ಅತಿಯಾದ ಕೆಲಸದ ಹೊರೆಯಿಂದಾಗಿ ಖಾಸಗಿ ಕಂಪನಿ ಉದ್ಯೋಗಿಯ ಸಾವಿನ ಬಗ್ಗೆ ತನಿಖೆಗೆ ಮುಂದಾದ ಸರ್ಕಾರ

ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ತಾಯಿ EY ಇಂಡಿಯಾ ಬಾಸ್ ರಾಜೀವ್ ಮೆಮಾನಿಗೆ ಇಮೇಲ್‌ ಮಾಡಿದ್ದರು. ನಮ್ಮ ಮಗಳು ಕೆಲಸಕ್ಕೆ ಸಂಬಂಧಿತ ಒತ್ತಡಕ್ಕೆ ಬಲಿಯಾಗಿಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳು ಕೇರಳದ ಚಾರ್ಟರ್ಡ್ ಅಕೌಂಟೆಂಟ್ (CA) ಆಗಿದ್ದಳು ಎಂದು ಬರೆದಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ಅತಿಯಾದ ಕೆಲಸದ ಹೊರೆಯಿಂದಾಗಿ ಖಾಸಗಿ ಕಂಪನಿ ಉದ್ಯೋಗಿಯ ಸಾವಿನ ಬಗ್ಗೆ ತನಿಖೆಗೆ ಮುಂದಾದ ಸರ್ಕಾರ
ಅನ್ನಾ ಸೆಬಾಸ್ಟಿಯನ್ ಪೆರಾಯಿಲ್
Follow us
ಸುಷ್ಮಾ ಚಕ್ರೆ
|

Updated on: Sep 19, 2024 | 5:04 PM

ಪುಣೆ: ಮಹಾರಾಷ್ಟ್ರದ ಪುಣೆಯ ಉದ್ಯೋಗಿಯ ತಾಯಿ ಅರ್ನ್ಸ್ಟ್ ಆ್ಯಂಡ್ ಯಂಗ್ ಇಂಡಿಯಾ ಮುಖ್ಯಸ್ಥರಿಗೆ ಬರೆದ ಪತ್ರವೊಂದು ವೈರಲ್ ಆದ ಬಳಿಕ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅತಿಯಾದ ಕೆಲಸದ ಒತ್ತಡದಿಂದಾಗಿ ಅರ್ನ್ಸ್ಟ್ ಮತ್ತು ಯಂಗ್ ಇಂಡಿಯಾದ 26 ವರ್ಷದ ಚಾರ್ಟರ್ಡ್ ಅಕೌಂಟೆಂಟ್ ಸಾವಿಗೀಡಾಗಿದ್ದಾರೆ ಎಂದು ಆಕೆಯ ತಾಯಿ ಆರೋಪಿಸಿದ್ದರು. ಇದೀಗ ಗಂಭೀರ ಸ್ವರೂಪವನ್ನು ತಾಳಿದ್ದು, ಇದಕ್ಕೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಪುಣೆಯ ಮಹಿಳೆಯ ತಾಯಿ ಅರ್ನ್ಸ್ಟ್ ಆ್ಯಂಡ್ ಯಂಗ್ ಇಂಡಿಯಾ ಮುಖ್ಯಸ್ಥರಿಗೆ ಬರೆದ ಪತ್ರವೊಂದು ವೈರಲ್ ಆದ ಬಳಿಕ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಕೆಲಸದೊತ್ತಡದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ತೀವ್ರ ಚರ್ಚೆ ಏರ್ಪಟ್ಟಿದೆ.

ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪುಣೆಯ ಅರ್ನ್ಸ್ಟ್ ಆ್ಯಂಡ್ ಯಂಗ್ (ಇವೈ) ಕಂಪನಿಯ 26 ವರ್ಷದ ಉದ್ಯೋಗಿಯ ಸಾವಿನ ಕುರಿತು ಕಾರ್ಮಿಕ ಸಚಿವಾಲಯವು ದೂರನ್ನು ಕೈಗೆತ್ತಿಕೊಂಡಿದೆ ಮತ್ತು ತನಿಖೆ ನಡೆಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಶೈಕ್ಷಣಿಕ ಒತ್ತಡ ತಾಳಲಾರದೇ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ

ಈ ಬಗ್ಗೆ ಕಾರ್ಮಿಕ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪದ ಬಗ್ಗೆ ಕೂಲಂಕುಷ ತನಿಖೆ ನಡೆಯುತ್ತಿದೆ.

“ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಈ ಕುರಿತು ಕಾರ್ಮಿಕ ಸಚಿವಾಲಯವು ಅಧಿಕೃತವಾಗಿ ದೂರನ್ನು ಕೈಗೆತ್ತಿಕೊಂಡಿದೆ” ಎಂದು ಶೋಭಾ ಕರಂದ್ಲಾಜೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಸಚಿವರು, ಮಹಿಳಾ ಉದ್ಯೋಗಿಯ ಸಾವು ತುಂಬಾ ದುಃಖಕರವಾಗಿದೆ. ಇದು ಹಲವು ಹಂತಗಳಲ್ಲಿ ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ. ಅರ್ನ್ಸ್ಟ್ ಮತ್ತು ಯಂಗ್ ಇಂಡಿಯಾದಲ್ಲಿ ಶೋಷಣೆಯ ಕೆಲಸದ ವಾತಾವರಣದ ಬಗ್ಗೆ ಮೃತ ಯುವತಿಯ ಕುಟುಂಬದ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

ಇದನ್ನೂ ಓದಿ: ಕೆಲಸದ ಒತ್ತಡದಿಂದಾಗಿ ಮೆಂಟಲ್ ಹೆಲ್ತ್ ಸಮಸ್ಯೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ಪುಣೆ ಮಹಿಳೆ ಈ ಬಗ್ಗೆ ಇಮೇಲ್ ಮಾಡಿದ್ದು, ನನ್ನ ಮಗಳು ಹೇಗೆ ತೀವ್ರ ಕೆಲಸದ ಒತ್ತಡದಲ್ಲಿದ್ದಳು, ಅದು ಹೇಗೆ ಅವಳ ಆರೋಗ್ಯದ ಮೇಲೆ ಪರಿಣಾಮ ಬೀರಿತು ಮತ್ತು ಅಂತಿಮವಾಗಿ ಅವಳ ಸಾವಿಗೆ ಕಾರಣವಾಯಿತು ಎಂದು ವಿವರಿಸಿದ್ದರು. ತನ್ನ ಮಗಳ ಅಂತ್ಯಕ್ರಿಯೆಯಲ್ಲಿ ಆಕೆಯ ಕಂಪನಿಯಿಂದ ಯಾರೂ ಭಾಗವಹಿಸಲಿಲ್ಲ ಎಂದು ಅವರು ಉಲ್ಲೇಖಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ