AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನಗಳ ಪ್ರಯಾಣ ದರದ ಮಿತಿಯನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರ

ವಿಮಾನಗಳ ಪ್ರಯಾಣ ದರದ ಮಿತಿ ತೆಗೆದು ಹಾಕಿ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಆದೇಶ ಹೊರಡಿಸಿದೆ.

ವಿಮಾನಗಳ ಪ್ರಯಾಣ ದರದ ಮಿತಿಯನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರ
ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ
TV9 Web
| Edited By: |

Updated on:Aug 10, 2022 | 10:41 PM

Share

ನವದೆಹಲಿ: ವಿಮಾನಗಳ ಪ್ರಯಾಣ ದರದ ಮಿತಿ ತೆಗೆದು ಹಾಕಿ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ (Department of Civil Aviation) ಆದೇಶ ಹೊರಡಿಸಿದೆ. ಪ್ರಯಾಣ ದರ ಮಿತಿ ಈ ತಿಂಗಳು (ಆಗಸ್ಟ್  31) ಕ್ಕೆ ಅಂತ್ಯಗೊಳ್ಳಲಿದೆ. ವಿಮಾನ ಪ್ರಯಾಣ ದರ ಮಿತಿ ತೆಗೆದು ಹಾಕುವ ತೀರ್ಮಾನವನ್ನು ನಿತ್ಯದ ಬೇಡಿಕೆ ಆಧರಿಸಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ (Jyotiraditya Scindia) ಹೇಳಿದ್ದಾರೆ.

ದೇಶೀಯ ವಿಮಾನಯಾನ ಕ್ಷೇತ್ರ ಭವಿಷ್ಯದಲ್ಲಿ ಬೆಳವಣಿಗೆಯಾಗುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ಕೊರೊನಾ ಕಾಲದಲ್ಲಿ ವಿಮಾನ ಪ್ರಯಾಣ ಟಿಕೆಟ್ ಮೇಲೆ ಮಿತಿ ವಿಧಿಸಿತ್ತು ಎಂದು ಹೇಳಿದರು.

ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ

ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್​ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ  ಬಿಡುಗಡೆ ಮಾಡಲಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ  ‌ಎರಡು ಕಂತುಗಳ 4,254 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎಲ್ಲ ರಾಜ್ಯಗಳಿಗೂ ಇಂದು ಒಟ್ಟಾರೆ 1,16,665 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಬಿಹಾರ ರಾಜ್ಯಕ್ಕೆ 11,734 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ 20,928 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.

ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಶೇ.75ರಷ್ಟು ಕುಟುಂಬಗಳಿಗೆ ಪೈಪ್ ಮೂಲಕ ಗ್ಯಾಸ್ ಪೂರೈಕೆ: ನರೇಂದ್ರ ಮೋದಿ

ನವದೆಹಲಿ: ಪಾಣಿಪತ್ ರಿಫೈನರಿಯಲ್ಲಿ ಇಂಡಿಯನ್ ಆಯಿಲ್ 2ಜಿ ಎಥೆನಾಲ್ ಘಟಕವನ್ನು ಬುಧವಾರ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಶೇ.75ರಷ್ಟು ಕುಟುಂಬಗಳಿಗೆ ಪೈಪ್ ಮೂಲಕ ಗ್ಯಾಸ್ ಪೂರೈಕೆಯಾಗಲಿದೆ ಎಂದು ಹೇಳಿದ್ದಾರೆ.

ಇಂಡಿಯನ್ ಆಯಿಲ್ 2ಜಿ ಎಥೆನಾಲ್ ಸ್ಥಾವರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಕೃಷಿ ತ್ಯಾಜ್ಯಗಳ ಸಾಗಣೆಗೆ ಸೌಲಭ್ಯಗಳನ್ನು ಮಾಡಲಾಗುತ್ತಿದೆ, ಹೊಸ ಜೈವಿಕ ಇಂಧನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಇದು ಉದ್ಯೋಗವನ್ನು ನೀಡುತ್ತದೆ ಮತ್ತು ಹೊಸ ಅವಕಾಶಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಇದರಿಂದ ಗ್ರಾಮಸ್ಥರು ಮತ್ತು ರೈತರಿಗೆ ಅನುಕೂಲವಾಗಲಿದೆ. ಇದು ದೇಶದಲ್ಲಿ ಮಾಲಿನ್ಯದ ಸವಾಲುಗಳನ್ನು ಕಡಿಮೆ ಮಾಡುತ್ತದೆ. ಪ್ರಕೃತಿಯನ್ನು ರಕ್ಷಿಸಲು ಜೈವಿಕ ಇಂಧನ ಮಹತ್ವದ್ದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಕೃತಿಯನ್ನು ಆರಾಧಿಸುವ ನಮ್ಮ ದೇಶದಲ್ಲಿ, ಪ್ರಕೃತಿಯನ್ನು ರಕ್ಷಿಸಲು ಜೈವಿಕ ಇಂಧನವು ಮಹತ್ವದ್ದಾಗಿದೆ. ನಮ್ಮ ರೈತರು ಇದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ನಮಗೆ ಜೈವಿಕ ಇಂಧನ ಎಂದರೆ ಪರಿಸರವನ್ನು ಉಳಿಸುವ ಹಸಿರು ಇಂಧನ ಎಂದು ಪ್ರಧಾನಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Wed, 10 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್