AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ

8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ
ನಿತಿನ್​ ಗಡ್ಕರಿ
KUSHAL V
|

Updated on: Jan 25, 2021 | 10:07 PM

Share

ದೆಹಲಿ: 8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಅಂದ ಹಾಗೆ, ವಾಹನದ ಫಿಟ್ನೆಸ್​ ಸರ್ಟಿಫಿಕೇಟ್​ನ ನವೀಕರಣಕದ ವೇಳೆ ಈ ಹಸಿರು ತೆರಿಗೆಯನ್ನು ವಿಧಿಸಲಾಗುವುದು. ಜೊತೆಗೆ, ಇದರ ಪ್ರಮಾಣ ರಸ್ತೆ ತೆರಿಗೆಯ ಶೇ.10ರಿಂದ ಶೇ.25ರಷ್ಟು ಇರಲಿದೆ ಎಂದು ತಿಳಿದುಬಂದಿದೆ.

ಜೊತೆಗೆ, 15 ವರ್ಷಕ್ಕಿಂತ ಮೇಲ್ಪಟ್ಟ ಖಾಸಗಿ ವಾಹನಗಳ RC ಸರ್ಟಿಫಿಕೇಟ್ ನವೀಕರಣದ ವೇಳೆ ಸಹ ಈ ಹಸಿರು ತೆರಿಗೆ ವಿಧಿಸಲಾಗುವುದು. ಆದರೆ, CNG, LPG ಇಂಧನಗಳನ್ನು ಬಳಸುವ ವಾಹನಗಳು ಮತ್ತು ಎಲೆಕ್ಟ್ರಿಕ ವಾಹನಗಳಿಗೆ ಈ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಸದ್ಯ, ಈ ಪ್ರಸ್ತಾವನೆಯನ್ನು ಎಲ್ಲಾ ರಾಜ್ಯ ಸರ್ಕಾರಗಳ ಬಳಿ ಸಮಾಲೋಚನೆಗೆಂದು ಕಳುಹಿಸಲಾಗುವುದು. ಬಳಿಕ ಈ ಪ್ರಸ್ತಾವನೆಯನ್ನು ಅಧಿಸೂಚಿಸಲಾಗುವುದು ಎಂದು ನಿತಿನ್​ ಗಡ್ಕರಿ ಮಾಹಿತಿ ನೀಡಿದ್ದಾರೆ.

ಒಬ್ಬ ಮಿನಿಸ್ಟರ್ PA ಆಗಿ.. ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ? -ಸಚಿವ ಅಶೋಕ್​ PA ವಿರುದ್ಧ ಅಧಿಕಾರಿಯ ಗಂಭೀರ ಆರೋಪ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ