ಶೇ.75ರಷ್ಟು ಲಸಿಕೆ ಖರೀದಿ ಮಾಡಲಿರುವ ಕೇಂದ್ರ ಸರ್ಕಾರ.. ಯೋಗ ದಿನ ಹಿನ್ನೆಲೆ ಇಂದು ಅತಿಹೆಚ್ಚು ಲಸಿಕೆ ನೀಡುವ ಗುರಿ

ಇಂದು ಅಂತರಾಷ್ಟ್ರೀಯ ಯೋಗ ದಿನ ಈ ಹಿನ್ನೆಲೆಯಲ್ಲಿ ಇಂದು ಅತಿಹೆಚ್ಚು ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇಂದು ದೇಶದಲ್ಲಿ 50 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡುವ ಗುರಿ ಇದೆ. ಹೆಚ್ಚು ಲಸಿಕೆ ನೀಡಿ ದಾಖಲೆ ಮಾಡಲು ರಾಜ್ಯ ಸರ್ಕಾರಗಳಿಂದಲೂ ಟಾರ್ಗೆಟ್ ಮಾಡಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ 7 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಇಡಲಾಗಿದೆ.

ಶೇ.75ರಷ್ಟು ಲಸಿಕೆ ಖರೀದಿ ಮಾಡಲಿರುವ ಕೇಂದ್ರ ಸರ್ಕಾರ.. ಯೋಗ ದಿನ ಹಿನ್ನೆಲೆ ಇಂದು ಅತಿಹೆಚ್ಚು ಲಸಿಕೆ ನೀಡುವ ಗುರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 21, 2021 | 9:22 AM

ದೆಹಲಿ: ಈ ಹಿಂದೆ ಜೂನ್ 21ರ ನಂತರ ದೇಶದಲ್ಲಿ 18 ವರ್ಷ ದಾಟಿದ ಎಲ್ಲರಿಗೂ ಲಸಿಕೆ ಕೊಡುವ ಅಭಿಯಾನ ಹೊಸ ವೇಗದಿಂದ ನಡೆಯಲಿದೆ. ಭಾರತ ಸರ್ಕಾರವೇ ಎಲ್ಲ ರಾಜ್ಯಗಳಿಗೂ ಉಚಿತವಾಗಿ ಲಸಿಕೆ ಕೊಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದರು. ಅದರಂತೆ ಇಂದಿನಿಂದ ಕೇಂದ್ರ ಸರ್ಕಾರ ಶೇ.75ರಷ್ಟು ಲಸಿಕೆ ಖರೀದಿ ಮಾಡಲಿದೆ. ಕೇಂದ್ರ ಸರ್ಕಾರವೇ ಖರೀದಿ ಮಾಡಿ ರಾಜ್ಯಗಳಿಗೆ ನೀಡಲಿದೆ.

ಇಂದು ಅಂತರಾಷ್ಟ್ರೀಯ ಯೋಗ ದಿನ ಈ ಹಿನ್ನೆಲೆಯಲ್ಲಿ ಇಂದು ಅತಿಹೆಚ್ಚು ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇಂದು ದೇಶದಲ್ಲಿ 50 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡುವ ಗುರಿ ಇದೆ. ಹೆಚ್ಚು ಲಸಿಕೆ ನೀಡಿ ದಾಖಲೆ ಮಾಡಲು ರಾಜ್ಯ ಸರ್ಕಾರಗಳಿಂದಲೂ ಟಾರ್ಗೆಟ್ ಮಾಡಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ 7 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಇಡಲಾಗಿದೆ. ಉತ್ತರಪ್ರದೇಶ 7 ಲಕ್ಷ, ಮಧ್ಯಪ್ರದೇಶ 10 ಲಕ್ಷ ಡೋಸ್, ಹರಿಯಾಣ 2.5 ಲಕ್ಷ ಡೋಸ್ ನೀಡುವ ಗುರಿ ಹಾಕಿಕೊಂಡಿವೆ. 4 ರಾಜ್ಯಗಳಿಂದಲೇ ಸುಮಾರು 26.5 ಲಕ್ಷ ಡೋಸ್ ಲಸಿಕೆ ನೀಡಿಕೆ ಗುರಿ ಹೊಂದಿವೆ.

ಬಿಹಾರ ರಾಜ್ಯ ಸರ್ಕಾರ ಕೂಡ ಇಂದು ಹೆಚ್ಚಿನ ಲಸಿಕೆ ನೀಡಲು ಟಾರ್ಗೆಟ್ ಮಾಡಿಕೊಂಡಿದೆ. ದೇಶದಲ್ಲಿ ಜೂನ್ 14 ರಂದು 38.2 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಏಪ್ರಿಲ್ ಪ್ರಾರಂಭದಲ್ಲಿ ಒಂದೇ ದಿನ 43 ಲಕ್ಷ ಡೋಸ್ ಲಸಿಕೆ ನೀಡಿ ದಾಖಲೆ ಮಾಡಲಾಗಿದೆ. ಹಾಗಾಗಿ ಈಗ ಇಂದು ಒಂದೇ ದಿನ 50 ಲಕ್ಷಕ್ಕಿಂತ ಹೆಚ್ಚಿನ ಡೋಸ್ ಲಸಿಕೆ ನೀಡಿ ದಾಖಲೆಯನ್ನು ಮುರಿದು ಮತ್ತೊಂದು ದಾಖಲೆ ಮಾಡುವ ಗುರಿ ಹೊಂದಿದ್ದಾರೆ.

ಇನ್ನು ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ ಕೊಡಲಾಗುವುದು. ಬಡವರು, ಮಧ್ಯಮ ವರ್ಗದವರು ಎಂಬ ಭೇದ ಇರುವುದಿಲ್ಲ. ಯಾರಿಗಾದರೂ ಉಚಿತ ಲಸಿಕೆಯ ಬದಲು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುತ್ತೇವೆ ಎಂದಾದರೆ ಅದಕ್ಕೂ ಅವಕಾಶವಿದೆ. ಖಾಸಗಿ ಆಸ್ಪತ್ರೆಗಳು ಲಸಿಕೆಗಳಿಗೆ ಸೇವಾ ಶುಲ್ಕವಾಗಿ 150 ರೂ. ಮಾತ್ರ ವಿಧಿಸಬಹುದು. ದೇಶದಲ್ಲಿ ಉತ್ಪಾದನೆಯಾಗುವ ಒಟ್ಟು ಲಸಿಕೆ ಡೋಸ್ಗಳ ಪೈಕಿ ಶೇ 25ರಷ್ಟು ಖಾಸಗಿ ವೈದ್ಯಕೀಯ ಸಂಸ್ಥೆಗಳ ಖರೀದಿಗೆ ಅವಕಾಶ ನೀಡಲಾಗುವುದು ಎಂದು ಮೋದಿ ಹೇಳಿದ್ದರು.

ಇದನ್ನೂ ಓದಿ: PM Narendra Modi ಜೂನ್ 21ರ ನಂತರ ಎಲ್ಲ ರಾಜ್ಯಗಳಿಗೂ ಕೇಂದ್ರದಿಂದ ಉಚಿತ ಲಸಿಕೆ: ನರೇಂದ್ರ ಮೋದಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ