ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ!

Citizenship Amendment Act: ಕೇಂದ್ರ ಸರ್ಕಾರವು ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಈ ಹಿಂದೆ ನೀಡಿದ್ದ ಭರವಸೆಯಂತೆ ಸಿಎಎ ಜಾರಿಗೊಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ!
ಅಮಿತ್ ಶಾImage Credit source: PTI
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 11, 2024 | 6:48 PM

ನವದೆಹಲಿ(ಮಾರ್ಚ್ 11) ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ( Citizenship Amendment Act) ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದ್ರೆ, ಇತ್ತೀಚೆಗೆ  ಸಿಎಎ ಜಾರಿಗೊಳಿಸುವುದಾಗಿ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಿಎಎ ಅಧಿಸೂಚನೆ ಹೊರಡಿಸಲಾಗಿದೆ.

2019ರ ಡಿಸೆಂಬರ್ 11ರಂದು ಸಂಸತ್​ನಲ್ಲಿ ಸಿಎಎ ಅಂಗೀಕಾರಗೊಂಡಿತ್ತು. ಇದೀಗ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಬಿದ್ದಿದ್ದು, 2014ರ ಡಿ.31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ನಿಯಮ ಅನ್ವಯವಾಗುತ್ತದೆ. ಈ ಮೊದಲು 11 ವರ್ಷ ಭಾರತದಲ್ಲೇ ನೆಲೆಸಿದವರಿಗೆ ಅವಕಾಶವಿತ್ತು. ಆದ್ರೆ, ಈಗ ತಿದ್ದುಪಡಿ ಮಾಡಿ 11 ವರ್ಷದಿಂದ ಈಗ 5 ವರ್ಷಕ್ಕೆ ಇಳಿಸಲಾಗಿದ್ದು, ಮುಸ್ಲಿಮೇತರ ವ್ಯಕ್ತಿಗಳು 6 ವರ್ಷ ಕಾಲ ಅಥವಾ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡಿದ್ದರೆ ಅಂಥವರಿಗೆ ಪೌರತ್ವ ನೀಡಲಾಗುತ್ತದೆ. ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್​, ಪಾರ್ಸಿಗಳಿಗೆ ಪೌರತ್ವ ನೀಡಲಾಗುತ್ತದೆ.

ಇದನ್ನೂ ಓದಿ: ಸಿಎಎ ಎಂದರೇನು? ಮುಸ್ಲಿಮರು ವಿರೋಧಿಸುತ್ತಿರುವುದು ಯಾಕೆ? ಎನ್​ಆರ್​ಸಿಗೂ ಅದಕ್ಕೂ ಏನು ಸಂಬಂಧ? ಇಲ್ಲಿದೆ ವಿವರ

ಹಲವೆಡೆ ಪೊಲೀಸ್ ಬಂದೋಬಸ್ತ್‌

ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿರು ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಶಾಹೀನ್ ಬಾಗ್ ಸೇರಿ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಯಾಕಂದ್ರೆ, ಸಿಎಎ ಜಾರಿಗೊಳಿಸುವ ಸಂಬಂಧ ಈ ಹಿಂದೆ ದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಇದರಿಂದ ಇದೀಗ ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ.

2019ರಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿತ್ತು. ಪ್ರತಿಪಕ್ಷಗಳು ಈ ಕಾಯ್ದೆಯನ್ನು ವಿರೋಧಿಸಿತ್ತು. ಅಲ್ಲದೇ ಭಾರತದಲ್ಲಿನ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳಲಾಗುತ್ತದೆ ಅನ್ನೋ ಉಹಾಪೋಹಗಳು ಈ ಕಾಯ್ದೆ ಜೊತೆಗೆ ಹಬ್ಬಿತ್ತು. ಹೀಗಾಗಿ ಭಾರಿ ಪ್ರತಿಭಟನೆಗಳು ದೇಶಾದ್ಯಂತ ನಡೆದಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆದರೆ ಭಾರತದಲ್ಲಿನ ಮುಸ್ಲಿಮರ ಅಥವಾ ಇನ್ಯಾವುದೇ ಸಮುದಾಯದ ನಾಗರೀತರ ಪೌರತ್ವಕ್ಕೆ ಈ ಕಾಯ್ದೆಯಿಂದ ಧಕ್ಕೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಪ್ಟಪಡಿಸಿತ್ತು.

ಪ್ರಮುಖವಾಗಿ ಈ ಕಾಯ್ದೆಯಡಿ ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಗಾನಿಸ್ತಾನದಿಂದ ಭಾರತಕ್ಕೆ 2014ರ ಡಿಸೆಂಬರ್ 31ಕ್ಕಿಂತ ಮೊದಲು ಆಗಮಿಸಿ ನೆಲೆಸಿದವರಿಗೆ ಭಾರತದ ಪೌರತ್ವ ನೀಡುವ ಕುರಿತಾಗಿದೆ. ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನ ಈ ಮೂರು ದೇಶಗಳಲ್ಲಿ ನಡೆದ ನರಮೇಧ, ದೌರ್ಜನ್ಯಗಳಿಂದ ತಪ್ಪಿಸಿಕೊಂಡು ಭಾರತಕ್ಕೆ ಬಂದು ನೆಲೆಸಿದವರಿಗೆ ಪೌರತ್ವ ನೀಡುವ ಕುರಿತು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯಲ್ಲಿ ಪ್ರಮುಖಾಗಿ ಉಲ್ಲೇಖಿಸಿರುವ ಅಂಶ, ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡುವುದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Mon, 11 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ