ಜುಲೈ ಅಂತ್ಯದೊಳಗೆ 51.6 ಕೋಟಿ ಡೋಸ್ ಲಸಿಕೆ ನೀಡಿಕೆ; ಕೇಂದ್ರದಿಂದ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ

ಜುಲೈ ಅಂತ್ಯದೊಳಗೆ 51.6 ಕೋಟಿ ಡೋಸ್ ಲಸಿಕೆ ನೀಡಿಕೆ; ಕೇಂದ್ರದಿಂದ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ
ಪ್ರಾತಿನಿಧಿಕ ಚಿತ್ರ

ಫೈಜರ್, ಮಾಡೆರ್ನಾ, ಜಾನ್ಸನ್ & ಜಾನ್ಸನ್ ಲಸಿಕೆ ಸಿಕ್ಕಿದರೆ ಉತ್ತೇಜನ ಸಿಗಲಿದೆ. ಲಸಿಕಾ ಅಭಿಯಾನಕ್ಕೆ ಹೆಚ್ಚಿನ ಉತ್ತೇಜನ‌ ಸಿಗಲಿದೆ. ವಿದೇಶಿ ಲಸಿಕೆ ಭಾರತಕ್ಕೆ ತರುವ ಪ್ರಯತ್ನ ಉನ್ನತ ಮಟ್ಟದಲ್ಲಿ ನಡೆಯುತ್ತಿದೆ.

TV9kannada Web Team

| Edited By: ganapathi bhat

Jun 26, 2021 | 11:43 PM

ದೆಹಲಿ: ಜುಲೈ ತಿಂಗಳ ಅಂತ್ಯದೊಳಗೆ ಅಂದರೆ, ಜುಲೈ 31ರ ಒಳಗೆ 51.6 ಕೋಟಿ ಡೋಸ್ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ ಮಾಡಿದೆ. ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 94 ಕೋಟಿ ಜನರಿದ್ದಾರೆ. 94 ಕೋಟಿ ಜನರಿಗೆ 188 ಕೋಟಿ ಡೋಸ್ ಲಸಿಕೆಯ ಅಗತ್ಯವಿದೆ. ಹೀಗಾಗಿ ಆಗಸ್ಟ್‌ನಿಂದ ಡಿಸೆಂಬರ್‌ಗೆ 135 ಕೋಟಿ ಡೋಸ್ ನೀಡಲಾಗುತ್ತದೆ. ಅಗತ್ಯವಿರುವಷ್ಟು ಲಸಿಕೆ ಆಗಸ್ಟ್-ಡಿಸೆಂಬರ್ ಅವಧಿಯಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಫೈಜರ್, ಮಾಡೆರ್ನಾ, ಜಾನ್ಸನ್ & ಜಾನ್ಸನ್ ಲಸಿಕೆ ಸಿಕ್ಕಿದರೆ ಉತ್ತೇಜನ ಸಿಗಲಿದೆ. ಲಸಿಕಾ ಅಭಿಯಾನಕ್ಕೆ ಹೆಚ್ಚಿನ ಉತ್ತೇಜನ‌ ಸಿಗಲಿದೆ. ವಿದೇಶಿ ಲಸಿಕೆ ಭಾರತಕ್ಕೆ ತರುವ ಪ್ರಯತ್ನ ಉನ್ನತ ಮಟ್ಟದಲ್ಲಿ ನಡೆಯುತ್ತಿದೆ. ರಾಜತಾಂತ್ರಿಕ ಉನ್ನತ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಕೊವ್ಯಾಕ್ಸಿನ್ ಲಸಿಕೆಯ ದರ ಪ್ರತಿ ಡೋಸ್‌ಗೆ 150 ರೂಪಾಯಿ ನಿಗದಿಪಡಿಸಲಾಗಿದೆ. ಇದನ್ನು ಮತ್ತಷ್ಟು ಕಡಿಮೆ ಬೆಲೆಗೆ ಇಳಿಸಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.

ಜೂನ್ 26ರವರೆಗೆ 35.6 ಕೋಟಿ ಡೋಸ್ ಲಸಿಕೆ ಖರೀದಿ ಮಾಡಲಾಗಿದೆ. 26.6 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆ ಖರೀದಿಸಿದ್ದೇವೆ. 8 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆ ಖರೀದಿಸಲಾಗಿದೆ. ಕೊವಾವಾಕ್ಸ್ ನೆರವಿನ ಮೂಲಕ 1 ಕೋಟಿ ಡೋಸ್ ಲಸಿಕೆ ಲಭ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ಉಲ್ಲೇಖ ಮಾಡಿದೆ.

ಲಸಿಕೆ ನೀಡಿಕೆಗೆ ವೇಗ ಭಾರತದಲ್ಲಿ ಈಗ ಕಳೆದೊಂದು ವಾರದಿಂದ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಬಾರಿ ವೇಗ ಸಿಕ್ಕಿದೆ. ಕೇವಲ ಒಂದೇ ವಾರದಲ್ಲಿ ಬರೋಬ್ಬರಿ ನಾಲ್ಕು ಕೋಟಿ ಡೋಸ್ ಕೊರೊನಾ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ನಿರ್ಮಿಸಲಾಗಿದೆ. ಜುಲೈ ತಿಂಗಳಿನಲ್ಲಿ ಪ್ರತಿ ನಿತ್ಯ ಸರಾಸರಿ 1 ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಒಂದು ವಾರದಿಂದ ನಿತ್ಯ 50-60 ಲಕ್ಷ ಡೋಸ್ ಲಸಿಕೆ ನೀಡುತ್ತಿರುವುದರಿಂದ ಜುಲೈನಲ್ಲೂ ನಿತ್ಯ 1 ಕೋಟಿ ಡೋಸ್ ಲಸಿಕೆ ನೀಡುವ ವಿಶ್ವಾಸ ಮೂಡಿದೆ.

ಭಾರತದಲ್ಲಿ ಈಗ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ವೇಗ ಸಿಕ್ಕಿದೆ. ಕಳೆದೊಂದು ವಾರದಲ್ಲೇ ಬರೋಬ್ಬರಿ 4 ಕೋಟಿ ಡೋಸ್ ಲಸಿಕೆಯನ್ನು ಜನರಿಗೆ ನೀಡಲಾಗಿದೆ. ಒಂದು ವಾರದಲ್ಲೇ 4 ಕೋಟಿ ಡೋಸ್ ಲಸಿಕೆ ನೀಡಿರುವುದು ಈವೆರೆಗಿನ ಭಾರತದ ಗರಿಷ್ಠ ಸಾಧನೆ. ಜೂನ್ 19ರಿಂದ ಜೂನ್ 25ರವರೆಗೆ ಒಂದು ವಾರದ ಅವಧಿಯಲ್ಲಿ 3.99 ಕೋಟಿ ಡೋಸ್ ಲಸಿಕೆಯನ್ನು ಜನರಿಗೆ ನೀಡಲಾಗಿದೆ.

ಇದನ್ನೂ ಓದಿ: ನಕಲಿ ಕೊರೊನಾ ಲಸಿಕೆ ಪಡೆದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ತುತ್ತು

ಲಸಿಕೆ ಹೆಚ್ಚು ಹೆಚ್ಚು ಜನಕ್ಕೆ ನೀಡಿದಷ್ಟೂ ಕೊರೊನಾ ಮೂರನೆ ಅಲೆಯಿಂದ ಬಚಾವಾಗಬಹುದು ಅನ್ನುತ್ತಿದೆ ಅಧ್ಯಯನ ವರದಿ

Follow us on

Related Stories

Most Read Stories

Click on your DTH Provider to Add TV9 Kannada