AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢದಲ್ಲಿ ಉಗ್ರರ ದಾಳಿ ಸಂಚು ವಿಫಲ: ಬಸ್ ನಿಲ್ದಾಣದ ಬಳಿ ಐಇಡಿ, ಪಿಸ್ತೂಲ್ ಸಹಿತ ಮೂವರು ಶಂಕಿತರ ಬಂಧನ

ಚಂಡೀಗಢದಲ್ಲಿ ಪಾಕಿಸ್ತಾನ ಬೆಂಬಲಿತ BKI ಖಲಿಸ್ತಾನಿ ಉಗ್ರರ ಸರಣಿ ಸ್ಫೋಟದ ಬೃಹತ್ ಸಂಚು ಭಗ್ನಗೊಂಡಿದೆ. ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಐಇಡಿ ಮತ್ತು ಮಾರಕಾಸ್ತ್ರಗಳೊಂದಿಗೆ ಪಂಜಾಬ್ ಮೂಲದ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ವಿದೇಶದಲ್ಲಿರುವ ಕಮಾಂಡರ್ ಸೂಚನೆ ಮೇರೆಗೆ ಪ್ರಮುಖ ಸ್ಥಳಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಲಾಗಿತ್ತು. ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಚಂಡೀಗಢದಲ್ಲಿ ಉಗ್ರರ ದಾಳಿ ಸಂಚು ವಿಫಲ: ಬಸ್ ನಿಲ್ದಾಣದ ಬಳಿ ಐಇಡಿ, ಪಿಸ್ತೂಲ್ ಸಹಿತ ಮೂವರು ಶಂಕಿತರ ಬಂಧನ
ಪೊಲೀಸ್
ನಯನಾ ರಾಜೀವ್
|

Updated on: Aug 24, 2026 | 9:11 AM

Share

ಚಂಡೀಗಢ, ಆಗಸ್ಟ್​ 24: ಸರಣಿ ಸ್ಫೋಟ ನಡೆಸಿ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಬೆಂಬಲಿತ ಖಲಿಸ್ತಾನಿ(Khalistani) ಉಗ್ರ ಸಂಘಟನೆ ‘ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್’ (BKI) ರೂಪಿಸಿದ್ದ ಬೃಹತ್ ಸಂಚನ್ನು ಚಂಡೀಗಢ ಪೊಲೀಸರು ಯಶಸ್ವಿಯಾಗಿ ಭಗ್ನಗೊಳಿಸಿದ್ದಾರೆ.

ಸೆಕ್ಟರ್ 43 ರ ಅಂತಾರಾಜ್ಯ ಬಸ್ ಟರ್ಮಿನಲ್ (ISBT) ಹಿಂಭಾಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಟಿಫಿನ್ ಬಾಕ್ಸ್‌ನಲ್ಲಿ ಅಡಗಿಸಿಟ್ಟಿದ್ದ ಶಂಕಿತ ಐಇಡಿ (IED) ಹಾಗೂ ಮಾರಕಾಸ್ತ್ರಗಳೊಂದಿಗೆ ಪಂಜಾಬ್ ಮೂಲದ ಮೂವರು ಶಂಕಿತ ಉಗ್ರರನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಪಂಜಾಬ್‌ನ ಲವ್‌ಪ್ರೀತ್ ಸಿಂಗ್ (19), ಜಶನ್‌ಪ್ರೀತ್ ಸಿಂಗ್ (21) ಮತ್ತು ಪ್ರಭ್‌ಪ್ರೀತ್ ಸಿಂಗ್ (19) ಎಂದು ಗುರುತಿಸಲಾಗಿದೆ.

ಸುಮಾರು 5 ಕೆಜಿ ಜೆಲಾಟಿನ್ ಕಡ್ಡಿಗಳು, ಡಿಟೋನೇಟರ್, ರಿಮೋಟ್ ಕಂಟ್ರೋಲ್ ಚಾಲಿತ ವ್ಯವಸ್ಥೆ, ಒಂದು ಪಿಸ್ತೂಲ್, ಮ್ಯಾಗಜೀನ್ ಹಾಗೂ 5 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳು ವಿದೇಶದಲ್ಲಿರುವ ಬಿಕೆಐ ಕಮಾಂಡರ್ ಸತ್ನಾಮ್ ಅಲಿಯಾಸ್ ಸತ್ತಾ ನೌಶೇರಾ ಸೂಚನೆಯಂತೆ ಚಂಡೀಗಢದ ಪ್ರಮುಖ ಸ್ಥಳಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು.

ಮತ್ತಷ್ಟು ಓದಿ: ಖಲಿಸ್ತಾನಿ ಉಗ್ರ ಹರ್ದೀಪ್ ನಿಜ್ಜರ್ ಹತ್ಯೆ ಮಾಡಿದ್ದು ನಾನೇ ಎಂದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್

ಕಳೆದ ತಿಂಗಳು ಜುಲೈ 26ರಂದಷ್ಟೇ ಜಲಂಧರ್ ಮೂಲದ ಸತ್ಬೀರ್ ಸಿಂಗ್ ಎಂಬಾತನಿಂದ 1.3 ಕೆಜಿ ಐಇಡಿ ವಶಪಡಿಸಿಕೊಳ್ಳಲಾಗಿತ್ತು. ಈಗ ಮತ್ತೆ ಅದೇ ಮಾದರಿಯ ಜಾಲ ಪತ್ತೆಯಾಗಿದೆ. ಘಟನೆಯ ಬೆನ್ನಲ್ಲೇ ಚಂಡೀಗಢ, ಮೊಹಾಲಿ ಮತ್ತು ಪಂಚಕುಲದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (BDDS) ಹಾಗೂ ಶ್ವಾನದಳದೊಂದಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸ್ಫೋಟಕಗಳ ಮೂಲ ಮತ್ತು ಜಾಲದಲ್ಲಿರುವ ಇತರ ಸಹಚರರ ಪತ್ತೆಗಾಗಿ ಪೊಲೀಸರು ಬಿಎನ್‌ಎಸ್ (BNS), ಸ್ಫೋಟಕ ಕಾಯ್ದೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ