ಸಿನಿ ಪ್ರಿಯರಿಗೆ ಗುಡ್ ನ್ಯೂಸ್: ಶೂಟಿಂಗ್ ನಡೆಸೋಕೆ ಕೇಂದ್ರದಿಂದ ಸಿಕ್ತು ಗ್ರೀನ್ ಸಿಗ್ನಲ್
ದೆಹಲಿ: ದೇಶದಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಪುನಾರಂಭಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್ ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಚಿತ್ರೀಕರಣ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಲೇಬೇಕು. ಕ್ಯಾಮರಾ ಮುಂದೆ ಪಾತ್ರ ನಿರ್ವಹಿಸುವವರನ್ನು ಹೊರತಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು ಎಂದು ಜಾವಡೇಕರ್ ತಿಳಿಸಿದ್ದಾರೆ. ಜೊತೆಗೆ, ಚಿತ್ರೀಕರಣ ಚಟುವಟಿಕೆಗಳಿಗೆ ಕೇಂದ್ರದಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಯಾಗಿದ್ದು ಚಿತ್ರೀಕರಣದ ವೇಳೆ ಸಾಮಾಜಿಕ ಅಂತರ […]
ದೆಹಲಿ: ದೇಶದಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಪುನಾರಂಭಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್ ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಚಿತ್ರೀಕರಣ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಲೇಬೇಕು. ಕ್ಯಾಮರಾ ಮುಂದೆ ಪಾತ್ರ ನಿರ್ವಹಿಸುವವರನ್ನು ಹೊರತಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು ಎಂದು ಜಾವಡೇಕರ್ ತಿಳಿಸಿದ್ದಾರೆ. ಜೊತೆಗೆ, ಚಿತ್ರೀಕರಣ ಚಟುವಟಿಕೆಗಳಿಗೆ ಕೇಂದ್ರದಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಯಾಗಿದ್ದು ಚಿತ್ರೀಕರಣದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಕಡ್ಡಾಯ ನಿಯಮವನ್ನು ಜಾರಿಗೊಳಿಸಲಾಗಿದೆ.
ಕೇಂದ್ರದ ನಿರ್ಧಾರದಿಂದ ಇದೀಗ ಸಿನಿ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಜೊತಗೆ, ಸಿನಿಮಾಗಳನ್ನ ವೀಕ್ಷಿಸೋಕೆ ಚಿತ್ರಮಂದಿರಗಳನ್ನು ತೆರೆಯೋಕೆ ಅನುಮತಿ ಸಹ ಸಿಗಬಹುದು ಎಂಬ ಭರವಸೆ ಹುಟ್ಟಿದೆ.