ಥಿಯೇಟರ್‌ಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ -ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

|

Updated on: Jan 30, 2021 | 11:19 PM

ಥಿಯೇಟರ್‌ಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಸಿನಿಮಾ ವೀಕ್ಷಿಸಲು ಅವಕಾಶ ನೀಡಲಾಗಿದೆ. ಈ ಕುರಿತು, ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದೆ.

ಥಿಯೇಟರ್‌ಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ -ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಚಿತ್ರಮಂದಿರ
Follow us on

ದೆಹಲಿ: ಥಿಯೇಟರ್‌ಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಸಿನಿಮಾ ವೀಕ್ಷಿಸಲು ಅವಕಾಶ ನೀಡಲಾಗಿದೆ. ಈ ಕುರಿತು, ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದೆ.

ಕೇಂದ್ರ ಸರ್ಕಾರ ಇದೀಗ ಶೇ.100ರಷ್ಟು ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಲು ಅವಕಾಶ ನೀಡಿದೆ. ಈ ಹಿಂದೆ, ಶೇಕಡಾ 50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ಜೊತೆಗೆ, ಈಜುಕೊಳಗಳ ಪುನರಾರಂಭಕ್ಕೆ ಕೇಂದ್ರ ಅನುಮತಿ ನೀಡಿದೆ. ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವಾಲಯ ದಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ಈಜುಕೊಳದಲ್ಲಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಈಜುವಾಗ ಬಿಟ್ಟು ಉಳಿದ ಸಮಯದಲ್ಲಿ ಮಾಸ್ಕ್ ಧರಿಸಬೇಕು. ಜೊತೆಗೆ, 65 ವರ್ಷ ಮೇಲ್ಪಟ್ಟವರು,ಮಕ್ಕಳು,ಗರ್ಭಿಣಿಯರಿಗೆ ಈಜುಕೊಳಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿದೆ.

ಇದಲ್ಲದೆ, ವಸ್ತು ಪ್ರದರ್ಶನ ಆಯೋಜಿಸಲು ಕೇಂದ್ರದಿಂದ ಅನುಮತಿ ಸಿಕ್ಕಿದೆ. ಕೇಂದ್ರ ವಾಣಿಜ್ಯ ಸಚಿವಾಲಯದಿಂದ ಗೈಡ್‌ಲೈನ್ಸ್‌ ರಿಲೀಸ್‌ ಆಗಿದೆ.

ದೈಹಿಕ ಅಂತರದೊಂದಿಗೆ ವಸ್ತು ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಜೊತೆಗೆ, ವಸ್ತು ಪ್ರದರ್ಶನ ವೇಳೆ ಕೊವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

‘​ಕನ್ನಡದ ಅನಿವಾರ್ಯತೆಯನ್ನು ನಾವು ಸೃಷ್ಟಿ ಮಾಡಬೇಕು.. ಆಗ ಕನ್ನಡೇತರರು ಕೂಡ ನಮ್ಮ ಭಾಷೆ ಕಲೀತಾರೆ’

Published On - 11:04 pm, Sat, 30 January 21