Cyclone Remal: ‘ರೆಮಲ್’ ಸೈಕ್ಲೋನ್ ಎದುರಿಸಲು ಕೇಂದ್ರ ಸರ್ಕಾರ ಸನ್ನದ್ಧ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
‘ರೆಮಲ್’ ಸೈಕ್ಲೋನ್ ಆರ್ಭಟಕ್ಕೆ ಬ್ರೇಕ್ ಹಾಕಲು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸಹ ರೆಮಲ್ ಚಂಡಮಾರುತದ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯಗಳು, ಕೇಂದ್ರ ಸಚಿವಾಲಯಗಳು ರೆಮಲ್ ಚಂಡಮಾರುತವನ್ನು ಎದುರಿಸಲು ಯಾವೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.
ದೆಹಲಿ, ಮೇ 26: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ರೆಮಲ್’ (Remal) ಚಂಡಮಾರುತ ಇಂದು ಪಶ್ಚಿಮ ಬಂಗಾಳ ಸೇರಿ ಈಶಾನ್ಯ ರಾಜ್ಯಗಳ ಕರಾವಳಿ ತೀರಗಳಿಗೆ ಲಗ್ಗೆ ಇಡಲಿದೆ. ‘ರೆಮಲ್’ ಸೈಕ್ಲೋನ್ ಆರ್ಭಟಕ್ಕೆ ಬ್ರೇಕ್ ಹಾಕಲು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ (Narendra Modi) ಸಹ ರೆಮಲ್ ಚಂಡಮಾರುತದ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ರಕ್ಷಣಾ ಪಡೆ ಮಾಡಿಕೊಂಡಿರುವ ಸಿದ್ದತೆ ಬಗ್ಗೆ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ.
ರೆಮಲ್ ಚಂಡಮಾರುತ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ಮಾಡಿರುವ ಪ್ರಧಾನಿ ಮೋದಿ, ರಾಜ್ಯಗಳು, ಕೇಂದ್ರ ಸಚಿವಾಲಯಗಳು ರೆಮಲ್ ಚಂಡಮಾರುತವನ್ನು ಎದುರಿಸಲು ಯಾವೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.
ಎಎನ್ಐ ಟ್ವೀಟ್
#WATCH | PM Narendra Modi chairs a meeting to review response and preparedness for Cyclone Remal
Cyclone Remal is to make landfall today, at midnight between Bangladesh and adjoining West Bengal coasts, as per IMD. pic.twitter.com/47KsrXOxc9
— ANI (@ANI) May 26, 2024
ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ವಿದ್ಯುತ್, ದೂರಸಂಪರ್ಕ, ಆರೋಗ್ಯ, ಕುಡಿಯುವ ನೀರು ಮುಂತಾದ ಎಲ್ಲಾ ಅಗತ್ಯ ಸೇವೆಗಳನ್ನು ಯಾವುದೇ ಅಡಚಣೆಯ ಸಂದರ್ಭದಲ್ಲಿ ತಕ್ಷಣವೇ ಜಾರಿಗೆ ಬರುತ್ತವೆ ಸೂಚನೆ ನೀಡಿದ್ದಾರೆ. ಅಗತ್ಯ ಔಷಧಗಳು ಸಂಗ್ರಹಣೆ ಸೇರಿದಂತೆ ನಿಯಂತ್ರಣ ಕೊಠಡಿಗಳು 24X7 ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Remal Cyclone: ಇಂದು ಬಂಗಾಳದ ಕರಾವಳಿಗೆ ಅಪ್ಪಳಿಸಲಿದೆ ರೆಮಲ್ ಚಂಡಮಾರುತ, ವಿಮಾನಗಳ ಹಾರಾಟ ಸ್ಥಗಿತ
ಇಂದು ಮಧ್ಯರಾತ್ರಿ ಕರಾವಳಿಗೆ ಅಪ್ಪಳಿಸಲಿರುವ ‘ರೆಮಲ್’ ಚಂಡಮಾರುತ, ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳ ಮಧ್ಯೆ ಹಾದುಹೋಗಲಿದೆ. ಗಂಟೆಗೆ 110ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸೈಕ್ಲೋನ್ ಅಪ್ಪಳಿಸುವ ಮುನ್ನ ಈಶಾನ್ಯ ರಾಜ್ಯಗಳಾದ ಒಡಿಶಾ, ಮಿಜೋರಾಂ, ತ್ರಿಪುರಾ, ಮೇಘಾಲಯ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ದಕ್ಷಿಣ ಮಣಿಪುರದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ: Cyclone Remal: ರೆಮಲ್ ಚಂಡಮಾರುತ; ಭಾನುವಾರ ಮಧ್ಯಾಹ್ನದಿಂದ ಕೊಲ್ಕತ್ತಾ ವಿಮಾನ ನಿಲ್ದಾಣ ಬಂದ್
ರೆಮಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೂ ಆಗಿದೆ. ಸೈಕ್ಲೋನ್‌ನಿಂದ ಪೂರ್ವ ಮುಂಗಾರು ಮಳೆ ಕಡಿಮೆಯಾಗಿದೆ. ಆದರೆ ಮೇ 30ರ ಬಳಿಕ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತೆ ಅಂತ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.