ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರದ ಅನುಮತಿ, ಕರ್ನಾಟಕ ಸರ್ಕಾರದ ನಿಲುವೇನು?

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ಜೂನ್ 16 ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಕೇಂದ್ರ ಸರ್ಕಾರವು ಬೈಕ್ಸ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದು, ಕರ್ನಾಟಕ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡಬೇಕಿದೆ.

ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರದ ಅನುಮತಿ, ಕರ್ನಾಟಕ ಸರ್ಕಾರದ ನಿಲುವೇನು?
ಬೈಕ್ ಟ್ಯಾಕ್ಸಿ
Image Credit source: Deccan Herald

Updated on: Jul 02, 2025 | 9:36 AM

ನವದೆಹಲಿ, ಜುಲೈ 02: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ(Bike Taxi) ಸೇವೆ ನಿಷೇಧ ಸುದ್ದಿ ಭಾರಿ ಸದ್ದು ಮಾಡಿತ್ತು. ಇದೀಗ ಕೇಂದ್ರ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿ, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದರೂ ಕೂಡ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕು ರಾಜ್ಯ ಸರ್ಕಾರಕ್ಕಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.

ಬೈಕ್ ಟ್ಯಾಕ್ಸಿ ಕುರಿತು ಕೇಂದ್ರ ಸರ್ಕಾರದ ನಿರ್ಧಾರದಿಂದ ರಸ್ತೆ ದಟ್ಟಣೆ ಮತ್ತು ವಾಹನ ಮಾಲಿನ್ಯದಿಂದ ತೊಂದರೆಗೀಡಾದ ಜನರಿಗೆ ಹಾಗೂ ದೀರ್ಘಕಾಲದವರೆಗೆ ಕಾನೂನು ಅನಿಶ್ಚಿತತೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದ ರ್ಯಾಪಿಡೊ ಮತ್ತು ಊಬರ್‌ನಂತಹ ಬೈಕ್ ಟ್ಯಾಕ್ಸಿ ನಿರ್ವಾಹಕರು ನಿಟ್ಟುಸಿರು ಬಿಡುವಂತಾಗಿದೆ.

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ನಿಷೇಧ
ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಿದೆ. ಕರ್ನಾಟಕದಲ್ಲಿ ನಿಷೇಧ ಬೆನ್ನಲ್ಲೇ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ಹೈಕೋರ್ಟ್‌ ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಿವೆ.

ಮತ್ತಷ್ಟು ಓದಿ: ಬೈಕ್ ಟ್ಯಾಕ್ಸಿ ನಿಷೇಧದಿಂದ ಸ್ವಿಗ್ಗಿ, ಜೊಮೆಟೋ ಡೆಲಿವರಿ ಬಾಯ್​ಗಳಿಗೂ ಸಂಕಷ್ಟ

ಈ ಕುರಿತು ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಜೂನ್‌ 24ಕ್ಕೆ ನಿಗದಿ ಪಡಿಸಿತ್ತು. ಇದೀಗ ಕೇಂದ್ರ ಸರ್ಕಾರದ ನಿರ್ಧಾರದಿಂದ ರಾಜ್ಯ ಸರ್ಕಾರವು ಯಾವ ಕ್ರಮ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.

2021ರಲ್ಲಿ ಆರಂಭವಾಗಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಮಹಿಳೆಯರ ಸುರಕ್ಷತೆ ಮತ್ತು ಕಾನೂನು ಉಲ್ಲಂಘನೆಗಳ ಕಾರಣದಿಂದ 2024ರಲ್ಲಿ ಸರ್ಕಾರ ಹಿಂತೆಗೆದುಕೊಂಡಿತ್ತು. ಕಾನೂನಿನಲ್ಲಿಅವಕಾಶವಿರುವಾಗ ಸರ್ಕಾರ ಅದನ್ನು ನಿರ್ಬಂಧಿಸಲಾಗದು. ಬೈಕ್‌ ಟ್ಯಾಕ್ಸಿ ಸೇವೆ ಕಲ್ಪಿಸುವಾಗ ಸುರಕ್ಷತೆಯ ಸಮಸ್ಯೆ ಇದ್ದರೆ ಸರ್ಕಾರ ಅದನ್ನು ಬಗೆಹರಿಸಬಹುದು.

ಆದರೆ, ಬೈಕ್‌ ಟ್ಯಾಕ್ಸಿ ಸೇವೆ ನೀಡಲು ಅವಕಾಶ ನೀಡುವುದಿಲ್ಲಎನ್ನಲಾಗದು. ಕಾಂಟ್ರಾಕ್ಟ್ ಕ್ಯಾರಿಯೇಜ್‌ ಅನ್ನು ಮೋಟಾರ್‌ ಕ್ಯಾಬ್‌ ಮತ್ತು ಮ್ಯಾಕ್ಸಿ ಕ್ಯಾಬ್‌ ಎಂದು ವಿಭಜಿಸಲಾಗಿದೆ ಎಂದು ನಿರ್ವಾಹಕರು ಹೇಳಿದ್ದಾರೆ. ಊಬರ್ ಮತ್ತು ರ್ಯಾಪಿಡೊ ಸೇರಿದಂತೆ ಪ್ರಮುಖ ಕಂಪನಿಗಳು ಈ ಕ್ರಮವನ್ನು ಸ್ವಾಗತಿಸಿವೆ.

ಮಾರ್ಗಸೂಚಿಯಲ್ಲಿ ಏನಿದೆ?
– ಖಾಸಗಿ ಬೈಕ್​ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್​​ಗಳಿಗೆ ರಾಜ್ಯ ಸರ್ಕಾರಗಳು ಅನುಮತಿ ನೀಡಬಹುದು. ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬಹುದಾಗಿದೆ.
ರಾಜ್ಯ ಸರ್ಕಾರಗಳು ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 67 ಸಬ್ ಸೆಕ್ಷನ್ (3) ಅಡಿಯಲ್ಲಿ ಅಗ್ರಿಗೇಟರ್​ಗಳಿಗೆ ಖಾಸಗಿ ವಾಹನಗಳಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅವಕಾಶ ನೀಡಬಹುದು. ಇದರ ಅಡಿಯಲ್ಲಿ ಅಗ್ರಿಗೇಟರ್​ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದಾಗಿದೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ