AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಲು ಎಎಪಿಗೆ ಕಾಂಗ್ರೆಸ್ ಬೆಂಬಲ ಇಲ್ಲ?

ಕಾಂಗ್ರೆಸ್ ನಾಯಕರು ತಮ್ಮ ಕಳವಳಗಳನ್ನು ತಿಳಿಸಲು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಆದರೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ಹೈಕಮಾಂಡ್‌ಗೆ ಬಿಟ್ಟಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ

ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಲು ಎಎಪಿಗೆ ಕಾಂಗ್ರೆಸ್ ಬೆಂಬಲ ಇಲ್ಲ?
ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ
|

Updated on: May 29, 2023 | 1:27 PM

Share

ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು (Centre’s ordinance) ವಿರೋಧಿಸುವುದಕ್ಕೆ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಕ್ಷವನ್ನು (AAP) ಬೆಂಬಲಿಸುವುದಿಲ್ಲ ಎಂದು ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಸೋಮವಾರ ಹೇಳಿದ್ದಾರೆ. ದೆಹಲಿ ಮತ್ತು ಪಂಜಾಬ್ ಘಟಕಗಳ ಕಾಂಗ್ರೆಸ್ ನಾಯಕರು ಸೋಮವಾರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡುವ ವಿಷಯದ ಬಗ್ಗೆ ಮಾತನಾಡಿದ್ದರು. ಆದರೆ ಈ ಸಂಬಂಧ ಹೈಕಮಾಂಡ್‌ನಿಂದ ಅಂತಿಮ ನಿರ್ಧಾರ ಹೊರಬೀಳಬೇಕಿದೆ.

ಕಾಂಗ್ರೆಸ್ ನಾಯಕರು ತಮ್ಮ ಕಳವಳಗಳನ್ನು ತಿಳಿಸಲು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಆದರೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ಹೈಕಮಾಂಡ್‌ಗೆ ಬಿಟ್ಟಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ

ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಳೆದ ಕೆಲವು ವಾರಗಳಿಂದ ಅನೇಕ ವಿರೋಧ ಪಕ್ಷದ ನಾಯಕರನ್ನು ತಮ್ಮ ಉದ್ದೇಶಕ್ಕಾಗಿ ಬೆಂಬಲಿಸುವ ಪ್ರಯತ್ನದಲ್ಲಿ ಭೇಟಿ ಮಾಡಿದ್ದಾರೆ. ಲೋಕಸಭೆಯಲ್ಲಿ ಸುಗ್ರೀವಾಜ್ಞೆಯನ್ನು ಸೋಲಿಸಲು ಸಂಖ್ಯಾಬಲದ ಕೊರತೆಯಿದೆ ಎಂದು ಎಎಪಿಗೆ ತಿಳಿದಿದೆ. ಆದರೆ ಹೊರಗಿನಿಂದ ಬೆಂಬಲವು ರಾಜ್ಯಸಭೆಯಲ್ಲಿ ಗೆಲ್ಲಲು ಸಹಾಯ ಮಾಡುತ್ತದೆ ಎಂದು ಆಶಿಸುತ್ತಿದೆ.

ಕೇಜ್ರಿವಾಲ್ ಅವರು ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಮತ್ತು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸಿಕ್ಕಿವೆ

ಬಿಜೆಪಿಯನ್ನು ಹೊಗಳಿದ ಕೇಜ್ರಿವಾಲ್ ಅವರ ತಪ್ಪಿನಿಂದಾಗಿ ಕಾಂಗ್ರೆಸ್ ಅವರನ್ನು ಬೆಂಬಲಿಸಬಾರದು ಎಂದು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಶನಿವಾರ ಹೇಳಿದ್ದಾರೆ.

ಇದನ್ನೂ ಓದಿ: Vande Bharat Express: ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಕೆಲವು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ , ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದು ಮತ್ತು ವಿವಿಧ ವಿಧಾನಸಭಾ ಚುನಾವಣೆಗಳು ಸೇರಿದಂತೆ ಕಾಂಗ್ರೆಸ್ ಅನ್ನು ಬೆಂಬಲಿಸಲು ಎಎಪಿ ವಿಫಲವಾದ ಉದಾಹರಣೆಗಳನ್ನು ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ