ದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಬಿಕ್ಕಟ್ಟಿನ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಆಗಸ್ಟ್ 26ರಂದು ಸರ್ವಪಕ್ಷಗಳ ಸಭೆ ಕರೆದಿದೆ. ಕಳೆದ ವಾರ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ. ಆಗಿನಿಂದಲೂ ಅಫ್ಘಾನಿಸ್ತಾನದ ಚಿತ್ರಣವೇ ಬದಲಾಗಿದೆ. ಆ ದೇಶದಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯವೂ ಭರದಿಂದ ಸಾಗುತ್ತಿದೆ. ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡಲು ಸಿದ್ಧರಿದ್ದೇವೆಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.ಜೈಶಂಕರ್ ಹೇಳಿದ್ದಾರೆ. ಒಟ್ಟಾರೆ ಅಫ್ಘಾನ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ಆಗಸ್ಟ್ 26ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ.
ಅಫ್ಘಾನ್ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಸಚಿವ ಜೈಶಂಕರ್, ಅಫ್ಘಾನ್ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳ ನಾಯಕರಿಗೆ ವಿವರಿಸುವಂತೆ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನೀಡಲಿದ್ದಾರೆ ಎಂದು ತಿಳಿಸಿದ್ದರು.
In view of developments in Afghanistan, PM @narendramodi has instructed that MEA brief Floor Leaders of political parties.
Minister of Parliamentary Affairs @JoshiPralhad will be intimating further details.
— Dr. S. Jaishankar (@DrSJaishankar) August 23, 2021
ಇದನ್ನೂ ಓದಿ: ಅಫ್ಘಾನ್ ಕ್ರಿಕೆಟರ್ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್ ಬಾಸ್ ಸ್ಪರ್ಧಿ; ತಾಲಿಬಾನ್ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು
ಇನ್ನೊಬ್ಬರ ಜತೆ ಸರ್ಕಾರ ರಚಿಸಲು ಆಗದು, ಸ್ವತಂತ್ರ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಿ: ಕುಮಾರಸ್ವಾಮಿ ಮನವಿ
Published On - 4:01 pm, Mon, 23 August 21