ಇತಿಹಾಸ ರಚಿಸಲು ಪ್ರಧಾನಿ ಮೋದಿ ಸಮರ್ಥರಲ್ಲ: ಮ್ಯೂಸಿಯಂ ಹೆಸರು ಬದಲಾಯಿಸಿದ್ದಕ್ಕೆ ಪ್ರತಿಪಕ್ಷಗಳ ಟೀಕೆ

ಜೂನ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಎನ್‌ಎಂಎಂಎಲ್ ಸೊಸೈಟಿ ತನ್ನ ಹೆಸರನ್ನು ಪಿಎಂಎಂಎಲ್ ಸೊಸೈಟಿ ಎಂದು ಬದಲಾಯಿಸುವ ನಿರ್ಧಾರೆ ತೆಗೆದುಕೊಳ್ಳಲಾಗಿತ್ತು. ಇದಾದ ನಂತರ ವಸ್ತುಸಂಗ್ರಹಾಲಯವನ್ನು ಅಧಿಕೃತವಾಗಿ ಆಗಸ್ಟ್ 14 ರಂದು ಮರುನಾಮಕರಣ ಮಾಡಲಾಯಿತು. ಈ ವಸ್ತುಸಂಗ್ರಹಾಲಯವು ತೀನ್ ಮೂರ್ತಿ ಭವನದಲ್ಲಿದೆ. ಇದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿದೆ.

ಇತಿಹಾಸ ರಚಿಸಲು ಪ್ರಧಾನಿ ಮೋದಿ ಸಮರ್ಥರಲ್ಲ: ಮ್ಯೂಸಿಯಂ ಹೆಸರು ಬದಲಾಯಿಸಿದ್ದಕ್ಕೆ ಪ್ರತಿಪಕ್ಷಗಳ ಟೀಕೆ
ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ
Follow us
ರಶ್ಮಿ ಕಲ್ಲಕಟ್ಟ
|

Updated on:Aug 16, 2023 | 6:45 PM

ದೆಹಲಿ ಆಗಸ್ಟ್ 16: ಇತಿಹಾಸ ರಚಿಸುವ ಅಗತ್ಯವಿದೆ, ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಅದನ್ನು ರಚಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ. ಕೇಂದ್ರ ಸರ್ಕಾರವು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು (NMML) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಎಂದು ಮರುನಾಮಕರಣ ಮಾಡಿದ ನಂತರ ಸುಪ್ರಿಯಾ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಅದೇ ವೇಳೆ ನೆಹರೂಗೆ ಸಮರ್ಪಿತವಾದ ಯಾವುದನ್ನಾದರೂ ಕೀಳಾಗಿ ನೋಡುವುದು ಅಥವಾ ಹೆಸರು ಬದಲಾಯಿಸುವ ರಾಜಕೀಯ ಮಾಡುವುದನ್ನು ಬಿಡಿ ಎಂದು ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಪಂಡಿತ್ ನೆಹರು ಆಧುನಿಕ ಭಾರತವನ್ನು ನಿರ್ಮಿಸಿದರು ಮತ್ತು ಅಡಿಪಾಯ ಹಾಕಿದರು. ಅವರು ಈ ದೇಶದಲ್ಲಿ ಉದಾರವಾದಿ ಪ್ರಜಾಪ್ರಭುತ್ವವನ್ನು ಜೀವಂತವಾಗಿಟ್ಟ ಐಐಎಂಗಳು, ಏಮ್ಸ್, ಐಐಟಿಗಳು, ಇಸ್ರೋ ಮತ್ತು ಸಂಸ್ಥೆಗಳನ್ನು ನಿರ್ಮಿಸಿದರು. ಆದರೆ ಪ್ರಧಾನಿ ಮೋದಿ ಇತಿಹಾಸದಲ್ಲಿ ಬಹಳ ನಕಾರಾತ್ಮಕವಾಗಿ ನೆನಪಿಸಿಕೊಳ್ಳುತ್ತಾರೆ ಎಂದು ಅವರು ಸುದ್ದಿ ಸಂಸ್ಥೆ ಪಿಟಿಐ ಜತೆ ಮಾತನಾಡಿದ ಸುಪ್ರಿಯಾ ಹೇಳಿದ್ದಾರೆ.

ಜೂನ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಎನ್‌ಎಂಎಂಎಲ್ ಸೊಸೈಟಿ ತನ್ನ ಹೆಸರನ್ನು ಪಿಎಂಎಂಎಲ್ ಸೊಸೈಟಿ ಎಂದು ಬದಲಾಯಿಸುವ ನಿರ್ಧಾರೆ ತೆಗೆದುಕೊಳ್ಳಲಾಗಿತ್ತು. ಇದಾದ ನಂತರ ವಸ್ತುಸಂಗ್ರಹಾಲಯವನ್ನು ಅಧಿಕೃತವಾಗಿ ಆಗಸ್ಟ್ 14 ರಂದು ಮರುನಾಮಕರಣ ಮಾಡಲಾಯಿತು. ಈ ವಸ್ತುಸಂಗ್ರಹಾಲಯವು ತೀನ್ ಮೂರ್ತಿ ಭವನದಲ್ಲಿದೆ. ಇದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿದೆ.

ಮ್ಯೂಸಿಯಂ ಹೆಸರನ್ನು ಅಧಿಕೃತವಾಗಿ ಬದಲಾಯಿಸಿದ ನಂತರ ರಾಜಕೀಯ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್, ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೆಹರೂ ಪರಂಪರೆಯನ್ನು ನಿರಾಕರಿಸುವ, ವಿರೂಪಗೊಳಿಸುವ, ಮಾನಹಾನಿ ಮಾಡುವ ಮತ್ತು ನಾಶಪಡಿಸುವ ಕಾರ್ಯಸೂಚಿಯನ್ನು ಮಾತ್ರ ಹೊಂದಿದೆ ಎಂದು ಕಾಂಗ್ರೆಸ್ ಹೇಳಿದೆ.

ತೀನ್ ಮೂರ್ತಿ ಭವನ ಇತರ ಪ್ರಧಾನಿಗಳ ನಿವಾಸವಾಗಿರಲಿಲ್ಲ. ಇದು ಒಂದು ಐತಿಹಾಸಿಕ ಸ್ಥಳವಾಗಿದ್ದು, ನೆಹರೂ ಅವರು ದೇಶ ವಿಭಜನೆಯಿಂದ ಅವರು ಸಾಯುವವರೆಗೂ ಅಲ್ಲೇ ಇದ್ದರು. ಜವಾಹರಲಾಲ್ ನೆಹರು ಅವರು ದೇಶದ ಮಣ್ಣಿನಲ್ಲಿರುವುದರಿಂದ ಕೇಂದ್ರ ಸರ್ಕಾರಕ್ಕೆ ಅವರನ್ನು ಅಳಿಸಲು ಸಾಧ್ಯವಿಲ್ಲ ಎಂದು ಆರ್‌ಜೆಡಿ ನಾಯಕ ಮನೋಜ್ ಝಾ ಹೇಳಿದ್ದಾರೆ.

ಇದಕ್ಕೂ ಮೊದಲು, ಮ್ಯೂಸಿಯಂನ ಉನ್ನತ ಅಧಿಕಾರಿಗಳು ನೆಹರೂ ಪ್ರಶ್ನೆಯನ್ನು ಹೇಗೆ ನಿರ್ವಹಿಸಿದ್ದಾರೆ ಎಂಬುದನ್ನು ನೋಡಲು ಈ ಕ್ರಮವನ್ನು ಟೀಕಿಸಿದವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದರು. ಮ್ಯೂಸಿಯಂನ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷ ಎ ಸೂರ್ಯ ಪ್ರಕಾಶ್ ಅವರು NMML ಮತ್ತು PMML ನಡುವೆ ವ್ಯತ್ಯಾಸವನ್ನು ತೋರಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಯಾವ ರೀತಿಯಲ್ಲಿ ಉಲ್ಲೇಖಿಸಬಾರದು ಎಂದು ನ್ಯಾಯಾಧೀಶರಿಗೆ ಸುಪ್ರೀಂಕೋರ್ಟ್ ಕೈಪಿಡಿ

ನೀವು ನೆಹರೂ ಮ್ಯೂಸಿಯಂ ಅನ್ನು ಈ ಹಿಂದೆ ನೋಡಿದ್ದರೆ, ಹಲವು ವರ್ಷಗಳ ಕಾಲ ಸಂಸ್ಥೆಯ ಉಸ್ತುವಾರಿ ವಹಿಸಿದ್ದ ನೆಹರು-ಗಾಂಧಿ ಕುಟುಂಬವು ಆ ವಸ್ತುಸಂಗ್ರಹಾಲಯವನ್ನು ಹೇಗೆ ನಿರ್ವಹಿಸಿದ್ದರು ಎಂಬ ಕಲ್ಪನೆ ನಿಮಗೆ ಬರುತ್ತದೆ. ನಾವು ಅದರ ಬಗ್ಗೆ ಯೋಚಿಸಿದರೆ, ಅವರು ನೆಹರೂ ಜಿಯನ್ನು ಯಾವ ರೀತಿಯ ಚಿಂತನೆಯನ್ನು ಹೊಂದಿದ್ದಾರೆ ಎಂಬುದಕ್ಕೆ ಇದು ನಿಮಗೆ ಕಲ್ಪನೆಯನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Wed, 16 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್