ಚಂಡೀಗಢ ವಿಶ್ವವಿದ್ಯಾಲಯದ ವಿಡಿಯೋ ಲೀಕ್ ಪ್ರಕರಣ; ಶನಿವಾರದವರೆಗೆ ಕಾಲೇಜು ಬಂದ್, ವಾರ್ಡನ್ ಅಮಾನತು
ಚಂಡೀಗಢ ವಿಶ್ವವಿದ್ಯಾಲಯದ ಆಡಳಿತವು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಾಲಕಿಯರ ಹಾಸ್ಟೆಲ್ ವಾರ್ಡನ್ ರಾಜ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ.
ನವದೆಹಲಿ: ಚಂಡೀಗಢ ವಿಶ್ವವಿದ್ಯಾಲಯದ (Chandigarh University) ಬಾಲಕಿಯರ ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳು ಸೋರಿಕೆಯಾಗಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ಬೃಹತ್ ಪ್ರತಿಭಟನೆಯ ನಂತರ ಚಂಡೀಗಢ ವಿಶ್ವವಿದ್ಯಾಲಯದ ಆಡಳಿತವು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಾಲಕಿಯರ ಹಾಸ್ಟೆಲ್ ವಾರ್ಡನ್ ರಾಜ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಲ್ಲದೆ, ಚಂಡೀಗಢ ವಿಶ್ವವಿದ್ಯಾನಿಲಯವನ್ನು ಮುಂದಿನ ಶನಿವಾರದವರೆಗೆ ಮುಚ್ಚಲಾಗಿದೆ.
ಚಂಡೀಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳು ಯುವತಿಯರ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿ ಹೊರಗಿನ ಪುರುಷರಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಶನಿವಾರ ರಾತ್ರಿ ಪ್ರತಿಭಟನೆಗಳು ನಡೆದಿದ್ದು, ಹಲವಾರು ಮಹಿಳಾ ವಿದ್ಯಾರ್ಥಿಗಳ ಆಕ್ಷೇಪಾರ್ಹ ವೀಡಿಯೊಗಳನ್ನು ಹಾಸ್ಟೆಲ್ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಮುಖ್ಯಮಂತ್ರಿ ಭಗವಂತ್ ಮಾನ್ ತನಿಖೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ: Big News: ಚಂಡೀಗಢ ವಿಶ್ವವಿದ್ಯಾಲಯದ 60 ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್; ಭುಗಿಲೆದ್ದ ಪ್ರತಿಭಟನೆ
ಭಾನುವಾರ ತಡರಾತ್ರಿಯವರೆಗೂ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಜಿಲ್ಲಾಡಳಿತ, ಪೊಲೀಸ್ ಮತ್ತು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದರು. ಪ್ರಾಥಮಿಕ ತನಿಖೆಯ ನಂತರ, ಪೊಲೀಸರು ಮಹಿಳಾ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆಕೆ 23 ವರ್ಷದ ತನ್ನ ಪ್ರಿಯಕರನಿಗೆ ಆ ವಿಡಿಯೋಗಳನ್ನು ಕಳುಹಿಸಿದ್ದಳು ಎನ್ನಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಆತನನ್ನು ಬಂಧಿಸಿ ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲ ಪೊಲೀಸರು ಮತ್ತೊಬ್ಬ 31 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.
#WATCH | Lucknow, Uttar Pradesh: Samajwadi Party (SP) chief Akhilesh Yadav and other leaders & workers of the party begin their march to the State Assembly, from their party office, against the State Government. pic.twitter.com/moAM7ztXhW
— ANI UP/Uttarakhand (@ANINewsUP) September 19, 2022
ಪಂಜಾಬ್ ಶಿಕ್ಷಣ ಸಚಿವರು ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. “ನಾನು ಚಂಡೀಗಢ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳನ್ನು ಶಾಂತವಾಗಿರಲು ವಿನಂತಿಸುತ್ತೇನೆ, ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ. ಇದು ಅತ್ಯಂತ ಸೂಕ್ಷ್ಮ ವಿಷಯ. ಇದು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿದೆ. ಮಾಧ್ಯಮ ಸೇರಿದಂತೆ ನಾವೆಲ್ಲರೂ ತುಂಬಾ ಜಾಗರೂಕರಾಗಿರಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಆನ್‌ಲೈನ್‌ನಲ್ಲಿ ವೀಡಿಯೋಗಳನ್ನು ಸೋರಿಕೆ ಮಾಡಿದ ವಿದ್ಯಾರ್ಥಿನಿ ಇತರರಿಂದ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದಳು ಎಂದು ಹೇಳಲಾಗಿದೆ. ಈ ವಿಷಯ ಬೆಳಕಿಗೆ ಬಂದ ನಂತರ, ನೂರಾರು ವಿದ್ಯಾರ್ಥಿಗಳು ಯೂನಿವರ್ಸಿಟಿ ಕ್ಯಾಂಪಸ್ ಮತ್ತು ಲೂಧಿಯಾನ-ಚಂಡೀಗಢ ಹೆದ್ದಾರಿಯಲ್ಲಿ ತಡರಾತ್ರಿ ಪ್ರತಿಭಟನೆ ನಡೆಸಿದರು. ಸ್ನಾನ ಮಾಡುವಾಗ 60 ವಿದ್ಯಾರ್ಥಿನಿಯರ ವಿಡಿಯೋಗಳನ್ನು ಆರೋಪಿ ಚಿತ್ರೀಕರಿಸಿದ್ದಾಳೆ. ನಂತರ ಆ ವೀಡಿಯೊವನ್ನು ಸ್ನೇಹಿತರಿಗೆ ಕಳುಹಿಸಿದ್ದಾಳೆ. ಬಳಿಕ ಆ ವೀಡಿಯೊವನ್ನು ಅಂತರ್ಜಾಲದಲ್ಲಿ ಬಿಡುಗಡೆ ಮಾಡಲಾಗಿದೆ. ಇದಾದ ಬಳಿಕ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.