ದೆಹಲಿ ಅಕ್ಟೋಬರ್ 14: ಚಂದ್ರಯಾನ-3 (Chandrayaan-3)ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ (National Space Day) ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಭಾರತ ಸರ್ಕಾರವು ಈ ಐತಿಹಾಸಿಕ ಕ್ಷಣವನ್ನು ಸ್ಮರಣಾರ್ಥವಾಗಿ ಪ್ರತಿವರ್ಷ ಆಗಸ್ಟ್ 23 ನೇ ದಿನವನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಘೋಷಿಸಿದೆ ಎಂದು ಅಕ್ಟೋಬರ್ 13 ರಂದು ಬಾಹ್ಯಾಕಾಶ ಇಲಾಖೆ (Department of Space) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಭಾರತವು ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿದ್ದು, ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗಿದೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು ಪ್ರಗ್ಯಾನ್ ರೋವರ್ ಅನ್ನು ಚಂದ್ರನ ಮೇಲೆ ನಿಯೋಜಿಸಿತ್ತು.
ಈ ಐತಿಹಾಸಿಕ ಕಾರ್ಯಾಚರಣೆಯ ಫಲಿತಾಂಶವು ಮುಂಬರುವ ವರ್ಷಗಳಲ್ಲಿ ಮನುಕುಲಕ್ಕೆ ಪ್ರಯೋಜನವನ್ನು ನೀಡುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Government of India declares August 23 of every year as ‘National Space Day’ to commemorate the success of the Chandrayaan-3 Mission on 23rd August 2023 with the landing of the Vikram lander and deployment of the Pragyaan Rover on the lunar surface. pic.twitter.com/5BSXJH5LCO
— ANI (@ANI) October 14, 2023
ಆಗಸ್ಟ್ 23 ಬಾಹ್ಯಾಕಾಶ ಮಿಷನ್‌ಗಳಲ್ಲಿನ ದೇಶದ ಪ್ರಗತಿಯಲ್ಲಿ ಪ್ರಮುಖ ಮೈಲುಗಲ್ಲನ್ನು ಗುರುತಿಸಿದೆ. ಇದು ಯುವ ಪೀಳಿಗೆಗೆ STEM ಅನ್ನು ಅನುಸರಿಸುವಲ್ಲಿ ಹೆಚ್ಚಿನ ಆಸಕ್ತಿಯನ್ನು ಪ್ರೇರೇಪಿಸಿತು ಮತ್ತು ಬಾಹ್ಯಾಕಾಶ ಕ್ಷೇತ್ರಕ್ಕೆ ಪ್ರಮುಖ ಪ್ರಚೋದನೆಯನ್ನು ಒದಗಿಸಿತು.
ಇದನ್ನೂ ಓದಿ: ಚಂದ್ರಯಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದ ಕೇಂದ್ರ ಸಚಿವ ಸಂಪುಟ
ಆಗಸ್ಟ್ 26 ರಂದು ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಧಾನ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದ್ದರು.
“ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಮ್ಮ ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಮೋದಿ ಬೆಂಗಳೂರಿನಲ್ಲಿ ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:27 pm, Sat, 14 October 23