AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಕಾನೂನನ್ನು ಸುಪ್ರೀಂಕೋರ್ಟ್​​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

"ವಿವಾಹಿತ ಮುಸ್ಲಿಂ ಮಹಿಳೆಯರ ಲಿಂಗ ನ್ಯಾಯ ಮತ್ತು ಲಿಂಗ ಸಮಾನತೆಯ ದೊಡ್ಡ ಸಾಂವಿಧಾನಿಕ ಗುರಿಗಳನ್ನು ಖಚಿತಪಡಿಸಿಕೊಳ್ಳಲು ಈ ಕಾಯ್ದೆ ಸಹಾಯ ಮಾಡುತ್ತದೆ. ಇದು ಅವರ ಮೂಲಭೂತ ಹಕ್ಕುಗಳಾದ ತಾರತಮ್ಯ ಹೋಗಲಾಡಿಸಿ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ" ಎಂದು ಕೇಂದ್ರವು ತನ್ನ ಅಫಿಡವಿಟ್​​​ನಲ್ಲಿ ತಿಳಿಸಿದೆ.

ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಕಾನೂನನ್ನು ಸುಪ್ರೀಂಕೋರ್ಟ್​​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 19, 2024 | 5:34 PM

Share

ದೆಹಲಿ ಆಗಸ್ಟ್ 19: ತ್ರಿವಳಿ ತಲಾಖ್ (triple talaq) ವಿರುದ್ಧದ ತನ್ನ 2019 ಕಾನೂನನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ, ಈ ಪದ್ಧತಿಯು ವಿವಾಹ ವ್ಯವಸ್ಥೆಗೆ “ಮಾರಕ” ಎಂದು ಸುಪ್ರೀಂಕೋರ್ಟ್‌ನಲ್ಲಿ (Supreme Court) ಹೇಳಿದೆ. ಕಾನೂನನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, 2017 ರಲ್ಲಿ ಸುಪ್ರೀಂಕೋರ್ಟ್ ಈ ಪದ್ಧತಿಯನವ್ನು ರದ್ದುಗೊಳಿಸಿದ್ದರೂ, ಸಮುದಾಯದಲ್ಲಿ ” ವಿಚ್ಛೇದನಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಸಾಕಷ್ಟು ನಿರೋಧಕವಾಗಿ ಕೆಲಸ ಮಾಡಿಲ್ಲ” ಎಂದು ಕೇಂದ್ರ ಹೇಳಿದೆ. ವಿವಾಹಿತ ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್ ಮೂಲಕ ವಿಚ್ಛೇದನದಿಂದ ರಕ್ಷಿಸಲು ಸಂಸತ್ತು ಕಾನೂನನ್ನು ಅಂಗೀಕರಿಸಿದೆ ಎಂದು ಸರ್ಕಾರ ಹೇಳಿದೆ.

“ವಿವಾಹಿತ ಮುಸ್ಲಿಂ ಮಹಿಳೆಯರ ಲಿಂಗ ನ್ಯಾಯ ಮತ್ತು ಲಿಂಗ ಸಮಾನತೆಯ ದೊಡ್ಡ ಸಾಂವಿಧಾನಿಕ ಗುರಿಗಳನ್ನು ಖಚಿತಪಡಿಸಿಕೊಳ್ಳಲು ಈ ಕಾಯ್ದೆ ಸಹಾಯ ಮಾಡುತ್ತದೆ. ಇದು ಅವರ ಮೂಲಭೂತ ಹಕ್ಕುಗಳಾದ ತಾರತಮ್ಯ ಹೋಗಲಾಡಿಸಿ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ” ಎಂದು ಕೇಂದ್ರವು ತನ್ನ ಅಫಿಡವಿಟ್​​​ನಲ್ಲಿ ತಿಳಿಸಿದೆ.

ಜಮಿಯತ್ ಉಲಮಾ-ಐ-ಹಿಂದ್ ಮತ್ತು ಸಮಸ್ತ ಕೇರಳ ಜಮಿಯತುಲ್ ಉಲೇಮಾ ಎಂಬ ಎರಡು ಮುಸ್ಲಿಂ ಸಂಘಟನೆಗಳು ಕಾನೂನನ್ನು “ಅಸಂವಿಧಾನಿಕ” ಎಂದು ಘೋಷಿಸುವಂತೆ ನ್ಯಾಯಾಲಯವನ್ನು ಕೋರಿವೆ. ಸಿವಿಲ್ ಕಾನೂನಿನಡಿಯಲ್ಲಿ ಇತರ ಧರ್ಮಗಳಲ್ಲಿ ಮದುವೆ ಮತ್ತು ವಿಚ್ಛೇದನವನ್ನು ಬಿಟ್ಟು ಒಂದು ಧರ್ಮಕ್ಕೆ ವಿಚ್ಛೇದನದ ನಿರ್ದಿಷ್ಟ ವಿಧಾನವನ್ನು ಅಪರಾಧೀಕರಿಸುವುದು ತಾರತಮ್ಯವನ್ನು ಸೃಷ್ಟಿಸುತ್ತದೆ, ಇದು ಆರ್ಟಿಕಲ್ 15 ಅನ್ನು ಉಲ್ಲಂಘಿಸುತ್ತದೆ ಎಂದು ಜಮಿಯತ್ ತನ್ನ ಅರ್ಜಿಯಲ್ಲಿ ವಾದಿಸಿದೆ.

ಆಗಸ್ಟ್ 22, 2017 ರಂದು, ಸುಪ್ರೀಂಕೋರ್ಟ್ ತ್ವರಿತ ತ್ರಿವಳಿ ತಲಾಖ್ (ತಲಾಖ್-ಎ-ಬಿದ್ದಾ) ಅಸಂವಿಧಾನಿಕ ಎಂದು ಘೋಷಿಸಿತು. ಆಗಸ್ಟ್ 23, 2019 ರಂದು, ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆ, 2019 ರ ಸಿಂಧುತ್ವವನ್ನು ಪರಿಶೀಲಿಸಲು ನ್ಯಾಯಾಲಯವು ಸಮ್ಮತಿಸಿದೆ. ಕಾನೂನಿನ ಉಲ್ಲಂಘನೆ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಇರುತ್ತದೆ.  ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮೇಲ್ಮನೆಯಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಜುಲೈ 30, 2019 ರಂದು ಪರವಾಗಿ 99 ಮತ್ತು ವಿರುದ್ಧವಾಗಿ 84 ಮತಗಳೊಂದಿಗೆ ಅಂಗೀಕರಿಸಿದೆ. ಈ ಪದ್ಧತಿಯನ್ನು ರದ್ದುಗೊಳಿಸುವುದು ಬಿಜೆಪಿಯ ಪ್ರಮುಖ ಭರವಸೆಯಾಗಿತ್ತು.

ಇದನ್ನೂ ಓದಿ: ರಷ್ಯಾ ಮತ್ತು ಉಕ್ರೇನ್ ನಡುವೆ ಭಾರತ ಮಧ್ಯಸ್ಥಿಕೆ ವಹಿಸುವುದಿಲ್ಲ

ಸಾಕಷ್ಟು ಸಂಖ್ಯೆಯ ಕಾರಣದಿಂದ ರಾಜ್ಯಸಭೆಯಲ್ಲಿ ಶಾಸನವನ್ನು ಅಂಗೀಕರಿಸಲು ಹೆಣಗಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವಾರು ಸುಗ್ರೀವಾಜ್ಞೆಗಳನ್ನು ಹೊರಡಿಸಿತ್ತು.

ಕಾನೂನಿನ ಪ್ರಕಾರ, ತ್ರಿವಳಿ ತಲಾಖ್‌ಗೆ ಒಳಗಾದ ಮುಸ್ಲಿಂ ಮಹಿಳೆ ತನಗೆ ಮತ್ತು ತನ್ನ ಅವಲಂಬಿತ ಮಕ್ಕಳಿಗೆ ತನ್ನ ಪತಿಯಿಂದ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹಳಾಗಿದ್ದಾಳೆ. ಹೆಚ್ಚುವರಿಯಾಗಿ, ಅವಳು ತನ್ನ ಅಪ್ರಾಪ್ತ ಮಕ್ಕಳ ಪಾಲನೆಯನ್ನು ಪಡೆಯಬಹುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್