AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಅಂತಿಮ ನಿರ್ಧಾರ ಇಲ್ಲ: ಚಂಡೀಗಡಕ್ಕೆ ಆರ್ಟಿಕಲ್ 240 ಪ್ರಸ್ತಾಪದ ಬಗ್ಗೆ ಕೇಂದ್ರದ ಸ್ಪಷ್ಟನೆ

Centre clarifies on its proposal to bring Chandigarh under Article 240: ಕೇಂದ್ರಾಡಳಿತ ಪ್ರದೇಶವಾದ ಚಂಡೀಗಡವನ್ನು ಸಂವಿಧಾನದ ಆರ್ಟಿಕಲ್ 240 ಅಡಿಗೆ ತರುವ ತನ್ನ ಪ್ರಸ್ತಾಪದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಪ್ರಸ್ತಾಪ ಇರುವುದು ನಿಜ. ಆದರೆ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೆ ನೀಡಿದೆ. ಸೂಕ್ತ ಸಮಾಲೋಚನೆ ಮಾಡಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದೆ.

ಇನ್ನೂ ಅಂತಿಮ ನಿರ್ಧಾರ ಇಲ್ಲ: ಚಂಡೀಗಡಕ್ಕೆ ಆರ್ಟಿಕಲ್ 240 ಪ್ರಸ್ತಾಪದ ಬಗ್ಗೆ ಕೇಂದ್ರದ ಸ್ಪಷ್ಟನೆ
ಗೃಹ ಸಚಿವ ಅಮಿತ್ ಶಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 23, 2025 | 2:36 PM

Share

ನವದೆಹಲಿ, ನವೆಂಬರ್ 23: ಚಂಡೀಗಡವನ್ನು ಆರ್ಟಿಕಲ್ 240 ಅಡಿಗೆ ತರುವುದರಿಂದ ಅದರ ಆಡಳಿತ ವ್ಯವಹಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರದ ಈ ನಡೆಯ ವಿರುದ್ಧ ಪಂಜಾಬ್​ನಲ್ಲಿ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯವು ತನ್ನ ಪ್ರಸ್ತಾಪನೆ ಕುರಿತು ಸ್ಪಷ್ಟನೆ ಹೊರಡಿಸಿದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದೂ ಹೇಳಿದೆ.

‘ಕೇಂದ್ರಾಡಳಿತ ಪ್ರದೇಶವಾದ ಚಂಡೀಗಡಕ್ಕೆ ಕಾನೂನು ರಚನೆಯ ಪ್ರಕ್ರಿಯೆ ಸರಳಗೊಳಿಸುವ ಪ್ರಸ್ತಾಪವೊಂದು ಕೇಂದ್ರ ಸರ್ಕಾರಿ ಮಟ್ಟದಲ್ಲಿ ಪರಿಗಣನೆಗೆ ಬಂದಿದೆ. ಈ ಪ್ರಸ್ತಾಪದ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ’ ಎಂದು ಗೃಹ ವ್ಯವಹಾರಗಳ ಸಚಿವಾಲಯವು ಹೇಳಿಕೆ ನೀಡಿದೆ.

ಇದನ್ನೂ ಓದಿ: ಆರ್ಟಿಕಲ್ 240 ಅಡಿಗೆ ಚಂಡೀಗಡ; ಕೇಂದ್ರದ ಪ್ರಯತ್ನ ವಿರುದ್ಧ ಪಂಜಾಬ್​ನಲ್ಲಿ ಭುಗಿಲೆದ್ದ ಆಕ್ರೋಶ

ಚಂಡೀಗಡ ಜೊತೆ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳ ಸಂಬಂಧದಲ್ಲಿ ಏರುಪೇರಾಗಲ್ಲ…

ಚಂಡೀಗಡವನ್ನು ಪಂಜಾಬ್ ರಾಜ್ಯದಿಂದ ಪೂರ್ಣವಾಗಿ ಕಿತ್ತುಕೊಳ್ಳುವ ಹುನ್ನಾರ ನಡೆದಿದೆ ಎಂದು ಪಂಜಾಬ್ ನಾಯಕರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ಚಂಡೀಗಡದ ಆಡಳಿತ ವ್ಯವಸ್ಥೆಯನ್ನು ಬದಲಾಯಿಸುವ ಸಂಗತಿ ಇಲ್ಲ. ಚಂಡೀಗಡದ ಜೊತೆ ಪಂಜಾಬ್ ಅಥವಾ ಹರ್ಯಾಣಕ್ಕೆ ಇರುವ ಸಾಂಪ್ರದಾಯಿಕ ಸಂಬಂಧದಲ್ಲೂ ಬದಲಾವಣೆ ಆಗಲ್ಲ ಎಂದು ಸಚಿವಾಲಯವು ತಿಳಿಸಿದೆ.

‘ಚಂಡೀಗಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಭಾಗಿದಾರರ ಜೊತೆ ಸರಿಯಾಗಿ ಸಮಾಲೋಚನೆ ನಡೆಸಿದ ಬಳಿಕವಷ್ಟೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ವಿಚಾರದ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ’ ಎಂದು ಕೇಂದ್ರ ಗೃಹ ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಉತ್ತರಾಖಂಡ್​ನ ಶಾಲೆ ಬಳಿ ಭಾರೀ ಸ್ಫೋಟಕಗಳು ಪತ್ತೆ; ಹೆಚ್ಚಿದ ಉಗ್ರಾತಂಕ

ಮುಂಬರುವ ಅಧಿವೇಶನದಲ್ಲಿ ಈ ಮಸೂದೆ ಬರಲ್ಲ

ಚಂಡೀಗಡವನ್ನು ಆರ್ಟಿಕಲ್ 240ರ ಅಡಿಗೆ ತರುವ ಮಸೂದೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತದೆ ಎನ್ನುವ ಸುದ್ದಿಯನ್ನು ಸರ್ಕಾರ ತಳ್ಳಿ ಹಾಕಿದೆ. ಅಂಥ ಯಾವುದೇ ಉದ್ದೇಶ ಇಲ್ಲ ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ