ಕರ್ನಾಟಕ ರೈತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

ಎಂಎಸ್​ಪಿಯಲ್ಲಿ ಖರೀದಿ ಮಾಡುವುದರಿಂದ ಮಾರ್ಕೆಟ್ ರೇಟ್​ಗೆ ಅನುಗುಣವಾಗಿ ದರ ನಿಗದಿ ಆಗುತ್ತದೆ. ಕಬ್ಬನ್ನು ಎಥೆನಾಲ್ಗೆ ಹೆಚ್ಚು ಬಳಕೆ ಮಾಡಬೇಕು ಅಂತಲೂ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಕರ್ನಾಟಕ ರೈತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ
ಉದ್ದು ಮತ್ತು ಹೆಸರು ಕಾಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 26, 2021 | 1:43 PM

ದೆಹಲಿ: ಹೆಸರು ಕಾಳು ಮತ್ತು ಉದ್ದನ್ನು ಎಂಎಸ್​ಪಿಯಲ್ಲಿ ಖರೀದಿ ಮಾಡಬೇಕು ಅಂತ ರಾಜ್ಯದ ರೈತರು ಮನವಿ ಮಾಡಿದ್ದರು. 30 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಹೆಸರು ಮತ್ತು 10 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಉದ್ದನ್ನು ಎಂಎಸ್​ಪಿಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅದೇಶ ನೀಡಿದೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಯಾವಾಗ ಖರೀದಿ ಮಾಡಬೇಕು ಎನ್ನುವುದು ರಾಜ್ಯ ಸರ್ಕಾರ ನಿರ್ಧಾರ ಮಾಡಿದ ನಂತರ ಆಗುತ್ತದೆ. ಎರಡು ಬೆಳೆಗಳನ್ನು ಬೆಳೆಯುವ ರೈತರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವೆ ಹೇಳಿದರು.

ಎಂಎಸ್​ಪಿಯಲ್ಲಿ ಖರೀದಿ ಮಾಡುವುದರಿಂದ ಮಾರ್ಕೆಟ್ ರೇಟ್​ಗೆ ಅನುಗುಣವಾಗಿ ದರ ನಿಗದಿ ಆಗುತ್ತದೆ. ಕಬ್ಬನ್ನು ಎಥೆನಾಲ್​ಗೆ ಹೆಚ್ಚು ಬಳಕೆ ಮಾಡಬೇಕು ಅಂತಲೂ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಇದರಿಂದ ಪೆಟ್ರೋಲ್ ಆಮದಿನ ಮೇಲೆ ಅವಲಂಬನೆ ಮಾಡುವುದು ಕಡಿಮೆ ಆಗುತ್ತದೆ. ಕಬ್ಬು ಬೆಳೆಗಾರರಿಗೆ ಅನುಕೂಲ ಮಾಡುವ ನಿರ್ಧಾರವನ್ನೂ ಕೇಂದ್ರ ಕೈಗೊಂಡಿದೆ. ಕಬ್ಬಿನ ಮೇಲಿನ ಎಫ್ಆರ್ಪಿಯನ್ನು ಹೆಚ್ಚಳ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಹಿಂದೆ ಒಂದು ಕ್ವಿಂಟಾಲ್ ಕಬ್ಬಿಗೆ ಎಫ್ಆರ್ಪಿಯನ್ನು (FRP) ಶೇ.10ರಷ್ಟು ಏರಿಕೆ ಮಾಡಲಾಗಿದೆ. ಈವರೆಗಿನ ಗರಿಷ್ಠ ಲಾಭಕರ ಬೆಲೆ 290 ರೂ. ಪ್ರತಿ ಕ್ವಿಂಟಲ್​ಗೆ ಕಬ್ಬು ಬೆಳೆಗಾರರಿಗೆ ನೀಡಲು ಒಪ್ಪಿಗೆ ನೀಡಿದೆ. ಈ ತೀರ್ಮಾನದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭ ಸಿಗುತ್ತದೆ. 2021- 2022ರ ಸಾಲಿನಲ್ಲಿ ಕಬ್ಬು ಉತ್ಪಾದನಾ ವೆಚ್ಚವನ್ನು 155 ರೂ. ಎಂದು ತೀರ್ಮಾನಿಸಲಾಗಿದೆ. ಪ್ರತಿ ಕ್ವಿಂಟಾಲ್ಗೆ 290 ರೂ. ಕೊಡುವುದರಿಂದ ಶೇ.10ರಷ್ಟು ಚೇತರಿಕೆ ದರ ನೀಡಲಾಗುವುದು. ಒಟ್ಟಾರೆ ಉತ್ಪಾದನಾ ವೆಚ್ಚಕ್ಕಿಂತ ಶೇ.87.1ರಷ್ಟು ಹೆಚ್ಚುವರಿ ಬೆಲೆ ನಿಗದಿಯಾದಂತಿದೆ.

ಇದನ್ನೂ ಓದಿ

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

ಉಪ ರಾಷ್ಟ್ರಪತಿ ಕರ್ನಾಟಕ ಭೇಟಿ ಅಂತ್ಯ; ತಾವು ಹೇಳಿದ ಮಾತಿನಂತೆ ನಡೆದುಕೊಂಡ ಸಿಎಂ ಬಸವರಾಜ ಬೊಮ್ಮಾಯಿ!

(central government has instructed to buy Vigna Mungo and Mung Bean in MSP)

Published On - 1:00 pm, Thu, 26 August 21

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ