ಆ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಬೇಕು: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಅಧಿಕಾರಿ ವಿರುದ್ಧ ಗುಡುಗಿದ ಸುಪ್ರೀಂಕೋರ್ಟ್

ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲಾಗಿಲ್ಲ ಎಂದು ಎಎಪಿ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು. ಮತಯಂತ್ರಗಳನ್ನು ತಿರುಚಿ ಬಿಜೆಪಿ ಪರವಾಗಿ ಫಲಿತಾಂಶ ಪ್ರಕಟವಾಗಿದೆ. ಚುನಾವಣೆಯನ್ನು ರದ್ದುಪಡಿಸಲು, ದಾಖಲೆಗಳನ್ನು ಸೀಲ್ ಮಾಡಲು, ಮೇಯರ್ ಅಧಿಕಾರ ವಹಿಸಿಕೊಳ್ಳುವುದನ್ನು ನಿಷೇಧಿಸಲು ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಕೋರ್ಟ್ ಮೊರೆ ಹೋಗಿದೆ.

ಆ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಬೇಕು: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಅಧಿಕಾರಿ ವಿರುದ್ಧ ಗುಡುಗಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 05, 2024 | 8:29 PM

ದೆಹಲಿ ಫೆಬ್ರುವರಿ 05: ಚಂಡೀಗಢ ಮೇಯರ್ ಚುನಾವಣೆ (Chandigarh Mayor elections)ವಿವಾದದ ಬಗ್ಗೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ (Supreme Court), ‘ಪ್ರಜಾಪ್ರಭುತ್ವದ ಹತ್ಯೆ’ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಇಂದು(ಸೋಮವಾರ) ಸಂಜೆ 5 ಗಂಟೆಯೊಳಗೆ ಎಲ್ಲಾ ದಾಖಲೆಗಳನ್ನು ಭದ್ರಪಡಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಆದೇಶ ನೀಡಿದ ಸುಪ್ರೀಂ, ಫೆಬ್ರವರಿ 12 ರಂದು ಪ್ರಕರಣದ ವಿಚಾರಣೆ ನಡೆಸಲಿದೆ. ಕಳೆದ ತಿಂಗಳು ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯಿಂದ (BJP) ಪರಾಭವಗೊಂಡ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ, ಅಧ್ಯಕ್ಷರು ಚುನಾವಣೆಯಲ್ಲಿ ಮೋಸದಾಟ ಮಾಡಿದ್ದಾರೆ ಎಂದು ಆರೋಪಿಸಿದ್ದು, ಮತಯಂತ್ರಗಳನ್ನು ತಿರುಚಿದ್ದಕ್ಕಾಗಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಯಿತು. ಇದು ಎಎಪಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಸಂಖ್ಯಾಬಲದ ಹೊರತಾಗಿಯೂ ಚುನಾವಣೆ ಫಲಿತಾಂಶ ಬಿಜೆಪಿ ಪರ ಹೊರಳಿತ್ತು.

ಎಎಪಿ ದೆಹಲಿ ಮತ್ತು ಚಂಡೀಗಢದಲ್ಲಿ ಈ ವಿಷಯದ ಕುರಿತು ಬೃಹತ್ ಪ್ರತಿಭಟನೆಗಳನ್ನು ನಡೆಸಿತು ಮತ್ತು ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಮತಯಂತ್ರಗಳನ್ನು ಕೆಮರಾದಲ್ಲಿ ಸೆರೆಹಿಡಿದಿದ್ದಾರೆ ಎಂದು ಪ್ರತಿಪಾದಿಸಿ ನ್ಯಾಯಾಲಯಕ್ಕೆ ಹೋಗಿದ್ದಾರೆ.

ಎಎಪಿ ಸಂಸದ ರಾಘವ್ ಚಡ್ಡಾ ಅವರು ಮಸಿಹ್ ಅವರು “ಅಸಿಂಧು” ಎಂದು ಘೋಷಿಸಿದ ಎಲ್ಲಾ ಎಂಟು ಮತಗಳು ತಮ್ಮ ಪಕ್ಷದ ಅಭ್ಯರ್ಥಿಗೆ ಎಂದು ಹೇಳಿಕೊಂಡಿದ್ದಾರೆ. ಆ ಮತಗಳನ್ನು ಎಣಿಕೆ ಮಾಡಿದ್ದರೆ ಎಎಪಿ ಗೆಲ್ಲುತ್ತಿತ್ತು. ಬಿಜೆಪಿ ಕಾರ್ಯಕರ್ತರು ಮತಯಂತ್ರಗಳನ್ನು ಹರಿದು ಹಾಕಿದ್ದು, ಅವರ ಏಜೆಂಟರನ್ನು ನೋಡಲು ಬಿಡಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಚುನಾವಣಾಧಿಕಾರಿ ಮಾಡಿದ್ದು ಪ್ರಜಾಪ್ರಭುತ್ವದ ಕೊಲೆ ಎಂದು ಹೇಳಿದರು. “ಅವರು ಕ್ಯಾಮೆರಾವನ್ನು ನೋಡುತ್ತಿದ್ದಾರೆ ಮತ್ತು ಬ್ಯಾಲೆಟ್ ಪೇಪರ್ ಅನ್ನು ಹಾಳು ಮಾಡುತ್ತಿದ್ದಾರೆ ಎಂದು ವಿಡಿಯೊದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಅಧಿಕಾರಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಎಎಪಿ ಅರ್ಜಿಯ ವಿಚಾರಣೆಯ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದರು.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠವು ಮಂಗಳವಾರ ಮಂಡಿಸುವ ನಿರೀಕ್ಷೆಯಿದ್ದ ಚಂಡೀಗಢ ನಾಗರಿಕ ಮಂಡಳಿಯ ಬಜೆಟ್ ಅಧಿವೇಶನವನ್ನು ಸ್ಥಗಿತಗೊಳಿಸಿದೆ. ಮುಂದಿನ ಆದೇಶದವರೆಗೆ ಬಜೆಟ್ ಮಂಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲಾಗಿಲ್ಲ ಎಂದು ಎಎಪಿ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು. ಮತಯಂತ್ರಗಳನ್ನು ತಿರುಚಿ ಬಿಜೆಪಿ ಪರವಾಗಿ ಫಲಿತಾಂಶ ಪ್ರಕಟವಾಗಿದೆ. ಚುನಾವಣೆಯನ್ನು ರದ್ದುಪಡಿಸಲು, ದಾಖಲೆಗಳನ್ನು ಸೀಲ್ ಮಾಡಲು, ಮೇಯರ್ ಅಧಿಕಾರ ವಹಿಸಿಕೊಳ್ಳುವುದನ್ನು ನಿಷೇಧಿಸಲು, ತಿರುಚಿದ ಬಗ್ಗೆ ತನಿಖೆ ಮತ್ತು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಹೊಸ ಚುನಾವಣೆಗೆ ಎಎಪಿ ಕರೆ ನೀಡಿದೆ.

ಇದನ್ನೂ ಓದಿ: ಅವರಿಗೆ ಭಾರತೀಯರ ಸಾಮರ್ಥ್ಯ ಬಗ್ಗೆ ನಂಬಿಕೆ ಇರಲಿಲ್ಲ: ನೆಹರು, ಇಂದಿರಾ ಗಾಂಧಿ ಭಾಷಣಗಳನ್ನು ಉಲ್ಲೇಖಿಸಿದ ಮೋದಿ

ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಸುಧೀರ್ ಸಿಂಗ್ ಮತ್ತು ನ್ಯಾಯಮೂರ್ತಿ ಹರ್ಷ ಬಂಗಾರ್ ಅವರ ಪೀಠವು ಯಾವುದೇ ಮಧ್ಯಂತರ ಪರಿಹಾರವನ್ನು ನೀಡಲು ನಿರಾಕರಿಸಿದ ನಂತರ ಪಕ್ಷವು ಸುಪ್ರೀಂಕೋರ್ಟ್‌ಗೆ ಹೋಗಿತ್ತು. ಈ ಚುನಾವಣೆಯು ಇಂಡಿಯಾ ಬಣಕ್ಕೆ ಆಸಿಡ್ ಪರೀಕ್ಷೆ ಎಂದು ಹೇಳಿದ್ದ ಎಎಪಿ-ಕಾಂಗ್ರೆಸ್ ಮೈತ್ರಿಗೆ ಹಿನ್ನಡೆಯಾಗಿ ಬಿಜೆಪಿ ಮೇಯರ್ ಚುನಾವಣೆಯಲ್ಲಿ ಜಯಭೇರಿ ಬಾರಿಸಿತ್ತು.

ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಅವರು ಎಎಪಿಯ ಕುಲದೀಪ್ ಅವರನ್ನು ಸೋಲಿಸಿದ್ದು ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಲಾಯಿತು. 35 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ 14, ಎಎಪಿ 13 ಮತ್ತು ಕಾಂಗ್ರೆಸ್ 7 ಕೌನ್ಸಿಲರ್‌ಗಳನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ