ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಬಿಡುಗಡೆ ಬಗ್ಗೆ ದಾಖಲೆ ಸಲ್ಲಿಸಲು ಕೇಂದ್ರ, ಗುಜರಾತ್ ಸರ್ಕಾರ ಸಮ್ಮತಿ
ಮಾರ್ಚ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದವರ ಹತ್ಯೆಯನ್ನು ಭಯಾನಕ ಕೃತ್ಯ ಎಂದು ಬಣ್ಣಿಸಿತ್ತು. 11 ಅಪರಾಧಿಗಳಿಗೆ ಕ್ಷಮಾಪಣೆ ನೀಡುವಾಗ ಇತರ ಕೊಲೆ ಪ್ರಕರಣಗಳಲ್ಲಿ ಅನುಸರಿಸಿದಂತೆ ಏಕರೂಪದ ಮಾನದಂಡಗಳನ್ನು ಅನ್ವಯಿಸಲಾಗಿದೆಯೇ ಎಂದು ಅದು ಗುಜರಾತ್ ಸರ್ಕಾರವನ್ನು ಕೇಳಿದೆ.
ದೆಹಲಿ: 2002ರ ಗುಜರಾತ್ ಗಲಭೆಯಲ್ಲಿ(2002 Gujarat riots) ಬಿಲ್ಕಿಸ್ ಬಾನೊ(Bilkis Bano) ಮೇಲಿನ ಅತ್ಯಾಚಾರ ಹಾಗೂ ಆಕೆಯ ಕುಟುಂಬದವರನ್ನು ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ 11 ಮಂದಿಯ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಇಂದು(ಮಂಗಳವಾರ) ಮುಂದೂಡಲಾಗಿದೆ. ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡುವುದಾಗಿ ಕೇಂದ್ರ ಮತ್ತು ಗುಜರಾತ್ ಸರ್ಕಾರ ಹೇಳಿದ ನಂತರ ಈ ಪ್ರಕರಣದ ವಿಚಾರಣೆ ಜುಲೈ ಎರಡನೇ ವಾರದಲ್ಲಿ ನಡೆಸುವುದಾಗಿ ಸುಪ್ರೀಂಕೋರ್ಟ್ (Supreme Court) ಹೇಳಿದೆ. ಬೇಸಿಗೆ ರಜೆಯ ನಂತರ ನ್ಯಾಯಾಲಯ ತೆರೆದಾಗ ಪ್ರಕರಣವನ್ನು ಮರು ವಿಚಾರಣೆಗೆ ಒಳಪಡಿಸಲು ಸಮಯ ನಿಗದಿಪಡಿಸಲು ನಿರ್ದೇಶನಗಳಿಗಾಗಿ ಮೇ 9 ಕ್ಕೆ ವಿಷಯವನ್ನು ವಿಚಾರಣೆ ಮಾಡುವುದಾಗಿ ಪೀಠ ಹೇಳಿದೆ. ಪ್ರಕರಣದ ವಿಚಾರಣೆಗೆ ಹೊಸ ಪೀಠ ಕೂಡ ರಚನೆಯಾಗಲಿದೆ.
ಕೇಂದ್ರ ಮತ್ತು ರಾಜ್ಯವು ಈ ಹಿಂದೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಹೇಳಿದಾಗ ಅವು ಸವಲತ್ತಿನದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಕ್ಕೆ ನಿರಾಕರಿಸಿತ್ತು. ಸಂಬಂಧಿತ ಕಡತಗಳನ್ನು ಹಾಜರುಪಡಿಸುವಂತೆ ಹೇಳಿದ ಆದೇಶದ ವಿರುದ್ಧ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಪರಿಗಣಿಸುತ್ತಿರುವುದಾಗಿ ಅವರು ನ್ಯಾಯಾಲಯಕ್ಕೆ ತಿಳಿಸಿದರು.
ಆದರೆ ನ್ಯಾಯಾಧೀಶರು ಇದಕ್ಕೆ ಜಗ್ಗಲಿಲ್ಲ. ವಸ್ತುನಿಷ್ಠ ಮಾನದಂಡಗಳು ಇರಬೇಕು ಎಂದು ಒತ್ತಿಹೇಳಿರುವ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ನೀವು ಪರಿಹಾರ ನೀಡಲು ನಿಮ್ಮ ಕಾರಣಗಳನ್ನು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಮಾರ್ಚ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದವರ ಹತ್ಯೆಯನ್ನು ಭಯಾನಕ ಕೃತ್ಯ ಎಂದು ಬಣ್ಣಿಸಿತ್ತು. 11 ಅಪರಾಧಿಗಳಿಗೆ ಕ್ಷಮಾಪಣೆ ನೀಡುವಾಗ ಇತರ ಕೊಲೆ ಪ್ರಕರಣಗಳಲ್ಲಿ ಅನುಸರಿಸಿದಂತೆ ಏಕರೂಪದ ಮಾನದಂಡಗಳನ್ನು ಅನ್ವಯಿಸಲಾಗಿದೆಯೇ ಎಂದು ಅದು ಗುಜರಾತ್ ಸರ್ಕಾರವನ್ನು ಕೇಳಿದೆ. ಸೇಬನ್ನು ಕಿತ್ತಳೆ ಹಣ್ಣಿನೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಗೆ ಹೋಲಿಸಲಾಗದು. ಇಂದು ಬಿಲ್ಕಿಸ್ ಆದರೆ ನಾಳೆ ಯಾರೇ ಆಗಬಹುದು. ಅದು ನೀನಾಗಿರಬಹುದು ಅಥವಾ ನಾನೇ ಆಗಿರಬಹುದು ಎಂದು ಕೋರ್ಟ್ ಹೇಳಿತ್ತು.
ಇದನ್ನೂ ಓದಿ: Defamation case: ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ
ಗುಜರಾತ್ ಸರ್ಕಾರವು 11 ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಎಂದು ಕರೆದಿದ್ದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಅವರ ಶಿಕ್ಷೆಯ ವಿನಾಯತಿಯು ಸಮಾಜದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ