ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆಬ್ರವರಿ 28ರವರೆಗೂ ವಿಸ್ತರಣೆ
ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಕೇಂದ್ರ ಸರ್ಕಾರ ಹೇರಿದ್ದ ನಿರ್ಬಂಧವನ್ನು ಇದೀಗ ಫೆಬ್ರವರಿ 28ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸುತ್ತೋಲೆ ಹೊರಡಿಸಿದೆ.
ದೆಹಲಿ: ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಕೇಂದ್ರ ಸರ್ಕಾರ ಹೇರಿದ್ದ ನಿರ್ಬಂಧವನ್ನು ಇದೀಗ ಫೆಬ್ರವರಿ 28ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸುತ್ತೋಲೆ ಹೊರಡಿಸಿದೆ.
ಆದರೆ, ಪ್ರಸ್ತುತ ನಿರ್ಬಂಧ ಅಂತಾರಾಷ್ಟ್ರೀಯ ಸರಕು ವಿಮಾನಗಳು ಮತ್ತು DGCA ಅನುಮೋದಿತ ಫ್ಲೈಟ್ಗಳಿಗೆ ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, ಕೆಲವು ನಿಗದಿತ ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಅನುಮತಿ ನೀಡಲು ಪರಿಶೀಲನೆ ನಡೆಸಲಾಗುವುದು ಎಂದು DGCA ಮಾಹಿತಿ ನೀಡಿದೆ.
Govt extends ban on international scheduled commercial flights to/from India till Feb 28; restrict shall not apply to international all-cargo operations & DGCA-approved flights pic.twitter.com/dz2e4polG2
— ANI (@ANI) January 28, 2021
ದುರಸ್ತಿ ಕಾರ್ಯ: ಜ.31ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ
Published On - 8:32 pm, Thu, 28 January 21