ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ ಸಿಬಿಐಗೆ ವರ್ಗಾವಣೆ

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ, ಬಂಧನ ಮತ್ತು ಹೇಳಿಕೆಗಳನ್ನು ದಾಖಲಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಇದು ಮೇ ಆರಂಭದಿಂದ ಜುಲೈ ಅಂತ್ಯದವರೆಗೆ ಇಲ್ಲಿ ಯಾವುದೇ ಕಾನೂನು ಇರಲಿಲ್ಲ ಎಂಬ ಭಾವನೆಯನ್ನು ಇದು ನ್ಯಾಯಾಲಯಕ್ಕೆ ನೀಡುತ್ತದೆ ಎಂದಿದೆ.

ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ ಸಿಬಿಐಗೆ ವರ್ಗಾವಣೆ
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Aug 01, 2023 | 4:37 PM

ದೆಹಲಿ ಆಗಸ್ಟ್ 01: ಮಣಿಪುರದಲ್ಲಿ (Manipur) ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು (FIR) ಕೇಂದ್ರೀಯ ತನಿಖಾ ದಳಕ್ಕೆ (CBI) ವರ್ಗಾಯಿಸಲು ಕೇಂದ್ರ ಸರ್ಕಾರ ಮಂಗಳವಾರ ಮುಂದಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಲಹ ಪೀಡಿತ ಮಣಿಪುರದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯ ಪೊಲೀಸರನ್ನು ಸುಪ್ರೀಂಕೋರ್ಟ್ (Supreme Court) ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನಂತರ ಅಂತಹ ಪ್ರಕರಣಗಳನ್ನು ಕೇಂದ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ಮುಂದಾಗಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ, ಬಂಧನ ಮತ್ತು ಹೇಳಿಕೆಗಳನ್ನು ದಾಖಲಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಇದು ಮೇ ಆರಂಭದಿಂದ ಜುಲೈ ಅಂತ್ಯದವರೆಗೆ ಇಲ್ಲಿ ಯಾವುದೇ ಕಾನೂನು ಇರಲಿಲ್ಲ ಎಂಬ ಭಾವನೆಯನ್ನು ಇದು ನ್ಯಾಯಾಲಯಕ್ಕೆ ನೀಡುತ್ತದೆ ಎಂದಿದೆ.

ನೀವು ಎಫ್‌ಐಆರ್ ದಾಖಲಿಸದೇ ಕಾನೂನು ವ್ಯವಸ್ಥೆಯನ್ನು ಸ್ಥಗಿತಗೊಳಿಸಿದ್ದೀರಿ. ಕಾನೂನು ಮತ್ತು ಸುವ್ಯವಸ್ಥೆ ಇಲ್ಲಿ ಸಂಪೂರ್ಣ ಹದಗೆಟ್ಟಿದೆ ಎಂಬ ಅಂಶವನ್ನು ಇದು ಸೂಚಿಸುವುದಿಲ್ಲವೇ? ಎಂದು ಸಿಜೆಐ ಪ್ರಶ್ನಿಸಿದ್ದಾರೆ. ದಾಖಲಾದ ಎಲ್ಲಾ ಎಫ್‌ಐಆರ್‌ಗಳು, ಒಳಗೊಂಡಿರುವ ಅಪರಾಧಗಳ ಸ್ವರೂಪ ಮತ್ತು ಮಾಡಿದ ಬಂಧನಗಳ ಬಗ್ಗೆ ಡೇಟಾವನ್ನು ಒದಗಿಸುವಂತೆ ನ್ಯಾಯಪೀಠ ಮಣಿಪುರ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಿದೆ.

ಇಬ್ಬರು ಮಹಿಳೆಯರನ್ನು ಗುಂಪೊಂದು ವಿವಸ್ತ್ರಗೊಳಿಸಿ ಪರೇಡ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ವೈರಲ್ ವಿಡಿಯೊ ಪ್ರಕರಣದಲ್ಲಿ ಸಂತ್ರಸ್ತರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ನ್ಯಾಯಾಲಯ ಸಿಬಿಐಗೆ ಅನುಮತಿ ನೀಡಿದೆ.

ಇದಕ್ಕೂ ಮೊದಲು, ಮಧ್ಯಾಹ್ನ 2 ಗಂಟೆಗೆ ಈ ವಿಷಯದ ಕುರಿತು ಅರ್ಜಿಗಳ ಒಂದು ಗುಂಪಿನ ವಿಚಾರಣೆಯನ್ನು ನಿಗದಿಪಡಿಸಲಾಗಿರುವುದರಿಂದ ಸಂತ್ರಸ್ತ ಮಹಿಳೆಯರ ಹೇಳಿಕೆಗಳನ್ನು ದಾಖಲಿಸುವುದನ್ನು ಮುಂದುವರಿಸದಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತು.

ಇದನ್ನೂ ಓದಿ: ಎಲ್ಲ ಕಡೆ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎನ್ನುವ ಮೂಲಕ ಮಣಿಪುರದಲ್ಲಿನ ಘಟನೆ ಸಮರ್ಥಿಸುವುದು ಸರಿಯಲ್ಲ: ಸುಪ್ರೀಂಕೋರ್ಟ್

ಮಣಿಪುರ ಸರ್ಕಾರವು ಮೇ ತಿಂಗಳಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡ ನಂತರ 6,523 ಎಫ್‌ಐಆರ್‌ಗಳನ್ನು ದಾಖಲಿಸಿದೆ ಎಂದು ಪೀಠಕ್ಕೆ ತಿಳಿಸಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ರಾಜ್ಯ ಪೊಲೀಸರು ‘ಶೂನ್ಯ’ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ವಿಡಿಯೊ ಪ್ರಕರಣದಲ್ಲಿ ಅಪ್ರಾಪ್ತ ಸೇರಿದಂತೆ ಏಳು ಮಂದಿಯನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಮುಂದಿನ ವಿಚಾರಣೆ ಆಗಸ್ಟ್ 7 ರಂದು ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್