ತೆಲಂಗಾಣದಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಮೋದಿ ಸರ್ಕಾರ ಬದ್ಧ: ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ

ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ರಾಜ್ಯದಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ.

ತೆಲಂಗಾಣದಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಮೋದಿ ಸರ್ಕಾರ ಬದ್ಧ: ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ
ಜಿ ಕಿಶನ್ ರೆಡ್ಡಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 14, 2022 | 10:42 PM

ತೆಲಂಗಾಣ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ತೆಲಂಗಾಣ ರಾಜ್ಯದಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ (kishan reddy) ಹೇಳಿದ್ದಾರೆ.

ಈ ಕುರಿತು ಇಂದು (ಡಿ.14) ಮಾತನಾಡಿದ ಅವರು ಹೈದರಾಬಾದ್​ ಬಳಿಯ ಬೀಬಿನಗರದಲ್ಲಿ 1,028 ಕೋಟಿ ರೂ ವೆಚ್ಚದಲ್ಲಿ ಆಲ್​ ಇಂಡಿಯಾ ಇನ್ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸ್ (AIIMS) ಸ್ಥಾಪಿಸಲು ನಿರ್ಧರಿಸಲಾಗಿದೆ. ಈಗಾಗಲೆ 800 ಕೋಟಿ ರೂ ಮೊತ್ತದ ಕಾಮಗಾರಿ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಏಮ್ಸ್​ 720 ಹಾಸಿಗೆಯ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ, 30 ಹಾಸಿಗೆ ಆಯುಷ್​ ಆಸ್ಪತ್ರೆ, ಎಂಬಿಬಿಎಸ್ (MBBS)​ ಮತ್ತು ನರ್ಸಿಂಗ್​ ವಿದ್ಯಾರ್ಥಿಗಳಿಗಾಗಿ (Nursing Students) ಕಾಲೇಜು, ವಸತಿ ನಿಲಯ, ಸಿಬ್ಬಂದಿ ಕ್ವಾರ್ಟರ್ಸ್ ನಿರ್ಮಾಣವಾಗಲಿದೆ. ಜೊತೆಗೆ 650 ಆಸನಗಳು ಹೊಂದಿರುವ ಸಭಾಂಗಣ, ಕಾನ್ಫರೆನ್ಸ್​​ ಹಾಲ್​​, ಹೊರ ರೋಗಿಗಳ ವಿಭಾಗ (OPD) ತಯಾರಾಗುತ್ತದೆ. ಈಗ ವಿದ್ಯಾರ್ಥಿಗಳಿಗಾಗಿ ತರಗತಿಗಳು ಮತ್ತು ಸಾರ್ವಜನಿಕರಿಗಾಗಿ ಹೊರ ರೋಗಿಗಳ ವಿಭಾಗ ಕಾರ್ಯಾರಂಭ ಮಾಡಿದೆ ಎಂದರು.

ಇದನ್ನೂ ಓದಿ: 2023ರ ಮೊದಲ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಕೈಬಿಡಲು ಕೇರಳ ಸಚಿವ ಸಂಪುಟ ನಿರ್ಧಾರ

ಸನತ್ ನಗರದ ಇಎಸ್‌ಐಸಿ ಆಸ್ಪತ್ರೆಯಲ್ಲಿ ಹೊಸ ಒಪಿಡಿ ನಿರ್ಮಾಣ ಮತ್ತು ಸುಧಾರಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು 1,032 ಕೋಟಿ ರೂ.ಗಳನ್ನು ನೀಡಲಾಗುವುದು. ಮತ್ತು ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಆದಿಲಾಬಾದ್‌ನ ರಿಮ್ಸ್ ಮತ್ತು ವಾರಂಗಲ್‌ನ ಕಾಕತೀಯ ವೈದ್ಯಕೀಯ ಕಾಲೇಜಿಗೆ ಪ್ರತಿ 120 ಕೋಟಿ ರೂ.ನಂತೆ ಒಟ್ಟು 240 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ವೈದ್ಯಕೀಯ ಆಸ್ಪತ್ರೆ, ಆಪರೇಷನ್ ಥಿಯೇಟರ್‌ಗಳು ಮತ್ತು ತೀವ್ರ ನಿಗಾ ಘಟಕಗಳಂತಹ ಸುಧಾರಿತ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗಿದೆ. ಹಾಗೇ 150 ರಿಂದ 250 ಹೆಚ್ಚುವರಿ ಹಾಸಿಗೆಗಳ, 8 ರಿಂದ 10 ಸೂಪರ್ ಸ್ಪೆಷಾಲಿಟಿ ವಿಭಾಗಗಳು ಮತ್ತು ಸುಮಾರು 15 ಹೆಚ್ಚುವರಿ ಪಿಜಿ ಸೀಟುಗಳ ಹಂಚಿಕೆಯನ್ನು ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೋರ್ಟ್ ಆದೇಶವರೆಗೂ ಯಾವುದೇ ನಿರ್ಧಾರ ಸಾಧ್ಯವಿಲ್ಲ ಎಂದ ಅಮಿತ್ ಶಾ

ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸುಧಾರಣೆಗೆ ಕ್ರಮಕೈಗೊಳ್ಳಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 902 ಕೋಟಿ ವೆಚ್ಚದಲ್ಲಿ ತೆಲಂಗಾಣ ರಾಜ್ಯದಾದ್ಯಂತ 4,549 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಥವಾ ಮೇಲ್ದರ್ಜೆಗೇರಿಸಲಾಗಿದೆ. ಇವುಗಳಲ್ಲಿ 418 ಆಯುಷ್, 3,035 ಉಪ ಆರೋಗ್ಯ ಕೇಂದ್ರಗಳು, 636 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಅಥವಾ ಮೇಲ್ದರ್ಜೆಗೇರಿಸಲಾಗಿದೆ. ಹೆಚ್ಚುವರಿಯಾಗಿ, 230 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 230 ಬಸ್ತಿ ದವಾಖಾನೆಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. COVID-19 ಸಮಯದಲ್ಲಿ ಆಮ್ಲಜನಕದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, PMCARES ನಿಧಿಯ ಮೂಲಕ ರಾಜ್ಯದಾದ್ಯಂತ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 50 ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗಿದೆ. ಸ್ವಚ್ಛ ಭಾರತ ಕಾರ್ಯಕ್ರಮದ ಅಂಗವಾಗಿ ತೆಲಂಗಾಣ ರಾಜ್ಯದಾದ್ಯಂತ 31.2 ಲಕ್ಷ ಶೌಚಾಲಯಗಳನ್ನು ರೂ.3,744 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Wed, 14 December 22

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು