ದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಿಕೆಗಾಗಿ ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮಾ ವೈರಸ್ (HPV) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಬಿಡುಗಡೆ ಮಾಡಲಾಗುವುದು ಮತ್ತು 200-400 ರೂ. ಗೆ ಕೈಗೆಟುಕುವ ಬೆಲೆಯಲ್ಲಿ ಜನರಿಗೆ ಲಭ್ಯವಾಗಲಿದೆ.
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಇಂದು ಲಸಿಕೆಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿರುವುದನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಲಸಿಕೆಗೆ ಸಂಬಂಧಿಸಿದ ಆರ್ & ಡಿ ಚಟುವಟಿಕೆಗಳು ಪೂರ್ಣಗೊಂಡಿವೆ ಮತ್ತು ಮುಂದಿನ ಹಂತವು ಅವುಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವುದು ಎಂದು ವೈಜ್ಞಾನಿಕ ಪೂರ್ಣಗೊಳಿಸುವಿಕೆ ಸೂಚಿಸಲಾಗಿದೆ.
ಆಯುಷ್ಮಾನ್ ಭಾರತ್‌ನಂತಹ ಯೋಜನೆಗಳು ಆರೋಗ್ಯ ರಕ್ಷಣೆಯ ಬಗ್ಗೆ ಯೋಚಿಸುವಂತೆ ಮಾಡಿದೆ ಮತ್ತು ಈ ಬಗ್ಗೆ ನಾವು ನಿಭಾಯಿಸಬಲ್ಲೆವು ಎಂಬ ಶಕ್ತಿ ನಮ್ಮಲ್ಲಿ ಹುಟ್ಟಿದೆ. ಜೈವಿಕ ತಂತ್ರಜ್ಞಾನ ಇಲಾಖೆಯು ಈ ವಿಷಯದಲ್ಲಿ ಮುಂದಾಳತ್ವ ವಹಿಸಿದೆ ಮತ್ತು ಸಹಕಾರಿ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್‌ಐಐ) ಸಿಇಒ ಆದರ್ ಪೂನವಾಲಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೈಗೆಟುಕುವ ಬೆಲೆಯಲ್ಲಿದೆ ಮತ್ತು 200-400 ರೂ. ಗೆ ಲಭ್ಯವಿರುತ್ತದೆ. ಅಂತಿಮ ಬೆಲೆಯನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಹೇಳಿದ್ದಾರೆ. ವರ್ಷದ ಅಂತ್ಯದ ವೇಳೆಗೆ ಲಸಿಕೆಯನ್ನು ಪ್ರಾರಂಭಿಸಲಾಗುವುದು ಎಂದು ಶ್ರೀ ಪೂನಾವಾಲ್ಲಾ ಹೇಳಿದರು. ಮೊದಲು ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಾಗುವಂತೆ ಮಾಡಲಾಗುವುದು ಮತ್ತು ಮುಂದಿನ ವರ್ಷದಿಂದ ಕೆಲವು ಖಾಸಗಿ ಪಾಲುದಾರರು ಸಹ ಭಾಗಿಯಾಗಲಿದ್ದಾರೆ ಎಂದು ಹೇಳಿದರು.
200 ಮಿಲಿಯನ್ ಡೋಸ್‌ಗಳನ್ನು ತಯಾರಿಸುವ ಯೋಜನೆ ಜಾರಿಯಲ್ಲಿದೆ ಮತ್ತು ಮೊದಲು ಲಸಿಕೆಯನ್ನು ಭಾರತದಲ್ಲಿ ನೀಡಲಾಗುವುದು ಮತ್ತು ನಂತರ ಅದನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಶ್ರೀ ಪೂನಾವಾಲ್ಲಾ ಹೇಳಿದರು. ಈ ಲಸಿಕೆಗಾಗಿ ದೇಶಾದ್ಯಂತ 2000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ರಾಜೇಶ್ ಗೋಖಲೆ ತಿಳಿಸಿದ್ದಾರೆ.
ಸಿಎಸ್‌ಐಆರ್‌ನ ಮಹಾನಿರ್ದೇಶಕ ಡಾ ಎನ್ ಕಲೈಸೆಲ್ವಿ ಮಾತನಾಡಿ, ಇದು ಈ ಕ್ಷೇತ್ರದಲ್ಲಿ ಮೊದಲ ಮೆಟ್ಟಿಲು ಮತ್ತು ಸಂಶೋಧನೆಯಾಗಿದ್ದು, ಇದು ಇನ್ನೂ ಹೆಚ್ಚಿನ ಸಂಶೋಧನೆಗಳನ್ನು ಮಾಡಲಿದೆ ಎಂದು ಹೇಳಿದರು.
ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್ 15 ರಿಂದ 44 ವರ್ಷ ವಯಸ್ಸಿನ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಎರಡನೇ ಕ್ಯಾನ್ಸರ್ ಆಗಿದೆ.ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಜುಲೈನಲ್ಲಿ SII ಗೆ ಗರ್ಭಕಂಠದ ಕ್ಯಾನ್ಸರ್ಗೆ ಲಸಿಕೆ ತಯಾರಿಸಲು ಮಾರುಕಟ್ಟೆ ಅಧಿಕಾರವನ್ನು ನೀಡಿದೆ.
Published On - 3:28 pm, Thu, 1 September 22