ನವದೆಹಲಿ: ವಿಮಾನಗಳ ಪ್ರಯಾಣ ದರದ ಮಿತಿ ತೆಗೆದು ಹಾಕಿ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ (Department of Civil Aviation) ಆದೇಶ ಹೊರಡಿಸಿದೆ. ಪ್ರಯಾಣ ದರ ಮಿತಿ ಈ ತಿಂಗಳು (ಆಗಸ್ಟ್ 31) ಕ್ಕೆ ಅಂತ್ಯಗೊಳ್ಳಲಿದೆ. ವಿಮಾನ ಪ್ರಯಾಣ ದರ ಮಿತಿ ತೆಗೆದು ಹಾಕುವ ತೀರ್ಮಾನವನ್ನು ನಿತ್ಯದ ಬೇಡಿಕೆ ಆಧರಿಸಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ (Jyotiraditya Scindia) ಹೇಳಿದ್ದಾರೆ.
ದೇಶೀಯ ವಿಮಾನಯಾನ ಕ್ಷೇತ್ರ ಭವಿಷ್ಯದಲ್ಲಿ ಬೆಳವಣಿಗೆಯಾಗುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ಕೊರೊನಾ ಕಾಲದಲ್ಲಿ ವಿಮಾನ ಪ್ರಯಾಣ ಟಿಕೆಟ್ ಮೇಲೆ ಮಿತಿ ವಿಧಿಸಿತ್ತು ಎಂದು ಹೇಳಿದರು.
The decision to remove air fare caps has been taken after careful analysis of daily demand and prices of air turbine fuel. Stabilisation has set in & we are certain that the sector is poised for growth in domestic traffic in the near future. https://t.co/qxinNNxYyu
— Jyotiraditya M. Scindia (@JM_Scindia) August 10, 2022
ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ
ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ ಮಾಡಲಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಎರಡು ಕಂತುಗಳ 4,254 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎಲ್ಲ ರಾಜ್ಯಗಳಿಗೂ ಇಂದು ಒಟ್ಟಾರೆ 1,16,665 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಬಿಹಾರ ರಾಜ್ಯಕ್ಕೆ 11,734 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ 20,928 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.
ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಶೇ.75ರಷ್ಟು ಕುಟುಂಬಗಳಿಗೆ ಪೈಪ್ ಮೂಲಕ ಗ್ಯಾಸ್ ಪೂರೈಕೆ: ನರೇಂದ್ರ ಮೋದಿ
ನವದೆಹಲಿ: ಪಾಣಿಪತ್ ರಿಫೈನರಿಯಲ್ಲಿ ಇಂಡಿಯನ್ ಆಯಿಲ್ 2ಜಿ ಎಥೆನಾಲ್ ಘಟಕವನ್ನು ಬುಧವಾರ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಶೇ.75ರಷ್ಟು ಕುಟುಂಬಗಳಿಗೆ ಪೈಪ್ ಮೂಲಕ ಗ್ಯಾಸ್ ಪೂರೈಕೆಯಾಗಲಿದೆ ಎಂದು ಹೇಳಿದ್ದಾರೆ.
ಇಂಡಿಯನ್ ಆಯಿಲ್ 2ಜಿ ಎಥೆನಾಲ್ ಸ್ಥಾವರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಕೃಷಿ ತ್ಯಾಜ್ಯಗಳ ಸಾಗಣೆಗೆ ಸೌಲಭ್ಯಗಳನ್ನು ಮಾಡಲಾಗುತ್ತಿದೆ, ಹೊಸ ಜೈವಿಕ ಇಂಧನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಇದು ಉದ್ಯೋಗವನ್ನು ನೀಡುತ್ತದೆ ಮತ್ತು ಹೊಸ ಅವಕಾಶಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.
ಇದರಿಂದ ಗ್ರಾಮಸ್ಥರು ಮತ್ತು ರೈತರಿಗೆ ಅನುಕೂಲವಾಗಲಿದೆ. ಇದು ದೇಶದಲ್ಲಿ ಮಾಲಿನ್ಯದ ಸವಾಲುಗಳನ್ನು ಕಡಿಮೆ ಮಾಡುತ್ತದೆ. ಪ್ರಕೃತಿಯನ್ನು ರಕ್ಷಿಸಲು ಜೈವಿಕ ಇಂಧನ ಮಹತ್ವದ್ದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಕೃತಿಯನ್ನು ಆರಾಧಿಸುವ ನಮ್ಮ ದೇಶದಲ್ಲಿ, ಪ್ರಕೃತಿಯನ್ನು ರಕ್ಷಿಸಲು ಜೈವಿಕ ಇಂಧನವು ಮಹತ್ವದ್ದಾಗಿದೆ. ನಮ್ಮ ರೈತರು ಇದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ನಮಗೆ ಜೈವಿಕ ಇಂಧನ ಎಂದರೆ ಪರಿಸರವನ್ನು ಉಳಿಸುವ ಹಸಿರು ಇಂಧನ ಎಂದು ಪ್ರಧಾನಿ ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:13 pm, Wed, 10 August 22