜೆಕೆಎನ್ಎಫ್ ಸದಸ್ಯರು ಭಯೋತ್ಪಾದಕ ಚಟುವಟಿಕೆಗಳು ಮತ್ತು ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ