ರಾಷ್ಟ್ರಾದ್ಯಂತ ಎನ್​ಆರ್​ಸಿ ಜಾರಿ ಬಗ್ಗೆ ತೀರ್ಮಾನ ಮಾಡಿಲ್ಲ; ಸಂಸತ್​ಗೆ ಕೇಂದ್ರ ಸರ್ಕಾರ ಮಾಹಿತಿ

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಲ್ಲಿದೆ. ಕಾಯ್ದೆಯ ಹೊಸ ನಿಯಮಗಳು ಸಿದ್ಧವಾದ ನಂತರ ಅರ್ಹ ಜನರು ಪೌರತ್ವ ಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಇಂದು ಹೇಳಿದೆ.

ರಾಷ್ಟ್ರಾದ್ಯಂತ ಎನ್​ಆರ್​ಸಿ ಜಾರಿ ಬಗ್ಗೆ ತೀರ್ಮಾನ ಮಾಡಿಲ್ಲ; ಸಂಸತ್​ಗೆ ಕೇಂದ್ರ ಸರ್ಕಾರ ಮಾಹಿತಿ
ಗೃಹ ಸಚಿವ ಅಮಿತ್ ಶಾ (ಸಂಗ್ರಹ ಚಿತ್ರ)
Edited By:

Updated on: Nov 30, 2021 | 6:17 PM

ನವದೆಹಲಿ: ಭಾರತದಲ್ಲಿ ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆಯು ಜಾರಿಯಲ್ಲಿದೆ ಎಂದು ಕೇಂದ್ರದ ಗೃಹ ಇಲಾಖೆಯು ಹೇಳಿದೆ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗೆ ಅಗತ್ಯವಾದ ನಿಯಮಗಳನ್ನು ರಚಿಸುವುದು ಮಾತ್ರ ಬಾಕಿ ಇದೆ. ನಿಯಮಗಳು ರಚನೆಯಾದ ಬಳಿಕ ಅರ್ಹ ಜನರು ಭಾರತದ ಪೌರತ್ವ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಇದೆ. ಇನ್ನೂ ರಾಷ್ಟ್ರವ್ಯಾಪಿ ಎನ್‌.ಆರ್‌.ಸಿ. ಜಾರಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಇಲಾಖೆ ಹೇಳಿದೆ.

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಲ್ಲಿದೆ. ಕಾಯ್ದೆಯ ಹೊಸ ನಿಯಮಗಳು ಸಿದ್ಧವಾದ ನಂತರ ಅರ್ಹ ಜನರು ಪೌರತ್ವ ಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಇಂದು ಹೇಳಿದೆ. ಕೇಂದ್ರ ಗೃಹ ಸಚಿವಾಲಯವು CAA ಕುರಿತ ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ಸಿಎಎಯ ನಿಯಮಗಳು ಸಿದ್ಧವಾಗುವ ದಿನಾಂಕವನ್ನು ಸ್ಪಷ್ಟಪಡಿಸಿಲ್ಲ. ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ, 2019 (CAA) ಅನ್ನು 12 ಡಿಸೆಂಬರ್ 2019ರಂದು ಅಧಿಸೂಚನೆ ಹೊರಡಿಸಲಾಗಿದೆ. 10 ಜನವರಿ 2020ರಿಂದ ಪೌರತ್ವ ತಿದ್ದುಪಡಿ ಕಾಯ್ದೆ ದೇಶದಲ್ಲಿ ಜಾರಿಗೆ ಬಂದಿದೆ. CAA ಅಡಿಯಲ್ಲಿ ಒಳಗೊಳ್ಳುವ ವ್ಯಕ್ತಿಗಳು CAA ಅಡಿಯಲ್ಲಿ ನಿಯಮಗಳನ್ನು ರಚಿಸಿದ ನಂತರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್‌ಗೆ ತಿಳಿಸಿದೆ.

ರಾಷ್ಟ್ರೀಯವಾಗಿ ಎನ್‌ಆರ್‌ಐಸಿ ಅನುಷ್ಠಾನದ ಕುರಿತು ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಉತ್ತರಿಸಿದ ಕೇಂದ್ರ ಗೃಹ ಇಲಾಖೆಯು ಇಲ್ಲಿಯವರೆಗೆ ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ತಯಾರಿಸಲು ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅಸ್ಸಾಂಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಎನ್‌ಆರ್‌ಸಿಯಲ್ಲಿ ಸೇರ್ಪಡೆಗಳ ಪೂರಕ ಪಟ್ಟಿ ಮತ್ತು ಆನ್‌ಲೈನ್ ಕುಟುಂಬವಾರು ಹೊರಗಿಡುವ ಪಟ್ಟಿಯ ಹಾರ್ಡ್ ಪ್ರತಿಗಳನ್ನು ಆಗಸ್ಟ್ 31, 2019ರಂದು ಪ್ರಕಟಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 1,33,83,718 ಭಾರತೀಯ ಪ್ರಜೆಗಳು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಆನ್‌ಲೈನ್ ಪೌರತ್ವ ಮಾಡ್ಯೂಲ್‌ನಿಂದ ಪಡೆಯಲಾದ ಡೇಟಾ ಪ್ರಕಾರ ಒಟ್ಟಾರೆ 4,177 ಜನರಿಗೆ ಭಾರತೀಯ ಪೌರತ್ವವನ್ನು ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಇದನ್ನೂ ಓದಿ: Parliament Winter Session: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾಶ್ಮೀರ, ಸಿಎಎ, ಎನ್ಆರ್‌ಸಿ ಬಗ್ಗೆ ಸಂಸದರಿಂದ ಪ್ರಶ್ನೆಗಳ ಸುರಿಮಳೆ

ಬಾಂಗ್ಲಾದೇಶಿ ಹಿಂದೂಗಳನ್ನು ರಕ್ಷಿಸಲು ಸಿಎಎಗೆ ತಿದ್ದುಪಡಿ ಮಾಡಿ: ಕಾಂಗ್ರೆಸ್ ನಾಯಕ ಮಿಲಿಂದ್ ದೆವರಾ

Published On - 6:16 pm, Tue, 30 November 21