AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

ಅಫ್ಘಾನ್​​ ಪರಿಸ್ಥಿತಿ ಬಗ್ಗೆ ಚರ್ಚಿಸಲು, ಆ.26ರಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
TV9 Web
| Edited By: |

Updated on:Aug 23, 2021 | 4:42 PM

Share

ದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಬಿಕ್ಕಟ್ಟಿನ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಆಗಸ್ಟ್​ 26ರಂದು ಸರ್ವಪಕ್ಷಗಳ ಸಭೆ ಕರೆದಿದೆ. ಕಳೆದ ವಾರ ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಆಗಿನಿಂದಲೂ ಅಫ್ಘಾನಿಸ್ತಾನದ ಚಿತ್ರಣವೇ ಬದಲಾಗಿದೆ. ಆ ದೇಶದಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯವೂ ಭರದಿಂದ ಸಾಗುತ್ತಿದೆ. ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡಲು ಸಿದ್ಧರಿದ್ದೇವೆಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಹೇಳಿದ್ದಾರೆ. ಒಟ್ಟಾರೆ ಅಫ್ಘಾನ್​ ಪರಿಸ್ಥಿತಿ ಬಗ್ಗೆ ಚರ್ಚಿಸಲು ಆಗಸ್ಟ್​ 26ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ.

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಸಚಿವ ಜೈಶಂಕರ್​, ಅಫ್ಘಾನ್​ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳ ನಾಯಕರಿಗೆ ವಿವರಿಸುವಂತೆ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ನೀಡಲಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು

ಇನ್ನೊಬ್ಬರ ಜತೆ ಸರ್ಕಾರ ರಚಿಸಲು ಆಗದು, ಸ್ವತಂತ್ರ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಿ: ಕುಮಾರಸ್ವಾಮಿ ಮನವಿ

Published On - 4:01 pm, Mon, 23 August 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ