Farmers Protest ಬಹುತೇಕ ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದ ಸರ್ಕಾರ, ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಪಡೆಯುವ ಸಾಧ್ಯತೆ

| Updated By: ರಶ್ಮಿ ಕಲ್ಲಕಟ್ಟ

Updated on: Dec 07, 2021 | 5:01 PM

ರೈತ ಸಂಘಗಳಿಗೆ ಬರೆದ ಪತ್ರದಲ್ಲಿ ಸರ್ಕಾರವು ಎಂಎಸ್‌ಪಿ ಕುರಿತು ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಕೈಬಿಡಲಾಗುವುದು ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ರೈತರು ಚರ್ಚೆ ನಡೆಸುತ್ತಿದ್ದಾರೆ

Farmers Protest ಬಹುತೇಕ ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದ ಸರ್ಕಾರ, ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಪಡೆಯುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us on

ದೆಹಲಿ: ಕನಿಷ್ಠ ಬೆಂಬಲ ಬೆಲೆ (MSP) ಖಾತರಿ ಸೇರಿದಂತೆ ಪ್ರತಿಭಟನಾ ನಿರತ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸರ್ಕಾರವು ಲಿಖಿತ ಭರವಸೆ ನೀಡಿದೆ ಎಂದು ಮೂಲಗಳು ಹೇಳಿವೆ. ಸರ್ಕಾರ ಭರವಸೆ ನೀಡಿರುವ ಹಿನ್ನಲೆಯಲ್ಲಿ 15 ತಿಂಗಳಿನಿಂದ ಪಟ್ಟುಬಿಡದೆ ನಡೆಯುತ್ತಿರುವ ರೈತರ ಆಂದೋಲಕ್ಕೆ (Farmers Protest) ಇದು ಮಹತ್ವದ ಕ್ಷಣವಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ರೈತ ಸಂಘಗಳಿಗೆ ಬರೆದ ಪತ್ರದಲ್ಲಿ ಸರ್ಕಾರವು ಎಂಎಸ್‌ಪಿ ಕುರಿತು ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಕೈಬಿಡಲಾಗುವುದು ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ರೈತರು ಚರ್ಚೆ ನಡೆಸುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಿದೆ.  ಅವರು ಈ ಪ್ರಸ್ತಾಪವನ್ನು ಒಪ್ಪಿಕೊಂಡರೆ, ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶದಾದ್ಯಂತ (ಮತ್ತು ಪ್ರಪಂಚದಾದ್ಯಂತ) ನಡೆಸುತ್ತಿದ್ದ ಪ್ರತಿಭಟನೆಯನ್ನು(Farmers  Protest) ಹಿಂತೆಗೆದುಕೊಳ್ಳುತ್ತಾರೆ. ಕೃಷಿ ಕಾನೂನು ವಾಪಸ್ (farm laws repeal) ತೆಗೆದುಕೊಳ್ಳಲು ನಡೆಸಿದ  ಹೋರಾಟದಲ್ಲಿ ಭದ್ರತಾ ಪಡೆಗಳೊಂದಿಗೆ ಹಿಂಸಾತ್ಮಕ ಘರ್ಷಣೆಗಳು, ಬಿರುಸಿನ ಚರ್ಚೆಗಳು ಮತ್ತು ಸಂಸತ್ತಿನಲ್ಲಿ ಗದ್ದಲಗಳು ಒಂದೆಡೆಯಾದರೆ ರೈತರ ಆಂದೋಲನದಲ್ಲಿ 700 ರೈತರು ಸಾವಿಗೀಡಾಗಿದ್ದಾರೆ.  ರೈತರು ಸರ್ಕಾರದ ಪ್ರಸ್ತಾಪಕ್ಕೆ ಹೆಚ್ಚಾಗಿ ಒಲವು ತೋರುತ್ತಿರುವಾಗ  ರೈತರಲ್ಲಿ ಕೆಲವರ ಮೇಲಿನ ಪೊಲೀಸ್ ಪ್ರಕರಣಗಳನ್ನು ಕೈಬಿಡುವ ನಿರ್ಧಾರ ಬೇಡಿಕೆಯನ್ನು ಬಿಡಬೇಕೆಂದು  ಸರ್ಕಾರ ಬಯಸಿದೆ. ಅಂದಹಾಗೆ ಈ ಬಗ್ಗೆ ಎರಡನೇ ಸುತ್ತಿನ ಮಾತುಕತೆ ಸಾಧ್ಯತೆ ಇದೆ ಅಂತಿವೆ ಮೂಲಗಳು.

ಕಳೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೋನ್  ಕರೆ ಮಾಡಿ ತಮ್ಮೊಂದಿಗೆ ಮಾತನಾಡಿದ್ದಾರೆ ಎಂದು ರೈತರು ಹೇಳಿದ್ದಾರೆ. ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಇದು  ನಡೆದಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತರು ಐವರು ಸದಸ್ಯರ ಸಮಿತಿಯನ್ನು ರಚಿಸಿದರು.  ಎಂಎಸ್‌ಪಿಯನ್ನು ಕಾನೂನುಬದ್ಧಗೊಳಿಸುವ ಮತ್ತು ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಅವರ ಬೇಡಿಕೆಗಳು ಇಲ್ಲಿ ಚರ್ಚೆಯಾಗಿದೆ. ಸರ್ಕಾರಕ್ಕೆ ನೀಡಿದ ಡೆಡ್​​ಲೈನ್ ಇಂದಿಗೆ ಮುಕ್ತಾಯಗೊಳ್ಳಲಿದೆ.  ಒಂದು ವೇಳೆ ರಾಜಿಯಾದರೆ ರೈತರು ಗಡಿಯಿಂದ ಹಿಂತಿರುಗುವ ಸಾಧ್ಯತೆಯಿದೆ ಎಂದು ಯುಧವೀರ್ ಸಿಂಗ್ ಎನ್‌ಡಿಟಿವಿಗೆ ತಿಳಿಸಿದರು.

ಕಳೆದ ವರ್ಷ ಸೆಪ್ಟೆಂಬರ್‌ನಿಂದ ಭಾರತದಾದ್ಯಂತ ರೈತರು ಹೋರಾಟ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳ ಪ್ರತಿಭಟನೆಯ ಹೊರತಾಗಿಯೂ ಮೂರು ಭಾರಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಸಂಸತ್ ಮೂಲಕ ಮಂಡಿಸಲಾಯಿತು.

ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು “ಕ್ಷಮೆಯಾಚನೆ” ಮಾಡಿ  ಕೃಷಿ  ಕಾನೂನುಗಳನ್ನು ರದ್ದುಗೊಳಿಸುವುದಾಗಿ ಹೇಳಿದರು. ನವೆಂಬರ್ 29 ರಂದು ಸಂಸತ್​​ನಲ್ಲಿ ಕೃಷಿ ಕಾನೂನು ರದ್ದತಿ ಮಸೂದೆಯನ್ನು ಅಂಗೀಕರಿಸಲಾಯಿತು.

ಕೇಂದ್ರ ಸರ್ಕಾರ  ಕೃಷಿ ಕಾನೂನುಗಳನ್ನು ರದ್ದು ಮಾಡಿರುವುದಕ್ಕೆ ಖುಷಿ ಪಟ್ಟ ಪ್ರತಿಭಟನಾ ನಿರತ ರೈತರು ಎಂಎಸ್‌ಪಿ ಸಮಸ್ಯೆಯ ಬಗ್ಗೆ ಚರ್ಚಿಸಲು ಸರ್ಕಾರ ಹಿಂಜರಿಯುತ್ತಿದೆ. ಎಂಎಸ್‌ಪಿ ಸಮಸ್ಯೆ  ಪರಿಹರಿಸುವ ವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.  ಕಳೆದ ತಿಂಗಳು ಸಂಸತ್ ನ ಚಳಿಗಾಲದ ಅಧಿವೇಶನದ ಆರಂಭಿಕ ದಿನದಂದು ರೈತರು ಸಂಸತ್ತಿಗೆ ಮೆರವಣಿಗೆ ನಡೆಸಲು ನಿರ್ಧರಿಸಿದ್ದರು, ಆದರೆ ಅವರು ಸರ್ಕಾರಕ್ಕೆ ಹೆಚ್ಚಿನ ಸಮಯವನ್ನು ನೀಡುವುದಾಗಿ ಹೇಳಿ ಆ ಕ್ರಮವನ್ನು ಮುಂದೂಡಿದರು.

ಇದನ್ನೂ ಓದಿ:  ರೈತರಿಗೆ ಪರಿಹಾರ, ಉದ್ಯೋಗ ಸಿಗಬೇಕು: ಲೋಕಸಭೆಯಲ್ಲಿ ಮೃತ ರೈತರ ಪಟ್ಟಿ ತೋರಿಸಿ ಕೇಂದ್ರವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

Published On - 4:37 pm, Tue, 7 December 21