AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ವಿತರಣೆಗೆ ಸರ್ಕಾರದಿಂದ ಮಾರ್ಗಸೂಚಿ; ಆನ್​ಲೈನ್​ ನೋಂದಣಿಗೆ ಅವಕಾಶ

 ಪ್ರತಿಯೊಂದು ಕೇಂದ್ರದಲ್ಲಿ 100 ರಿಂದ 200 ಜನರಿಗೆ ಮಾತ್ರ ಲಸಿಕೆ ನೀಡಬೇಕು. ಲಸಿಕೆ ನೀಡಿದ ಬಳಿಕ ಪ್ರತಿಕೂಲ ಪರಿಣಾಮ ಆಗುತ್ತೆಯೇ ಎಂದು ತಿಳಿಯಲು ಆ ವ್ಯಕ್ತಿಗಳನ್ನು 30 ನಿಮಿಷಗಳ ಕಾಲ ಮಾನಿಟರ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.

ಕೊರೊನಾ ಲಸಿಕೆ ವಿತರಣೆಗೆ ಸರ್ಕಾರದಿಂದ ಮಾರ್ಗಸೂಚಿ; ಆನ್​ಲೈನ್​ ನೋಂದಣಿಗೆ ಅವಕಾಶ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 14, 2020 | 8:12 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಡಿಸಿಜಿಐ ಲಸಿಕೆಯನ್ನು ತುರ್ತು ಬಳಕೆ ಮಾಡಲು ಒಪ್ಪಿಗೆ ನೀಡಿದೆ. ಇದಾದ ಬೆನ್ನಲ್ಲೇ ಲಸಿಕೆಯನ್ನು ಜನರಿಗೆ ನೀಡಲು ಬೇಕಾದ ಎಲ್ಲ ಸಿದ್ಧತೆಗಳನ್ನು ಸರ್ಕಾರ ನಡೆಸಿದೆ. ಲಸಿಕೆಯನ್ನು ನೀಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೆ ಕಳುಹಿಸಿದೆ.

ದೇಶದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಒಪ್ಪಿಗೆ ಸಿಗುತ್ತಿದ್ದಂತೆ, ಜನರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ಇಂದು ಎಲ್ಲ ರಾಜ್ಯಗಳಿಗೂ ಲಸಿಕೆ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದೆ. ಕೇಂದ್ರದ ಮಾರ್ಗಸೂಚಿಯಲ್ಲಿರುವ ಪ್ರಮುಖ ಅಂಶಗಳ ವಿವರ ಇಲ್ಲಿದೆ.

ಮಾರ್ಗಸೂಚಿಯಲ್ಲೇನಿದೆ?

ಆದ್ಯತೆಯ ಜನವರ್ಗಕ್ಕೆ ಮೊದಲಿಗೆ ಲಸಿಕೆ ನೀಡಬೇಕು ಎಂದು ಸರ್ಕಾರ ಹೇಳಿದೆ. ಕೊರೊನಾ ವಾರಿಯರ್ಸ್​​ಗಳಾದ ವೈದ್ಯರು, ನರ್ಸ್​​ಗಳಿಗೆ ಮೊದಲಿಗೆ ಲಸಿಗೆ ನೀಡಬೇಕು. ಬಳಿಕ ಅಗತ್ಯ ಸೇವೆ ನೀಡುವವರಿಗೆ, 50 ವರ್ಷ ಮೇಲ್ಪಟ್ಟವರಿಗೆ ಹಾಗೂ ನಾಲ್ಕನೆಯದಾಗಿ 50 ವರ್ಷ ಕೆಳಗಿದ್ದು ಸೋಂಕಿನಿಂದ ಗಂಭೀರವಾದವರಿಗೆ ಲಸಿಕೆ ನೀಡಬೇಕು ಎಂದು ಸರ್ಕಾರ ಹೇಳಿದೆ.

ಪ್ರತಿಯೊಂದು ಕೇಂದ್ರದಲ್ಲಿ 100 ರಿಂದ 200 ಜನರಿಗೆ ಮಾತ್ರ ಲಸಿಕೆ ನೀಡಬೇಕು. ಲಸಿಕೆ ನೀಡಿದ ಬಳಿಕ ಪ್ರತಿಕೂಲ ಪರಿಣಾಮ ಆಗುತ್ತೆಯೇ ಎಂದು ತಿಳಿಯಲು ಆ ವ್ಯಕ್ತಿಗಳನ್ನು 30 ನಿಮಿಷಗಳ ಕಾಲ ಮಾನಿಟರ್ ಮಾಡಬೇಕು. ಲಸಿಕೆ ನೀಡುವವರ ತಂಡದಲ್ಲಿ 5 ಜನರಿರುತ್ತಾರೆ. ಲಸಿಕೆ ನೀಡುವ ಸ್ಥಳದಲ್ಲಿ ಓಡಾಟಕ್ಕೆ ವಾಹನ ವ್ಯವಸ್ಥೆ, ಜನರ ನಿಗಾ ಕೊಠಡಿ, ನಿರೀಕ್ಷಣಾ ಕೊಠಡಿ ಸೇರಿದಂತೆ ಸೌಲಭ್ಯ ಇದ್ದರೆ 200 ಜನರಿಗೆ ಲಸಿಕೆ ನೀಡಬಹುದು ಎಂದು ಸರ್ಕಾರ ತಿಳಿಸಿದೆ.

ಆನ್​ಲೈನ್​ ಮೂಲಕ ನೋಂದಣಿ ಸಾಧ್ಯ ಕೋವಿಡ್​​ ಆನ್​ಲೈನ್​ ಫ್ಲಾಟ್​ಫಾರ್ಮ್​ನಲ್ಲಿ ಜನರು ತಾವಾಗಿಯೇ ರಿಜಿಸ್ಟರ್ ಮಾಡಿಕೊಳ್ಳಲು ಮತದಾನ ಚೀಟಿ, ಆಧಾರ್ ಕಾರ್ಡ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ 12 ಪೋಟೋ ಐಡಿ ಕಾರ್ಡ್ ಬಳಸಬಹುದು. ಕೊರೊನಾ ಲಸಿಕೆ ನೀಡುವ ಸ್ಥಳದಲ್ಲಿ ಈ ಮೊದಲೇ ನೋಂದಣಿ ಮಾಡಿಸಿರುವರಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ವ್ಯಾಕ್ಸಿನ್ ಸಾಗಾಟ ಸಾಮಗ್ರಿಗಳು, ಐಸ್ ಪ್ಯಾಕ್ ಗಳ ಮೇಲೆ ಸೂರ್ಯನ ಕಿರಣ ಬೀಳದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ.

ಕಂಪನಿಯ ಲಸಿಕೆಯ ಪ್ರತಿ ಡೋಸ್ ಗೆ 2,700 ರೂಪಾಯಿ ವೆಚ್ಚವಾಗಲಿದೆ. 138 ಕೋಟಿ ಜನರಿರುವ ಭಾರತದಲ್ಲಿ ಪ್ರತಿ ಡೋಸ್ ಅನ್ನು 2,700  ರೂಪಾಯಿಗೆ ಖರೀದಿಸುವುದು ದುಬಾರಿಯಾಗಲಿದೆ . ಆಕ್ಸ್ ಫರ್ಡ್ ವಿವಿ-ಅಸ್ಟ್ರಾಜನಿಕ್ ಕಂಪನಿಯ ಕೋವಿಶೀಲ್ಡ್ ಲಸಿಕೆಯು ಪ್ರತಿ ಡೋಸ್ ಗೆ 250 ರೂಪಾಯಿಗೆ ಸಿಗಲಿದೆ. ಹೀಗಾಗಿ ಕೇಂದ್ರ ಸರ್ಕಾರವು ಕೋವಿಶೀಲ್ಡ್ ಲಸಿಕೆ ಖರೀದಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ.

– ಚಂದ್ರ ಮೋಹನ್​

ಅಗತ್ಯ ಸೇವಕರು, ವಯಸ್ಸಾದವರಿಗೆ ಮೊದಲು ಕೊರೊನಾ ವೈರಸ್ ಲಸಿಕೆ- ಪ್ರಧಾನಿ ಮೋದಿ

Published On - 8:09 pm, Mon, 14 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ