Delhi chalo: ನಾಳೆ ಕೇಂದ್ರ ಸರ್ಕಾರದ ಜತೆ ರೈತ ಒಕ್ಕೂಟಗಳ ಇನ್ನೊಂದು ಸುತ್ತಿನ ಸಭೆ
ಕೇಂದ್ರ ಸರ್ಕಾರ ರೈತ ನಾಯಕರ ಜತೆ ಮುಕ್ತ ಮನಸ್ಸಿನಿಂದ ಚರ್ಚಿಸಲು ಸಿದ್ಧವಿದೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ನಾಳೆ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುವ ಕುರಿತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ರೈತ ನಾಯಕರ ಜತೆ ಮುಕ್ತ ಮನಸ್ಸಿನಿಂದ ಚರ್ಚಿಸಲು ಸಿದ್ಧವಿದೆ ಎಂದು ಅವರು ಪುನರುಚ್ಛರಿಸಿದ್ದಾರೆ. ನಾಳೆಯ ಸಭೆಗೆ ರೈತ ಸಂಘಟನೆಗಳು ಸಹ ಹಾಜರಾಗಲಿವೆ ಎಂದು ತಿಳಿದುಬಂದಿದೆ. ಸರ್ವೋಚ್ಛ ನ್ಯಾಯಾಲಯ ರಚಿಸಿದ ಸಮಿತಿಯೆದುರು ಹಾಜರಾಗುವ ಕುರಿತು ಅಪಸ್ವರ ತಳೆದಿರುವ ರೈತ ಒಕ್ಕೂಟಗಳು ಕೇಂದ್ರ ಸರ್ಕಾರದ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಹೆಚ್ಚಿದೆ.
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಏಕೆ ಪ್ರತಿಷ್ಠೆಯ ವಿಷಯವಾಗಿಸಿಕೊಂಡಿದೆ ಎಂದು ಅರ್ಥವಾಗುತ್ತಿಲ್ಲ. ಸರ್ಕಾರ ಕಾಯ್ದೆ ತಡೆಹಿಡಿಯದಿದ್ದರೇ, ನ್ಯಾಯಾಲಯವೇ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಲಿದೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬಡೆ ನೇತೃತ್ವದ ಸುಪ್ರೀಂ ನ್ಯಾಯಪೀಠ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಪ್ರತಿಭಟನೆಯಲ್ಲಿ ಹಿರಿಯ ನಾಗರಿಕರು ಮತ್ತು ಮಹಿಳೆಯರು ಸಹ ಭಾಗವಹಿಸುತ್ತಿದ್ದಾರೆ. ಕಳೆದ ಬಾರಿ ಸರ್ಕಾರವನ್ನು ಇದೇ ವಿಷಯದ ಕುರಿತು ಪ್ರಶ್ನಿಸಿದರೂ ಉತ್ತರ ಬಂದಿಲ್ಲ. ಈಗ ಪರಿಸ್ಥಿತಿ ಬಿಗಡಾಯಿಸುತ್ತಿದೆ, ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಚಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಜಾರಿಗೊಳಿಸದೇ ಇದ್ದರೆ ಏನಾಗಲಿದೆ ಎಂದು ನ್ಯಾಯಾಲಯಕ್ಕೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ಕೇಂದ್ರ ಸರ್ಕಾರದ ಕಿವಿ ಹಿಂಡಿತ್ತು.
ಸಭೆ ನಡೆಯಲಿರುವ ಹಿಂದಿನ ದಿನ ಸರ್ವೋಚ್ಛ ನ್ಯಾಯಾಲಯ ರೂಪಿಸಿದ್ದ ಸಮಿತಿಗೆ ಭೂಪೇಂದರ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ.
ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ಕ್ಕೆ ಬೃಹತ್ ಚಳುವಳಿ ನಡೆಸಲಾಗುವುದು : ಡಿ.ಕೆ.ಶಿವಕುಮಾರ್
Published On - 7:49 pm, Thu, 14 January 21