CERVAVAC Vaccine: ಭಾರತದ ಮೊದಲ ಗರ್ಭಕಂಠ ಕ್ಯಾನ್ಸರ್ ಲಸಿಕೆ ‘CERVAVAC’ ಬಿಡುಗಡೆ ಮಾಡಿದ ಅಮಿತ್ ಶಾ
ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಗರ್ಭಕಂಠದ ಕ್ಯಾನ್ಸರ್ ಲಸಿಕೆ CERVAVAC ಅನ್ನು ದೇಶದ ಗೃಹಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.
ದೆಹಲಿ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಯಾದ CERVAVAC ಅನ್ನು 2023ರ ಜನವರಿ 24, ಮಂಗಳವಾರ, ಭಾರತದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಸಂದರ್ಭದಲ್ಲಿ ಬಿಡುಗಡೆ ಮಾಡಿದೆ. CERVAVAC ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆಯಾಗಿದೆ.
“On the occasion of India’s National Girl Child Day and Cervical Cancer Awareness Month, Serum Institute of India launched the first made-in-India HPV vaccine by the hands of Union Home Minister Amit Shah,” tweets Serum Institute of India CEO Adar Poonawalla pic.twitter.com/2Dnwotikxj
— ANI (@ANI) January 24, 2023
ಪುಣೆ ಮೂಲದ ಫಾರ್ಮಾಸ್ಯುಟಿಕಲ್ ಸಂಸ್ಥೆಯ ಸಿಇಒ ಆದರ್ ಪೂನವಾಲ್ಲಾ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ, ಭಾರತದ ಗೃಹ ಸಚಿವ ಅಮಿತ್ ಶಾ ಮತ್ತು ಎಸ್‌ಐಐನ ಸರ್ಕಾರ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಮಂಗಳವಾರ ಸೆರ್ವಾವಾಕ್ ಅನ್ನು ಬಿಡುಗಡೆ ಮಾಡಿದ್ದಾರೆ.
Published On - 5:32 pm, Tue, 24 January 23