ಕೇಂದ್ರದ ತೆರಿಗೆಯಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ: ಕರ್ನಾಟಕಕ್ಕೆ ‌3,467 ಕೋಟಿ ರೂಪಾಯಿ ಲಭ್ಯ

ಕೇಂದ್ರದ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಿದೆ. ಪ್ರತಿ ಬಾರಿ ಸಾಮಾನ್ಯವಾಗಿ 47 ಸಾವಿರ ಕೋಟಿ ರೂಪಾಯಿ ಬಿಡುಗಡೆ ಆಗುತ್ತಿತ್ತು. ಆದರೆ, ಈಗ ಒಂದೇ ಬಾರಿ 95 ಸಾವಿರ ಕೋಟಿ ರೂಪಾಯಿ ಬಿಡುಗಡೆ ಆಗಿದೆ.

ಕೇಂದ್ರದ ತೆರಿಗೆಯಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ: ಕರ್ನಾಟಕಕ್ಕೆ ‌3,467 ಕೋಟಿ ರೂಪಾಯಿ ಲಭ್ಯ
ಕೇಂದ್ರದ ತೆರಿಗೆಯಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ
Follow us
TV9 Web
| Updated By: ganapathi bhat

Updated on:Nov 23, 2021 | 6:07 PM

ಬೆಂಗಳೂರು: ಕೇಂದ್ರದ ತೆರಿಗೆಯಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ ಮಾಡಲಾಗಿದೆ. ಅದರಂತೆ, ಕರ್ನಾಟಕಕ್ಕೆ ‌3,467 ಕೋಟಿ ರೂಪಾಯಿ ಹಣ ಬಿಡುಗಡೆ ಆಗಿದೆ. ಎರಡು‌ ಕಂತಿನ ಹಣವನ್ನು ಒಂದೇ ಬಾರಿ ಕರ್ನಾಟಕಕ್ಕೆ ಬಿಡುಗಡೆ ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೆ 95 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕೇಂದ್ರದ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಿದೆ. ಪ್ರತಿ ಬಾರಿ ಸಾಮಾನ್ಯವಾಗಿ 47 ಸಾವಿರ ಕೋಟಿ ರೂಪಾಯಿ ಬಿಡುಗಡೆ ಆಗುತ್ತಿತ್ತು. ಆದರೆ, ಈಗ ಒಂದೇ ಬಾರಿ 95 ಸಾವಿರ ಕೋಟಿ ರೂಪಾಯಿ ಬಿಡುಗಡೆ ಆಗಿದೆ.

ಈ ವಿಚಾರವಾಗಿ ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಹಾಗೂ ಕರ್ನಾಟಕದಲ್ಲಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದವು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್​ ಹೇಳಿಕೆ ಬಿಡುಗಡೆ ಮಾಡಿದ್ದರು. ‘ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸಂವಿಧಾನಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರೇ ನಿಮಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ’ ಎಂದು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಹಾರೈಸಿದ್ದರು.

ಬರ ಪರಿಹಾರ, ಜಿಎಸ್​ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು- ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ಮಲತಾಯಿ ಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂದು ಸಲಹೆ ನೀಡಿದ್ದರು.

ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತ ಚರ್ಚೆ-ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು ಎಂದು ಸಿದ್ದರಾಮಯ್ಯ​ ಆಶಿಸಿದ್ದರು.

ಇದನ್ನೂ ಓದಿ: Tax On Cryptocurrency: ಕೇಂದ್ರ ಬಜೆಟ್​ನಲ್ಲಿ ಕ್ರಿಪ್ಟೋ ಗಳಿಕೆಯ ಮೇಲೆ ತೆರಿಗೆ ಬದಲಾವಣೆ ಸಾಧ್ಯತೆ

ಇದನ್ನೂ ಓದಿ: ಬೆಂಗಳೂರು: ತೆರಿಗೆ ಪಾವತಿಸದ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ BBMP ಅಧಿಕಾರಿಗಳು

Published On - 5:58 pm, Tue, 23 November 21

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ