AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19 MHA Guidelines: ಕೊರೊನಾ ಎರಡನೇ ಅಲೆ ತಡೆಯಲು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

Latest MHA Guidelines : ಕಂಟೋನ್ಮೆಂಟ್ ಝೋನ್‌ಗಳಲ್ಲಿ ಮಾತ್ರ ಕಟ್ಟುನಿಟ್ಟಾಗಿ ನಿಯಂತ್ರಣವನ್ನು ಮಾಡಬೇಕು. ಮನೆ-ಮನೆಗೂ ಕಣ್ಗಾವಲು ಇಡಬೇಕು. ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಸ್ಥಳೀಯ ಪೊಲೀಸರು, ಪುರಸಭೆ ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆಯಾಯ ರಾಜ್ಯ ಸರ್ಕಾರ ಸೂಚನೆ ನೀಡಬೇಕು ಎಂದು ಸೂಚಿಸಲಾಗಿದೆ.

COVID-19 MHA Guidelines: ಕೊರೊನಾ ಎರಡನೇ ಅಲೆ ತಡೆಯಲು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on:Mar 23, 2021 | 6:32 PM

ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಆರ್ಭಟ ಶುರುವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಟೆಸ್ಟ್-ಟ್ರ್ಯಾಕ್‌-ಟ್ರೀಟ್ ಸೂತ್ರವನ್ನು ಕೇಂದ್ರ ಸರ್ಕಾರ ಹೊರಡಿಸಿದೆ.ಏಪ್ರಿಲ್‌ 30 ರವರೆಗೆ ಅನ್ವಯವಾಗುವಂತೆ ಮಾರ್ಗಸೂಚಿ ನೀಡಿದ್ದು, ಆ ಮೂಲಕ ಹೊಸ ಗೈಡ್‌ಲೈನ್ಸ್ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಿದೆ.

ಕಂಟೋನ್ಮೆಂಟ್ ಝೋನ್‌ಗಳಲ್ಲಿ ಮಾತ್ರ ಕಟ್ಟುನಿಟ್ಟಾಗಿ ನಿಯಂತ್ರಣವನ್ನು ಮಾಡಬೇಕು. ಮನೆ-ಮನೆಗೂ ಕಣ್ಗಾವಲು ಇಡಬೇಕು. ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಸ್ಥಳೀಯ ಪೊಲೀಸರು, ಪುರಸಭೆ ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆಯಾಯ ರಾಜ್ಯ ಸರ್ಕಾರ ಸೂಚನೆ ನೀಡಬೇಕು ಎಂದು ಸೂಚಿಸಲಾಗಿದೆ.

ಲಸಿಕಾ ಅಭಿಯಾನ ವೇಗವನ್ನು ತ್ವರಿತವಾಗಿ ಹೆಚ್ಚಿಸಬೇಕು, ಎಲ್ಲಾ ಆದ್ಯತೆಯ ಗುಂಪುಗಳಿಗೆ ತ್ವರಿತವಾಗಿ ಲಸಿಕೆ ನೀಡಿ ಜನರಿಗೆ ಲಸಿಕೆ ಪಡೆಯುವಂತೆ ಉತ್ತೇಜನ ನೀಡಬೇಕು ಎಂದು ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕಂಟೋನ್ಮೆಂಟ್ ಹೊರತುಪಡಿಸಿ ಎಲ್ಲಾ ಚಟುವಟಿಕೆಗಳಿಗೆ ಅವಕಾಶ: ರೈಲು, ವಿಮಾನ, ಮೆಟ್ರೋ ರೈಲು ಸಂಚಾರಕ್ಕೆ ನಿರ್ಬಂಧವಿಲ್ಲ. ಶಾಲೆಗಳು, ಉನ್ನತ ಶಿಕ್ಷಣ ಸಂಸ್ಥೆಗಳು, ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಯಾವುದೇ ರೀತಿಯ ನಿರ್ಬಂಧ ಇಲ್ಲ. ಮಾಲ್, ಮಲ್ಟಿಪ್ಲೆಕ್ಸ್‌, ಮನರಂಜನಾ ಉದ್ಯಾನಗಳು ಓಪನ್​ ಇರುತ್ತದೆ. ಯೋಗ ಕೇಂದ್ರ, ವ್ಯಾಯಾಮ ಶಾಲೆಗಳು, ಪ್ರದರ್ಶನಗಳು, ಸಭೆಗಳಿಗೂ ಕೂಡ ಕೇಂದ್ರ ಗೃಹ ಇಲಾಖೆ ಅವಕಾಶ ನೀಡಲು ನಿರ್ಧರಿಸಿದೆ.

ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ:

  • ಅಂತಾರಾಜ್ಯ ಪ್ರಯಾಣಕ್ಕೆ‌ ಯಾವುದೇ ನಿರ್ಬಂಧವಿಲ್ಲ.
  • ರಾಜ್ಯದ ಒಳಗೂ ಯಾವುದೇ ಪ್ರಯಾಣಕ್ಕೆ ನಿರ್ಬಂಧವಿಲ್ಲ.
  • ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯಮಾಡಬೇಕು.
  • ಮಾಸ್ಕ್ ನಿಯಮ‌ ಉಲ್ಲಂಘನೆಗೆ ದಂಡ ವಿಧಿಸುವ ಅವಕಾಶ.
  • ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಜನಸಂದಣಿ‌ ಸೇರದಂತೆ ತಡೆಯಬೇಕು.
  • ಸ್ಥಳೀಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ : Corona Cases and Lockdown News LIVE: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ: ಸಚಿವ ಡಾ. ಸುಧಾಕರ್

Published On - 6:31 pm, Tue, 23 March 21