AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ

ಚಾಮರಾಜನಗರದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿಯ ಗುಂಡಿನ ಚಕಮಕಿಯಲ್ಲಿ ಮೂವರು ತಮಿಳು ಮೂಲದ ವ್ಯಕ್ತಿಗಳ ಸಾವು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಇದನ್ನು "ಹತ್ಯಾಕಾಂಡ" ಎಂದು ಖಂಡಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಘಟನೆಯ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ.

ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 17, 2026 | 3:23 PM

Share

ಚೆನ್ನೈ, ಆ.17: ಚಾಮರಾಜನಗರ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ಚಕಮಕಿಯಲ್ಲಿ ತಮಿಳು ಮೂಲದ ಮೂವರು ಮೃತಪಟ್ಟ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯನ್ನು “ಹತ್ಯಾಕಾಂಡ” (Massacre) ಎಂದು ಕರೆದಿರುವ ಅವರು, ಪ್ರಕರಣದ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.

“ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಿವಾಸಿಗಳಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಹಾಗೂ ಕುಮಾರ್ ಅವರನ್ನು ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ಗುಂಡಿಕ್ಕಿ ಕೊಂದು ಹಾಕಿರುವುದು ತೀವ್ರ ಹೃದಯವಿದ್ರಾವಕ. ಈ ದೌರ್ಜನ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

“ಕರ್ನಾಟಕ ಅರಣ್ಯ ಇಲಾಖೆ ನೀಡುತ್ತಿರುವ ವಿವರಣೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಘಟನೆಯ ನೈಜತೆ ಹೊರಬರಲು ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಕರ್ನಾಟಕ ಸರ್ಕಾರ ಎಚ್ಚರವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ!

ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ ಸಿಎಂ ಡಿ.ಕೆ. ಶಿವಕುಮಾರ್:

ಮತ್ತೊಂದೆಡೆ, ಚಾಮರಾಜನಗರ ಜಿಲ್ಲೆಯ ಶಾಗ್ಯ ಗ್ರಾಮದ ಬಳಿ ನಡೆದ ಈ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

“ಘಟನೆಯ ಬಗ್ಗೆ ಮುಂಜಾನೆ 5 ಗಂಟೆಗೆ ಮಾಹಿತಿ ಸಿಕ್ಕಿದೆ. ಹಲವು ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆ ನಡೆಸಲಾಗಿದ್ದು, ಬಂದೂಕುಗಳು ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಗಿದ ನಂತರವೇ ಪೂರ್ಣ ಸತ್ಯಾಂಶ ತಿಳಿಯಲಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಹನೂರು ತಾಲೂಕಿನ ಮಾರಿಯ ಮಂಗಲ ಬೀಟ್ ಪ್ರದೇಶದಲ್ಲಿ ಶಂಕಿತ ಬೇಟೆಗಾರರು ಅರಣ್ಯ ಸಿಬ್ಬಂದಿಯತ್ತ ಗನ್ ಗುರಿಮಾಡಿದಾಗ, ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ತೋಮಿಯರ್ ಪಾಳ್ಯದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸ್ಥಳೀಯವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ