AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜ್ಬ್-ಉತ್-ತಹ್ರೀರ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ಈ ಸಂಘಟನೆಯು ವಿವಿಧ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದೆ, ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಮತ್ತು ಭಯೋತ್ಪಾದನಾ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸಲು ಯುವಕರನ್ನು ಆಮೂಲಾಗ್ರಗೊಳಿಸುವುದು ಸೇರಿದಂತೆ, ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಭಯೋತ್ಪಾದಕ ಶಕ್ತಿಗಳನ್ನು ಕಬ್ಬಿಣದ ಕಡಲೆಯಿಂದ ಎದುರಿಸುವ ಮೂಲಕ ಭಾರತವನ್ನು ಸುರಕ್ಷಿತಗೊಳಿಸಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ

ಹಿಜ್ಬ್-ಉತ್-ತಹ್ರೀರ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
|

Updated on: Oct 10, 2024 | 7:27 PM

Share

ದೆಹಲಿ ಅಕ್ಟೋಬರ್ 10: ನರೇಂದ್ರ ಮೋದಿ (Narendra Modi) ಸರ್ಕಾರ ಗುರುವಾರ ‘ಹಿಜ್ಬ್-ಉತ್-ತಹ್ರೀರ್’ (Hizb-Ut-Tahrir) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. “ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಯನ್ನು ಅನುಸರಿಸಿ, ಕೇಂದ್ರ ಗೃಹ ಸಚಿವಾಲಯ ಇಂದು ‘ಹಿಜ್ಬ್-ಉತ್-ತಹ್ರೀರ್’ ಅನ್ನು ‘ಭಯೋತ್ಪಾದಕ ಸಂಘಟನೆ’ ಎಂದು ಘೋಷಿಸಿತು,” ಎಂದು ಅಮಿತ್ ಶಾ (Amit Shah) ಟ್ವೀಟ್ ಮಾಡಿದ್ದಾರೆ.

“ಈ ಸಂಘಟನೆಯು ವಿವಿಧ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದೆ, ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಮತ್ತು ಭಯೋತ್ಪಾದನಾ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸಲು ಯುವಕರನ್ನು ಆಮೂಲಾಗ್ರಗೊಳಿಸುವುದು ಸೇರಿದಂತೆ, ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಭಯೋತ್ಪಾದಕ ಶಕ್ತಿಗಳನ್ನು ಕಬ್ಬಿಣದ ಕಡಲೆಯಿಂದ ಎದುರಿಸುವ ಮೂಲಕ ಭಾರತವನ್ನು ಸುರಕ್ಷಿತಗೊಳಿಸಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಗೆಜೆಟ್ ಅಧಿಸೂಚನೆಯಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು (MHA) ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಸುರಕ್ಷಿತ ಅಪ್ಲಿಕೇಶನ್‌ಗಳು ಮತ್ತು ಯುವಕರನ್ನು ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು ‘ದವಾ’ ಸಭೆಗಳನ್ನು ನಡೆಸುವ ಮೂಲಕ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದೆ.

HuT ಎಂಬುದು ದೇಶದ ನಾಗರಿಕರನ್ನು ಒಳಗೊಳ್ಳುವ ಮೂಲಕ ಜಿಹಾದ್ ಮತ್ತು ಭಯೋತ್ಪಾದಕ ಚಟುವಟಿಕೆಗಳ ಮೂಲಕ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಉರುಳಿಸುವ ಮೂಲಕ ಭಾರತ ಸೇರಿದಂತೆ ಜಾಗತಿಕವಾಗಿ ಇಸ್ಲಾಮಿಕ್ ರಾಜ್ಯ ಮತ್ತು ಕ್ಯಾಲಿಫೇಟ್ ಅನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಆಂತರಿಕ ಭದ್ರತೆಗೆ ಗಂಭೀರ ಬೆದರಿಕೆಯಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಬುಧವಾರ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪುದುಚೇರಿಯಲ್ಲಿ “ಭಾರತ ವಿರೋಧಿ ಸಂಘಟನೆಯ ಸಿದ್ಧಾಂತವನ್ನು ಪ್ರಚಾರ ಮಾಡುವ ಮೂಲಕ” ಅತೃಪ್ತಿ ಮತ್ತು ಪ್ರತ್ಯೇಕತಾವಾದವನ್ನು ಹರಡಲು ಸಂಬಂಧಿಸಿದ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ (HuT) ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿತ್ತು.

ಇದನ್ನೂ ಓದಿ: ರತನ್ ಟಾಟಾಗೆ ಅಂತಿಮ ವಿದಾಯ; ಪೂರ್ಣ ಸರ್ಕಾರಿ ಗೌರವ ಸಲ್ಲಿಕೆ; ಒಂದು ದಿನ ಶೋಕಾಚರಣೆ ಘೋಷಿಸಿದ ಮಹಾ ಸರ್ಕಾರ

ಹಿಜ್ಬ್-ಉತ್-ತಹ್ರೀರ್ ಏನದು?

1953 ರಲ್ಲಿ ಜೆರುಸಲೆಮ್‌ನಲ್ಲಿ ಸ್ಥಾಪಿಸಲಾದ ಹಿಜ್ಬ್-ಉತ್-ತಹ್ರೀರ್, ಜಾಗತಿಕ ಪ್ಯಾನ್-ಇಸ್ಲಾಮಿಕ್ ಗುಂಪಾಗಿದೆ. ಗುಂಪಿನ ಪ್ರಧಾನ ಕಚೇರಿ. ಲೆಬನಾನ್‌ನಲ್ಲಿದೆ ಮತ್ತು ಇದು ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್, ಕೆನಡಾ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಕನಿಷ್ಠ 30 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ.

HuT ಇಸ್ರೇಲ್ ಮತ್ತು ಯಹೂದಿಗಳ ವಿರುದ್ಧದ ದಾಳಿಗಳನ್ನು ಹೆಚ್ಚು ವ್ಯಾಪಕವಾಗಿ ಪ್ರಶಂಸಿಸುವ ಮತ್ತು ಆಚರಿಸುವ ಇತಿಹಾಸವನ್ನು ಹೊಂದಿದೆ. ಹಲವಾರು ದೇಶಗಳು ತಮ್ಮ ವಿಧ್ವಂಸಕ ಚಟುವಟಿಕೆಗಳಿಗಾಗಿ HuT ಅನ್ನು ನಿಷೇಧಿಸಿವೆ. ಈಗಾಗಲೇ ಗುಂಪನ್ನು ನಿಷೇಧಿಸಿದ ದೇಶಗಳಲ್ಲಿ ಜರ್ಮನಿ, ಈಜಿಪ್ಟ್, ಯುಕೆ ಮತ್ತು ಹಲವಾರು ಮಧ್ಯ ಏಷ್ಯಾ ಮತ್ತು ಅರಬ್ ದೇಶಗಳು ಸೇರಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ