AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ, ಅವರನ್ನು ಸಂಕಷ್ಟಕ್ಕೊಳಗಾಗಲು ಬಿಡುವುದಿಲ್ಲ: ಮೋದಿ

PM Modi in Sikar: ಹಳ್ಳಿಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ಭಾರತ ಅಭಿವೃದ್ಧಿ ಹೊಂದಲು ಸಾಧ್ಯ. ನಮ್ಮ ಸರ್ಕಾರವು ನಗರಗಳಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಹಳ್ಳಿಗಳಲ್ಲಿ ಒದಗಿಸಲು ಕೆಲಸ ಮಾಡುತ್ತಿದೆ. ಯೂರಿಯಾ ಬೆಲೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಮೋದಿ ಹೇಳಿದರು.

ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ, ಅವರನ್ನು ಸಂಕಷ್ಟಕ್ಕೊಳಗಾಗಲು ಬಿಡುವುದಿಲ್ಲ: ಮೋದಿ
ರಾಜಸ್ಥಾನದಲ್ಲಿ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 27, 2023 | 2:09 PM

Share

ಸಿಕಾರ್ ಜುಲೈ 27: ಕೇಂದ್ರ ಸರ್ಕಾರ ಒಂಬತ್ತು ವರ್ಷಗಳಿಂದ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅವರಿಗೆ ಬೀಜದಿಂದ ಮಾರುಕಟ್ಟೆವರೆಗೆ ವ್ಯವಸ್ಥೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. 1.25 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು (PM Kisan Samriddhi Kendras) ರಾಷ್ಟ್ರಕ್ಕೆ ಸಮರ್ಪಿಸಿದ ನಂತರ ರಾಜಸ್ಥಾನದ (Rajasthan) ಸಿಕಾರ್ ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಈ ಕೇಂದ್ರಗಳು ರೈತರಿಗೆ ಒನ್ ಸ್ಟಾಪ್ ಸೆಂಟರ್ ಆಗಿದೆ. ಅದು ಅವರ ಏಳಿಗೆಗೆ ದಾರಿ ಮಾಡಿಕೊಡುತ್ತದೆ ಎಂದಿದ್ದಾರೆ.

ಸಿಕಾರ್‌ನಲ್ಲಿ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ದೇಶದ ರೈತರು ಪಿಎಂ ಕಿಸಾನ್ ಸಮೃದ್ಧಿ ಅಡಿಯಲ್ಲಿ ₹ 18,000 ಕೋಟಿಗಳನ್ನು ಸ್ವೀಕರಿಸಿದ್ದಾರೆ. ಇಂದು, ದೇಶದಲ್ಲಿ 1,25,000 PM ಕಿಸಾನ್ ಸಮೃದ್ಧಿ ಕೇಂದ್ರಗಳು (PMKSKs) ಕೇಂದ್ರಗಳು ಪ್ರಾರಂಭವಾಗಿವೆ. ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ PMKSY ಕೇಂದ್ರಗಳು ರೈತರಿಗೆ ಪ್ರಯೋಜನವನ್ನು ನೀಡುತ್ತವೆ. ಡಿಜಿಟಲ್ ವಾಣಿಜ್ಯಕ್ಕಾಗಿ ಮುಕ್ತ ನೆಟ್‌ವರ್ಕ್ (ONDC) ಸಹ ರೈತರಿಗೆ ಪ್ರಾರಂಭವಾಗಿದೆ. ಹೊಸ ಯೂರಿಯಾ ಗೋಲ್ಡ್ ಪ್ರಾರಂಭಿಸಲಾಗಿದೆ.

ರಾಜಸ್ಥಾನದ ವಿವಿಧ ಪ್ರದೇಶಗಳು ವೈದ್ಯಕೀಯ ಕಾಲೇಜುಗಳು ಮತ್ತು ಏಕಲವ್ಯ ಮಾದರಿ ಶಾಲೆಗಳನ್ನು ಸಹ ಪಡೆದಿವೆ ಎಂದಿದ್ದಾರೆ. ರೈತರ ಶಕ್ತಿ ಮತ್ತು ರೈತರ ಶ್ರಮವು ಮಣ್ಣಿನಿಂದ ಚಿನ್ನವನ್ನು ಹೊರತೆಗೆಯುತ್ತದೆ. ಅದಕ್ಕಾಗಿಯೇ ನಮ್ಮ ಸರ್ಕಾರವು ದೇಶದ ರೈತರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

‘ಸ್ವಾತಂತ್ರ್ಯ ಬಂದು ಹಲವು ದಶಕಗಳ ನಂತರ ಇಂತಹ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೈತನ ನೋವು-ನಲಿವುಗಳನ್ನು ಅರಿತು, ರೈತನ ಕಾಳಜಿಯನ್ನು ಅರ್ಥಮಾಡಿಕೊಂಡಿದೆ. ಅದಕ್ಕಾಗಿಯೇ ಕಳೆದ ಒಂಬತ್ತು ವರ್ಷಗಳಲ್ಲಿ ರೈತರ ಹಿತದೃಷ್ಟಿಯಿಂದ ನಿರಂತರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜಸ್ಥಾನದಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ನಾವು ಆಹ್ವಾನಿಸಿದ್ದೇವೆ, ಆದರೆ ನಿಮ್ಮ ಕಚೇರಿ ನಿರಾಕರಿಸಿದೆ: ಅಶೋಕ್ ಗೆಹ್ಲೋಟ್ ಆರೋಪಕ್ಕೆ ಪಿಎಂಒ ಉತ್ತರ

ಹಳ್ಳಿಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ಭಾರತ ಅಭಿವೃದ್ಧಿ ಹೊಂದಲು ಸಾಧ್ಯ. ನಮ್ಮ ಸರ್ಕಾರವು ನಗರಗಳಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಹಳ್ಳಿಗಳಲ್ಲಿ ಒದಗಿಸಲು ಕೆಲಸ ಮಾಡುತ್ತಿದೆ. ಯೂರಿಯಾ ಬೆಲೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಮೋದಿ ಹೇಳಿದರು.

ಭಾರತದ ರೈತರು, 266 ರೂ.ಗೆ ಯೂರಿಯಾ ಚೀಲವನ್ನು ಪಡೆಯುತ್ತಾರೆ. ಆದರೆ ಪಾಕಿಸ್ತಾನದಲ್ಲಿ ಇದರ ಬೆಲೆ ಸುಮಾರು 800 ರೂ. ಬಾಂಗ್ಲಾದೇಶದಲ್ಲಿ 720 ರೂ.ಗೆ ಮತ್ತು ಚೀನಾದಲ್ಲಿ 2,100 ರೂ.ಗೆ ಆಗಿದೆ ಎಂದಿದ್ದಾರೆ ಮೋದಿ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾರ್ಯಕ್ರಮಕ್ಕೆ ಬರಬೇಕಿತ್ತು.ಆದರೆ ಅವರ ಕಾಲಿನ ಸಮಸ್ಯೆಯಿಂದಾಗಿ ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಇದಕ್ಕಿಂತ ಮುನ್ನ ಸಿಕಾರ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಮ್ಮ ಭಾಷಣವನ್ನು ರದ್ದುಗೊಳಿಸಿದೆ ಎಂದು ಗೆಹ್ಲೋಟ್ ಆರೋಪಿಸಿದರು. ಆದಾಗ್ಯೂ, ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಗೆಹ್ಲೋಟ್ ಅವರ ಕಚೇರಿಯಿಂದ ತಿಳಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ. ಅವರು ಕಾರ್ಯಕ್ರಮಕ್ಕೆ ಸೇರುವುದಾದರೆ ಅವರನ್ನು ಸ್ವಾಗತಿಸುತ್ತೇವೆ ಎಂದು ಪ್ರಧಾನಿ ಕಚೇರಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Thu, 27 July 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!