ಇಟಲಿಯಲ್ಲಿ ನಡೆಯಲಿರುವ ಶಾಂತಿ ಸಮಾವೇಶಕ್ಕೆ ಹೋಗಲು ಮಮತಾ ಬ್ಯಾನರ್ಜಿಗೆ ಅನುಮತಿ ನೀಡದ ಕೇಂದ್ರ ಸರ್ಕಾರ
ಇಟಲಿಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸಲು ಅನುಮತಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಟಿಎಂಸಿ ಕಿಡಿ ಕಾರಿದೆ.
ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶ (World Peace Conference)ದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ರಾಜಕೀಯ ಆಯಾಮದಿಂದ ಅನುಮತಿಯನ್ನು ನಿರಾಕರಿಸಲಾಗಿದೆ ಮತ್ತು ಯಾವುದೇ ರಾಜ್ಯದ ಮುಖ್ಯಮಂತ್ರಿಗಳ ಪಾಲ್ಗೊಳ್ಳುವಿಕೆಗೆ ತಕ್ಕದಾದ ಕಾರ್ಯಕ್ರಮ ಇದಲ್ಲ ಎಂದು ಹೇಳಲಾಗಿದೆ.
ಅಕ್ಟೋಬರ್ನಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್, ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ ಭಾಗವಹಿಸಲಿದ್ದಾರೆ. ಈ ಸಮ್ಮೇಳನ ಮದರ್ ತೆರೇಸಾರನ್ನು ಕೇಂದ್ರೀಕರಿಸಿ ನಡೆಯಲಿದೆ. ಇನ್ನು ಸಮ್ಮೇಳನಕ್ಕೆ ಯಾವುದೇ ನಿಯೋಗದೊಂದಿಗೆ ಬರಬಾರದು ಎಂದು ಇಟಲಿ ಸರ್ಕಾರ ಮಮತಾ ಬ್ಯಾನರ್ಜಿಯವರಿಗೆ ಮನವಿ ಮಾಡಿತ್ತು. ಅದಾದ ಬಳಿಕ ದೀದಿ, kಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆಯಿಂದ ಅನುಮತಿ ಕೋರಿದ್ದರು.
ಆಕ್ಷೇಪ ವ್ಯಕ್ತಪಡಿಸಿದ ಟಿಎಂಸಿ ಇಟಲಿಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಲು ಅನುಮತಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಟಿಎಂಸಿ ಕಿಡಿ ಕಾರಿದೆ. ದೀದಿಯವರ ರೋಮ್ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ. ಈ ಹಿಂದೆ ಚೀನಾ ಪ್ರವಾಸಕ್ಕೂ ಅನುಮತಿ ನೀಡಿಲ್ಲ. ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ಭಾರತದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಾವೂ ಕೂಡ ಅದನ್ನು ಒಪ್ಪಿಕೊಂಡಿದ್ದೆವು. ಆದರೆ, ಮೋದಿಯವರೇ, ಈಗ ಇಟಲಿಗೂ ಯಾಕೆ ಹೋಗಲು ಬಿಡುತ್ತಿಲ್ಲ ಎಂದು ಟಿಎಂಸಿ ವಕ್ತಾರ ದೇಬಾಂಶು ಭಟ್ಟಾಚಾರ್ಯ ದೇವ್ ಟ್ವೀಟ್ ಮಾಡಿದ್ದಾರೆ.
Central government denied permission for Didi’s Rome trip!
Previously they’ve cancelled the permission of China trip too. We accepted that decision with keeping international relations and India’s interests in mind.
Now why Italy Modi ji? What is your problem with Bengal? Chi!
— Debangshu Bhattacharya Dev (@ItsYourDev) September 25, 2021
ಇದನ್ನೂ ಓದಿ: 200 ಕೋಟಿ ರೂ. ವಂಚನೆ ಕೇಸ್; ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಸಂಕಷ್ಟ
ಕೊಪ್ಪಳ: ದಲಿತ ವ್ಯಕ್ತಿ ದೇಗುಲ ಪ್ರವೇಶ ಮಾಡಿದ್ದಕ್ಕೆ ದಂಡ; ಎಂಟು ಜನರ ವಿರುದ್ಧ ಪ್ರಕರಣ ದಾಖಲು
(Centre denies permission to West Bengal CM Mamata Banerjee to take part in peace conference in Italy)