AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champai Soren Floor Test: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಜಾರ್ಖಂಡ್​ ನೂತನ ಸಿಎಂ ಚಂಪೈ ಸೊರೆನ್

ಜಾರ್ಖಂಡ್​ನ ನೂತನ ಮುಖ್ಯಮಂತ್ರಿ ಚಂಪೈ ಸೊರೆನ್ ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಯಾಚನೆ ಮಾಡಿ ಬಹುಮತ ಸಾಬೀತುಪಡಿಸಿದ್ದಾರೆ. ಇಂದು ಜಾರ್ಖಂಡ್ ರಾಜಕೀಯದಲ್ಲಿ ಮಹತ್ವದ ದಿನವಾಗಿದೆ. ಚಂಪೈ ಸೊರೆನ್ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆ ಎದುರಿಸಿದೆ. ಇದರೊಂದಿಗೆ ಸರ್ಕಾರದ ಭವಿಷ್ಯವೂ ನಿರ್ಧಾರವಾಗಿದೆ. ಇದಕ್ಕೂ ಮುನ್ನ ಜನವರಿ 31 ರಂದು ಹೇಮಂತ್ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ನಂತರ ಶಾಸಕಾಂಗ ಪಕ್ಷದ ಸಭೆಯಲ್ಲಿ ಚಂಪೈ ಸೋರೆನ್ ಅವರನ್ನು ಮುಖ್ಯಮಂತ್ರಿ ಮಾಡಲು ತೀರ್ಮಾನಿಸಲಾಯಿತು. ಫೆಬ್ರವರಿ 2 ರಂದು (ಶುಕ್ರವಾರ) ಚಂಪೈ ಸೊರೆನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Champai Soren Floor Test: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಜಾರ್ಖಂಡ್​ ನೂತನ ಸಿಎಂ ಚಂಪೈ ಸೊರೆನ್
ನಯನಾ ರಾಜೀವ್
|

Updated on:Feb 05, 2024 | 2:14 PM

Share

ಜಾರ್ಖಂಡ್‌ನ (Jharkhand Politics) ನೂತನ ಸಿಎಂ ಚಂಪೈ ಸೊರೆನ್ (Champai Soren) ಅವರ ಸರ್ಕಾರ ಇಂದು ವಿಧಾನಸಭೆಯಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಿತು. 81 ಸದಸ್ಯ ಬಲದ ಜಾರ್ಖಂಡ್‌ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾದ ಸಂಖ್ಯೆ 41 ಆಗಿತ್ತು. 81 ಸದಸ್ಯ ಬಲದ ಸದನದಲ್ಲಿ ಆಡಳಿತಾರೂಢ ಮೈತ್ರಿಕೂಟವು 47 ಶಾಸಕರನ್ನು ಹೊಂದಿದೆ. ಇಲ್ಲಿ ಬಹುಮತದ ನಂಬರ್‌ 41 ಆಗಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೆನ್ ಅವರನ್ನು ಬೆಂಬಲಿಸುತ್ತಿದ್ದಾರೆ. ಬಿಜೆಪಿ 25 ಶಾಸಕರನ್ನು ಹೊಂದಿದೆ. ಜಾರ್ಖಂಡ್ ವಿಧಾನಸಭೆಯಲ್ಲಿ ಚಂಪೈ ಸೊರೆನ್ 47 ಮತಗಳೊಂದಿಗೆ ವಿಶ್ವಾಸ ಮತ ಗೆದ್ದಿದ್ದಾರೆ

AJSU ಅಥವಾ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು ಮೂವರನ್ನು ಹೊಂದಿದೆ. ಎನ್‌ಸಿಪಿ ಮತ್ತು ಎಡಪಕ್ಷಗಳು ತಲಾ ಒಬ್ಬರನ್ನು ಹೊಂದಿದ್ದು, ಮೂವರು ಸ್ವತಂತ್ರ ಶಾಸಕರಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ಸರ್ಕಾರವನ್ನು ರಕ್ಷಿಸಲು ಆಡಳಿತಾರೂಢ ಶಾಸಕರನ್ನು ಹೈದರಾಬಾದ್‌ಗೆ ಕಳುಹಿಸಲಾಗಿದೆ. ನಮ್ಮ ಶಾಸಕರು ಒಗ್ಗಟ್ಟಾಗಿದ್ದಾರೆ. ನಮಗೆ 48ರಿಂದ 50 ಶಾಸಕರ ಬೆಂಬಲವಿದೆ ಎಂದು ರಾಜ್ಯ ಸಚಿವ ಅಲಂಗೀರ್ ಆಲಂ ಹೇಳಿದ್ದರು.

ಹೇಮಂತ್ ಸೊರೆನ್ ಅವರು ಸಿಎಂ ಹುದ್ದೆಯಿಂದ ಕೆಳಗಿಳಿದ 24 ಗಂಟೆಗಳ ನಂತರ, ಫೆಬ್ರವರಿ 2ರಂದು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಅವರೊಂದಿಗೆ ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಮತ್ತಷ್ಟು ಓದಿ: Champai Soren: ಶಿಬು ಸೊರೆನ್ ಆಪ್ತ, ಜಾರ್ಖಂಡ್‌ನ ನೂತನ ಮುಖ್ಯಮಂತ್ರಿ ಚಂಪೈ ಸೊರೆನ್ ಕಿರುಪರಿಚಯ

ಬಿಜೆಪಿ ಶಾಸಕರನ್ನು ಖರೀದಿಸಬಹುದು ಎಂಬ ಆತಂಕದಿಂದ ಫೆಬ್ರವರಿ 2 ರಂದು ಹೈದರಾಬಾದ್​ಗೆ ತೆರಳಿದ್ದ ಜೆಎಂಎಂ ನೇತೃತ್ವದ ಮೈತ್ರಿಕೂಟದ 40 ಶಾಸಕರು ವಿಶ್ವಾಸಮತ ಯಾಚನೆ ಕಾರಣ ಭಾನುವಾರವೇ ರಾಂಚಿಗೆ ಬಂದಿದ್ದರು. ಹೇಮಂತ್ ಸೊರೆನ್ ಅವರು ತಮ್ಮ ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಹುದ್ದೆಗೆ ಜನವರಿ 31ರಂದು ರಾಜೀನಾಮೆ ನೀಡಿದ್ದರು. ಫೆಬ್ರವರಿ 2 ರಂದು ಚಂಪೈ ಸೊರೆನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:11 pm, Mon, 5 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ