Supreme Court: ಕೇಂದ್ರ ಸರ್ಕಾರ ತನಿಖೆ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ, ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ

ಭಾರತ ಸರ್ಕಾರವು ದೇಶದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಲು ನಿರಾಕರಿಸಿದೆ.

Supreme Court: ಕೇಂದ್ರ ಸರ್ಕಾರ ತನಿಖೆ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ, ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 05, 2023 | 4:42 PM

ದೆಹಲಿ: ಭಾರತ ಸರ್ಕಾರವು ಸಿಬಿಐ, (Central Bureau of Investigation) ಇಡಿ (Enforcement Directorate), ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್​​ಗೆ ಅರ್ಜಿಯನ್ನು ಸಲ್ಲಿಸಿತ್ತು, ಆದರೆ ಇದೀಗ ಸುಪ್ರೀಂ ಈ ಅರ್ಜಿಯನ್ನು ವಿಚಾರಣೆ ನಡೆಸಲು ನಿರಕಾರಿಸಿದೆ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ತನ್ನ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಇಂದು (ಏ.4) ನಿರಾಕರಿಸಿದೆ. ವಿರೋಧ ಪಕ್ಷಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸಲ್ಲಿಸಿದ ಅರ್ಜಿಯಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಪ್ರಕರಣ ಎಲ್ಲವೂ ಕೂಡ ವಿರೋಧ ಪಕ್ಷಗಳು ವಿರುದ್ಧ ಮಾತ್ರ ಇದೆ. ಈ ತನಿಖಾ ಸಂಸ್ಥೆಗಳನ್ನು ರಾಜಕೀಯ ದ್ವೇಷಕ್ಕಾಗಿ ಬಳಸುತ್ತಿದೆ ಎಂದು ತಿಳಿಸಿದ್ದಾರೆ. 2014ರಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ವಿರೋಧ ಪಕ್ಷದ ನಾಯಕರ ವಿರುದ್ಧ ಒಂದಲ್ಲ ಒಂದು ಪ್ರಕರಣವನ್ನು ದಾಖಲಿಸಿಕೊಂಡು ಅವರ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಹೇಳಿದರು.

ಕಳೆದ ಏಳು ವರ್ಷಗಳಲ್ಲಿ ಇಡಿ 6 ಪಟ್ಟು ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ ಎಂದು ಸಿಂಘ್ವಿ ಅಂಕಿಅಂಶಗಳ ಮೂಲಕ ಕೋರ್ಟ್ ಮುಂದೆ ಪ್ರಸ್ತಾಪಿಸಿದರು. ಆದರೆ ಅವರಿಗೆ ನೀಡುವ ಶಿಕ್ಷೆ ಪ್ರಮಾಣ ಕೇವಲ 23 ಪ್ರತಿಶತದಷ್ಟು ಮಾತ್ರ. 95 ರಷ್ಟು ಇಡಿ ಮತ್ತು ಸಿಬಿಐ ಪ್ರಕರಣಗಳು ದೇಶಾದ್ಯಂತದ ವಿರೋಧ ಪಕ್ಷದ ನಾಯಕರ ವಿರುದ್ಧವಾಗಿವೆ ಮತ್ತು ಇದು ರಾಜಕೀಯ ದ್ವೇಷ, ಇದರ ಜತೆಗೆ ಇದು ಪಕ್ಷಪಾತವಾಗಿದೆ ಎಂದು ಸ್ಪಷ್ಟವಾಗಿ ತಿಳಿದು ಬಂದಿದೆ ಎಂದು ಅವರು ಆರೋಪಿಸಿದರು.

ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಅರ್ಜಿಯ ಸಿಂಧುತ್ವ ಮತ್ತು ಕಾರ್ಯಸಾಧ್ಯತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ತನಿಖೆ ಮತ್ತು ಕಾನೂನು ಕ್ರಮದಿಂದ ವಿರೋಧ ಪಕ್ಷಗಳಿಗೆ ವಿನಾಯಿತಿಯನ್ನು ಬಯಸುತ್ತೀರಾ? ಮತ್ತು ನಾಗರಿಕರಾಗಿ ಅವರಿಗೆ ಯಾವುದೇ ವಿಶೇಷ ಹಕ್ಕುಗಳಿವೆಯೇ ಎಂದು ಅವರು ಸಿಂಘ್ವಿ ಅವರನ್ನು ಪ್ರಶ್ನಿಸಿದರು.

ತಾನು ವಿರೋಧ ಪಕ್ಷದ ನಾಯಕರಿಗೆ ಯಾವುದೇ ಆತ್ಮ ರಕ್ಷಣೆ ಅಥವಾ ವಿನಾಯಿತಿಯನ್ನು ಕೇಳುತ್ತಿಲ್ಲ, ಆದರೆ ಕಾನೂನಿನ ನ್ಯಾಯಯುತ ಮತ್ತು ನಿಷ್ಪಕ್ಷಪಾತ ದಾಳಿ ನಡೆಸಲು ಮಾತ್ರ ಈ ಬಗ್ಗೆ ಹೇಳುತ್ತಿದ್ದೇನೆ ಎಂದು ವಿರೋಧ ಪಕ್ಷಗಳ ವಕೀಲ ಸಿಂಘ್ವಿ ಉತ್ತರಿಸಿದರು. ಪ್ರತಿಪಕ್ಷಗಳನ್ನು ಬಲಹೀನಗೊಳಿಸಲು ಹಾಗೂ ಅವರ ಮನೋಸ್ಥೈರ್ಯ ಕುಗ್ಗಿಸಲು ಸರ್ಕಾರ ಈ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಇದು ಪ್ರಜಾಪ್ರಭುತ್ವ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದೆ ಎಂದು ಹೇಳಿದರು.

ಇದನ್ನೂ ಓದಿ: Supreme Court: ಭಾರತದಲ್ಲಿ ಕೋವಿಡ್ ಹೆಚ್ಚಳ, ವಕೀಲರು ಕೋರ್ಟ್​​ಗೆ ಬರುವ ಅವಶ್ಯಕತೆ ಇಲ್ಲ : ಡಿ.ವೈ ಚಂದ್ರಚೂಡ

ಆರೋಪಿಗಳನ್ನು ಬಂಧಿಸಲು ಸರ್ವೋಚ್ಚ ನ್ಯಾಯಾಲಯವು ವಿಧಿಸಿರುವ “ಟ್ರಿಪಲ್ ಟೆಸ್ಟ್” ಅನ್ನು ಸರ್ಕಾರ ಉಲ್ಲಂಘಿಸುತ್ತಿದೆ ಎಂದು ಅವರು ಹೇಳಿದರು. ಇದಕ್ಕೆ ಸಮಂಜಸವಾದ ಆಧಾರಗಳು, ಅಗತ್ಯತೆ ಮತ್ತು ಪ್ರಮಾಣಾನುಗುಣತೆಯ ಅಗತ್ಯವಿರುತ್ತದೆ. ವಿರೋಧ ಪಕ್ಷದ ನಾಯಕರನ್ನು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆ ಇಲ್ಲದೆ ಬಂಧಿಸಲಾಗುತ್ತಿದ್ದು, ಇದು ಚುನಾಯಿತ ಪ್ರತಿನಿಧಿಗಳಾಗಿ ಕರ್ತವ್ಯ ನಿರ್ವಹಿಸುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.

ಸಿಂಘ್ವಿ ಅವರ ವಾದಗಳಿಂದ ಮನವರಿಕೆಯಾಗಲಿಲ್ಲ ಮತ್ತು ಅರ್ಜಿಯು ಮೂಲಭೂತವಾಗಿ ರಾಜಕಾರಣಿಗಳಿಗೆ ಮನವಿಯಾಗಿದೆ ಎಂದು ಸಿಜೆಐ ಡಿ.ವೈ. ಚಂದ್ರಚೂಡ ಹೇಳಿದರು. ಭ್ರಷ್ಟಾಚಾರ ಅಥವಾ ಅಪರಾಧದಿಂದ ಬಾಧಿತರಾಗಿರುವ ಇತರ ನಾಗರಿಕರ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಅರ್ಜಿಯು ಗಣನೆಗೆ ತೆಗೆದುಕೊಂಡಿಲ್ಲ ಎಂದು ಸಿಜೆಐ ತಿಳಿಸಿದರು.

ಸುಪ್ರೀಂ ಕೋರ್ಟ್ ಕೇವಲ ರಾಜಕಾರಣಿಗಳಿಗೆ ಸಾಮಾನ್ಯ ಮಾರ್ಗಸೂಚಿಗಳನ್ನು ಅಥವಾ ತತ್ವಗಳನ್ನು ಹಾಕಲು ಸಾಧ್ಯವಿಲ್ಲ. ವೈಯಕ್ತಿಕ ಪ್ರಕರಣಗಳನ್ನು ನ್ಯಾಯಾಲಯದ ಮುಂದೆ ತರುವುದು ಹೆಚ್ಚು ಸೂಕ್ತವಲ್ಲ. ಈ ಬಗ್ಗೆ ನೀವು ಸಂಸತ್ತಿನಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಬಹುದು ಎಂದು ಅವರು ಸಲಹೆ ನೀಡಿದರು. ಈ ವಾದ-ವಿವಾದಗಳ ನಂತರ ಸಿಂಘ್ವಿ ತಮ್ಮ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದರು, ಹೆಚ್ಚು ನಿರ್ದಿಷ್ಟ ಪ್ರಕರಣಗಳು ಅಥವಾ ಸರ್ಕಾರವು ಅಧಿಕಾರ ದುರುಪಯೋಗದ ನಿದರ್ಶನಗಳು ಇದ್ದಾಗ ಮತ್ತೆ ನ್ಯಾಯಾಲಯಕ್ಕೆ ಬರುವುದಾಗಿ ಹೇಳಿದರು.

Published On - 4:07 pm, Wed, 5 April 23

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ