ನಿರೀಕ್ಷಿತ ಪ್ರಮಾಣದಲ್ಲಿ ನಡೆಯದ ಲಸಿಕೆ ಅಭಿಯಾನ; ಖಾಸಗಿ ಆಸ್ಪತ್ರೆಗಳ ಶೇ. 25 ರಷ್ಟು ಲಸಿಕೆ ಕೋಟಾ ತಗ್ಗಿಸುವ ಸಾಧ್ಯತೆ

ದೇಶದಲ್ಲಿ ಸದ್ಯ ಉತ್ಪಾದನೆಯಾದ ಕೊರೊನಾ ಲಸಿಕೆಯ ಪೈಕಿ ಶೇ.25 ರಷ್ಟುನ್ನು ಖಾಸಗಿ ಆಸ್ಪತ್ರೆಗಳು ಖರೀದಿಸಲು ಅವಕಾಶ ನೀಡಲಾಗಿದೆ. ಆದರೇ, ಖಾಸಗಿ ಆಸ್ಪತ್ರೆಗಳಿಂದ ಕೊರೊನಾ ಲಸಿಕೆಯ ಖರೀದಿ, ವಿತರಣೆಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಇದರಿಂದಾಗಿ ಈಗ ಕೇಂದ್ರ ಸರ್ಕಾರವು ಖಾಸಗಿ ಆಸ್ಪತ್ರೆಗಳು ಲಸಿಕೆ ಖರೀದಿಸುತ್ತಿರುವ ಪ್ರಮಾಣವನ್ನು ಇಳಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ನಿರೀಕ್ಷಿತ ಪ್ರಮಾಣದಲ್ಲಿ ನಡೆಯದ ಲಸಿಕೆ ಅಭಿಯಾನ; ಖಾಸಗಿ ಆಸ್ಪತ್ರೆಗಳ ಶೇ. 25 ರಷ್ಟು ಲಸಿಕೆ ಕೋಟಾ ತಗ್ಗಿಸುವ ಸಾಧ್ಯತೆ
ಲಸಿಕೆಯ ಪ್ರಾತಿನಿಧಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jul 29, 2021 | 10:34 AM

ದೆಹಲಿ: ನಮ್ಮ ದೇಶದಲ್ಲಿ ನಿರೀಕ್ಷಿತ ರೀತಿಯಲ್ಲಿ ಕೊರೊನಾ ಲಸಿಕೆಯ ಅಭಿಯಾನ ನಡೆಯುತ್ತಿಲ್ಲ. ಒಂದೆಡೆ ಬೇಡಿಕೆಗೆ ತಕ್ಕಂತೆ ಕೊರೊನಾ ಲಸಿಕೆಯ ಉತ್ಪಾದನೆಯಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಿಗೆ ಉತ್ಪಾದನೆಯಾದ ಲಸಿಕೆಯ ಪೈಕಿ ಶೇ.25 ರಷ್ಟು ಪ್ರಮಾಣದ ಲಸಿಕೆಯನ್ನು ಖರೀದಿಸಿ ಜನರಿಗೆ ನೀಡಲು ಅವಕಾಶ ನೀಡಲಾಗಿದೆ. ಆದರೇ, ಖಾಸಗಿ ಆಸ್ಪತ್ರೆಗಳು ತಮಗೆ ನಿಗದಿಪಡಿಸಿದ ಕೋಟಾದಷ್ಟು ಕೊರೊನಾ ಲಸಿಕೆಯನ್ನು ಖರೀದಿಸುತ್ತಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಖಾಸಗಿ ಆಸ್ಪತ್ರೆಗಳು ಜನರಿಗೆ ಕೊರೊನಾ ಲಸಿಕೆ ನೀಡುತ್ತಿಲ್ಲ. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಶೇ.25 ರಷ್ಟು ಕೊರೊನಾ ಲಸಿಕೆ ಖರೀದಿಗೆ ನೀಡಿರುವ ಪ್ರಮಾಣವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುತ್ತೆ.

ಮೇ ತಿಂಗಳಿನಲ್ಲಿ ಖಾಸಗಿ ಆಸ್ಪತ್ರೆಗಳು 1.27 ಕೋಟಿ ಡೋಸ್ ಕೊರೊನಾ ಲಸಿಕೆಯನ್ನು ಮಾತ್ರ ಖರೀದಿಸಿವೆ. ಆದರೆ, ಮೇ ತಿಂಗಳಿನಿಂದ ಜೂನ್ 15ರವರೆಗೆ 83.61 ಲಕ್ಷ ಡೋಸ್ ಕೊರೊನಾ ಲಸಿಕೆಯನ್ನು ಮಾತ್ರ ಜನರಿಗೆ ನೀಡಿವೆ. ಉಳಿದ ಲಸಿಕೆಯು ಇನ್ನೂ ಖಾಸಗಿ ಆಸ್ಪತ್ರೆಗಳ ಬಳಿಯೇ ಸ್ಟಾಕ್ ಇದೆ. ಹೀಗಾಗಿ ಪ್ರತಿ ತಿಂಗಳು ಉತ್ಪಾದನೆಯಾದ ಲಸಿಕೆಯ ಪೈಕಿ ಶೇ.25 ರಷ್ಟುನ್ನು ಖರೀದಿಸಲು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಪ್ರಮಾಣವನ್ನು ಇಳಿಕೆ ಮಾಡುವುದು ಸೂಕ್ತ ಎಂಬ ನಿಲುವಿಗೆ ಕೇಂದ್ರ ಸರ್ಕಾರ ಬಂದಿದೆ. ಜೊತೆಗೆ ಅನೇಕ ರಾಜ್ಯ ಸರ್ಕಾರಗಳು ಕೂಡ ಕೇಂದ್ರ ಸರ್ಕಾರವು ಲಸಿಕಾ ಕಂಪನಿಗಳಿಂದ ಶೇ.75 ರಷ್ಟು ಪ್ರಮಾಣದ ಲಸಿಕೆ ಖರೀದಿಸುತ್ತಿರುವುದನ್ನು ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿವೆ. ರಾಜ್ಯ ಸರ್ಕಾರಗಳಿಗೆ ಇನ್ನೂ ಹೆಚ್ಚಿನ ಪ್ರಮಾಣದ ಲಸಿಕೆಯನ್ನು ನೀಡುವ ಸಾಮರ್ಥ್ಯ ಇದೆ. ಜನರಿಂದಲೂ ಕೊರೊನಾ ಲಸಿಕೆಯನ್ನು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಪಡೆಯಲು ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಕೇಂದ್ರ ಸರ್ಕಾರವು ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಖರೀದಿಗೆ ನೀಡಿರುವ ಪ್ರಮಾಣವನ್ನು ಕಡಿತ ಮಾಡಿ, ಕೇಂದ್ರ ಸರ್ಕಾರವೇ ಹೆಚ್ಚಿನ ಲಸಿಕೆ ಖರೀದಿಸಿ ಪೂರೈಸಬೇಕೆಂದು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.

ಖಾಸಗಿ ಆಸ್ಪತ್ರೆಗಳು ಜುಲೈ ತಿಂಗಳಿನಲ್ಲಿ ತಮಗೆ ನಿಗದಿಪಡಿಸಿದ್ದ ಲಸಿಕೆಯನ್ನು ಖರೀದಿಸಿ ಪೂರೈಸದೇ ಇರುವುದರಿಂದ ದೇಶದ ಲಸಿಕಾ ಅಭಿಯಾನಕ್ಕೆ ವೇಗ ಸಿಕ್ಕಿಲ್ಲ. ಖಾಸಗಿ ಆಸ್ಪತ್ರೆಗಳು 2.28 ಕೋಟಿ ಡೋಸ್ ಲಸಿಕೆ ಖರೀದಿಸಲು ಅವಕಾಶ ಇದ್ದರೂ ಖರೀದಿಸಿ ಬಳಕೆ ಮಾಡಿಕೊಂಡಿಲ್ಲ. ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡುತ್ತಿರುವುದರಿಂದ ಜನರು ಖಾಸಗಿ ಆಸ್ಪತ್ರೆಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಲು ಹೋಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್ ಲಸಿಕೆಗೆ ಪ್ರತಿ ಡೋಸ್ ಗೆ 780 ರೂಪಾಯಿ, ಕೊವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ಗೆ 1,410 ರೂಪಾಯಿ ದರ ವಿಧಿಸುತ್ತಿವೆ. ಇದರ ಜೊತೆಗೆ ಪ್ರತಿ ಡೋಸ್ ಗೆ 150 ರೂಪಾಯಿ ಸೇವಾ ಶುಲ್ಕ ಕೂಡ ವಸೂಲಿ ಮಾಡುತ್ತಿವೆ.

ಕಳೆದ ವಾರ ಸಿಐಐ ಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಪಿಯೂಶ್ ಗೋಯಲ್, ನೀವೆಲ್ಲಾ ಕೊರೊನಾ ಲಸಿಕೆಯನ್ನು ಖಾಸಗಿ ವಲಯ ಕೂಡ ಖರೀದಿಸಿ ವಿತರಿಸಲು ಅವಕಾಶ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಿರಿ. ಆದರೇ ಈಗ ನಿಮಗೆ ಹಂಚಿಕೆ ಮಾಡಿರುವ ಶೇ.25 ರಷ್ಟು ಲಸಿಕೆಯನ್ನು ಖರೀದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಇನ್ನೂ ಈಗ ಕೇಂದ್ರ ಸರ್ಕಾರವು ಖಾಸಗಿ ವಲಯದ ಕೊರೊನಾ ಲಸಿಕೆಯ ಖರೀದಿಯ ಕೋಟಾ ಕಡಿತ ಮಾಡುವ ಬಗ್ಗೆ ಲಸಿಕಾ ಉತ್ಪಾದಕ ಕಂಪನಿಗಳ ಜೊತೆಗೆ ಮಾತುಕತೆಯನ್ನು ನಡೆಸಬೇಕು. ಏಕೆಂದರೇ, ಲಸಿಕಾ ಉತ್ಪಾದಕರಿಗೆ ಖಾಸಗಿ ವಲಯಕ್ಕೆ ಲಸಿಕೆ ಮಾರಾಟದಿಂದ ಹೆಚ್ಚಿನ ಆದಾಯ ಸಿಗುತ್ತಿದೆ. ಕೇಂದ್ರ ಸರ್ಕಾರವು ಈಗ ಪ್ರತಿ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು 205 ರೂಪಾಯಿ ಹಾಗೂ ಕೊವ್ಯಾಕ್ಸಿನ್ ಲಸಿಕೆಯನ್ನು ಪ್ರತಿ ಡೋಸ್ ಗೆ 215 ರೂಪಾಯಿಗೆ ಖರೀದಿಸುತ್ತಿದೆ. ಈ ಮೊದಲು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಕಂಪನಿ ಹಾಗೂ ಭಾರತ್ ಬಯೋಟೆಕ್ ಕಂಪನಿಯಿಂದ ಪ್ರತಿ ಡೋಸ್ ಲಸಿಕೆಯನ್ನು 150 ರೂಪಾಯಿಗೆ ಖರೀದಿ ಮಾಡಿತ್ತು.

ಇದನ್ನೂ ಓದಿ: ಆಗಸ್ಟ್ ತಿಂಗಳಲ್ಲಿ ಭಾರತಕ್ಕೆ 15 ಕೋಟಿ ‌ಕೊರೊನಾ ಲಸಿಕೆ ಸಿಗಲಿದೆ: ಕೇಂದ್ರ ಸರ್ಕಾರ

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು