AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ವಿಡಿಯೋ ಡಿಲೀಟ್, ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್‌ಗೆ ಸಮನ್ಸ್: ‘ಮೆಟಾ’ ವಿವರಣೆಗೆ ಕೇಂದ್ರ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಪರೀಕ್ಷಾ ಸುಧಾರಣೆ ಕುರಿತ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್ ಅವರಿಗೆ ಅಧಿಕೃತ ಸಮನ್ಸ್ ಜಾರಿಗೊಳಿಸಿದೆ. ಇನ್ನೊಂದೆಡೆ, ಈ ತಡೆಹಿಡಿಯುವಿಕೆಗೆ ಮೆಟಾ ಸಂಸ್ಥೆಯು ನೀಡಿರುವ ತಾಂತ್ರಿಕ ದೋಷ ಎಂಬ ಸಮಜಾಯಿಷಿ ಹಾಗೂ ವಿವರಣೆಯ ಕುರಿತು ಭಾರತ ಸರ್ಕಾರವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಮೋದಿ ವಿಡಿಯೋ ಡಿಲೀಟ್, ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್‌ಗೆ ಸಮನ್ಸ್: 'ಮೆಟಾ' ವಿವರಣೆಗೆ ಕೇಂದ್ರ ಅಸಮಾಧಾನ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 28, 2026 | 12:17 PM

Share

ನವದೆಹಲಿ, ಜುಲೈ 28: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಪರೀಕ್ಷಾ ಸುಧಾರಣೆ ಕುರಿತ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್​ಗೆ ಅಧಿಕೃತ ಸಮನ್ಸ್ ಜಾರಿಗೊಳಿಸಿದೆ. ಇನ್ನೊಂದೆಡೆ, ಈ ತಡೆಹಿಡಿಯುವಿಕೆಗೆ ಮೆಟಾ ಸಂಸ್ಥೆಯು ನೀಡಿರುವ ತಾಂತ್ರಿಕ ದೋಷ ಎಂಬ ಸಮಜಾಯಿಷಿ ಹಾಗೂ ವಿವರಣೆಯ ಕುರಿತು ಭಾರತ ಸರ್ಕಾರವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರಿಗೆ ಸಮನ್ಸ್ ನೀಡಿರುವ ಸಚಿವಾಲಯ, ಈ ಘಟನೆ ಹೇಗೆ ಸಂಭವಿಸಿತು ಹಾಗೂ ಯಾವ ಆಧಾರದ ಮೇಲೆ ಪ್ರಧಾನಿಯವರ ಅಧಿಕೃತ ಹೇಳಿಕೆಯ ವೀಡಿಯೊವನ್ನು ‘ಕಾನೂನುಬದ್ಧ ವಿನಂತಿ’ ಎಂಬ ಸಂದೇಶದೊಂದಿಗೆ ತಡೆಹಿಡಿಯಲಾಯಿತು ಎಂಬುದರ ಕುರಿತು ಖುದ್ದು ಹಾಜರಾಗಿ ಸಂಪೂರ್ಣ ತಾಂತ್ರಿಕ ವಿವರಣೆ ನೀಡುವಂತೆ ಆದೇಶಿಸಿದೆ

ಅಕಸ್ಮಾತ್ತಾಗಿ ಹಾಗೂ ತಾಂತ್ರಿಕ ದೋಷದಿಂದ ವೀಡಿಯೊ ಡಿಲೀಟ್ ಆಗಿತ್ತು ಎಂಬ ಮೆಟಾದ ಕ್ಷಮಾಯಾಚನೆಯನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಒಪ್ಪಿಕೊಂಡಿಲ್ಲ. ಸ್ವತಃ ದೇಶದ ಪ್ರಧಾನಿಯವರ ಸಂದೇಶವನ್ನು ಭಾರತೀಯ ಬಳಕೆದಾರರಿಗೆ ಲಭ್ಯವಾಗದಂತೆ ನಿರ್ಬಂಧಿಸುವುದು ಸಾಮಾನ್ಯ ತಾಂತ್ರಿಕ ಎಡವಟ್ಟಾಗಲು ಸಾಧ್ಯವಿಲ್ಲ, ಇದರ ಹಿಂದೆ ಬೇರೆ ಯಾವುದಾದರೂ ತಾಂತ್ರಿಕ ಅಥವಾ ನಿರ್ವಹಣಾ ಲೋಪವಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಓದಿ: ಫೇಸ್​ಬುಕ್​​ನಿಂದ ಪ್ರಧಾನಿ ಮೋದಿ ವೀಡಿಯೊ ಡಿಲೀಟ್: ತಾಂತ್ರಿಕ ದೋಷ ಎಂದು ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ

ವೀಡಿಯೊದಲ್ಲೇನಿತ್ತು?: ಜುಲೈ 23 ರಂದು ಪ್ರಧಾನಿ ಮೋದಿ ಅವರು ‘ಜೆನ್​ ಝಿ’ಯುವಜನತೆಯನ್ನು ಉದ್ದೇಶಿಸಿ ಮಾಡಿದ ಭಾಷಣದ ವೀಡಿಯೊದಲ್ಲಿ, ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವುದಾಗಿ ಹಾಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಧಾನಿ, ಭಾರತದ ಯುವಕರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು ಅಪ್‌ಲೋಡ್ ಮಾಡಿದ ಮೊದಲ ಸೆಲ್ಫಿ ವೀಡಿಯೊವನ್ನು ಫೇಸ್‌ಬುಕ್ ನಿರ್ಬಂಧಿಸುತ್ತದೆ ಎಂದರೆ ಏನರ್ಥ? ಲಕ್ಷಾಂತರ ಭಾರತೀಯರು ಏನನ್ನು ನೋಡಬೇಕು ಅಥವಾ ನೋಡಬಾರದು ಎಂದು ನಿರ್ಧರಿಸುವ ಅಧಿಕಾರವನ್ನು ಮೆಟಾಗೆ ಕೊಟ್ಟವರು ಯಾರು?” ಎಂದು ಬಿಜೆಪಿ ಕಾರ್ಯಕರ್ತೆ ಪ್ರೀತಿ ಗಾಂಧಿ ಖಾರವಾಗಿ ಪ್ರಶ್ನಿಸಿದ್ದರು.

ಜುಲೈ 28 ರ ಮುಂಜಾನೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದ ವೀಡಿಯೊವನ್ನು ‘ತಪ್ಪಾಗಿ’ ತೆಗೆದುಹಾಕಲಾಗಿತ್ತು ಮತ್ತು ತಕ್ಷಣವೇ ದೋಷ ಸರಿಪಡಿಸಿ ಮರುಸ್ಥಾಪಿಸಲಾಗಿದೆ ಎಂದು ಮೆಟಾ ಸಂಸ್ಥೆಯ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ಆಯೋಜಿಸಿದ್ದ 26 ದಿನಗಳ ಸತತ ವಿದ್ಯಾರ್ಥಿ ಆಂದೋಲನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ವೀಡಿಯೊ ಸಂದೇಶ ಬಿಡುಗಡೆ ಮಾಡಿದ್ದರು.

ಪಶ್ನೆ ಪತ್ರಿಕೆ ಸೋರಿಕೆ ಸಾಮಾನ್ಯ ವಿಚಾರವಲ್ಲ, ಇದು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭಾರಿ ನೋವು ತಂದಿದೆ ಎಂದು ಒಪ್ಪಿಕೊಂಡಿದ್ದ ಪ್ರಧಾನಿ, ಪರೀಕ್ಷಾ ಮಾಫಿಯಾ ತಡೆಯಲು ವಿಶೇಷ ‘ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು’ ಸ್ಥಾಪಿಸುವುದಾಗಿ ಹಾಗೂ ಕಠಿಣ ಕಾನೂನು ತರುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದರು. 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ಧಕ್ಕೆಯಾಗದಂತೆ ಸರ್ಕಾರ ಶ್ರಮಿಸಲಿದೆ ಎಂದು ಪ್ರಧಾನಿ ಪ್ರಕಟಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?