ಕೆನಡಾದ ಪಾರ್ಲಿಮೆಂಟ್​ನಲ್ಲಿ ಮೊಳಗಿದ ಕನ್ನಡ ಭಾಷೆ: ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

ಈ ಮೂಲಕ ಕೆನಡಾದ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು.

ಕೆನಡಾದ ಪಾರ್ಲಿಮೆಂಟ್​ನಲ್ಲಿ ಮೊಳಗಿದ ಕನ್ನಡ ಭಾಷೆ: ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ
ಕೆನಡಾ ಪಾರ್ಲಿಮೆಂಟ್ ಸಂಸದ ಚಂದ್ರ ಆರ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:May 20, 2022 | 11:27 AM

ಕೆನಡಾ: ನಾನು‌ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್​ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದಾರೆ. ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ಇದೇ ಮೊದಲ‌ ಬಾರಿಗೆ ವಿದೇಶಿ ಪಾರ್ಲಿಮೆಂಟ್​ನಲ್ಲಿ ‌ಕನ್ನಡದಲ್ಲಿ‌ ಭಾಷಣ ಮಾಡಿದರು. ಈ ಮೂಲಕ ಕೆನಡಾದ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು. ಕುವೆಂಪು ರಚನೆಯ ಮತ್ತು ಡಾ. ರಾಜಕುಮಾರ ಹಾಡಿರುವ ಭಾವಗೀತೆಯಾದ ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಕೆನಡಾ ಸಂಸತ್​ನಲ್ಲಿ ಚಂದ್ರ ಆರ್ಯ ಹೇಳುವ ಮೂಲಕ ತಮ್ಮ ಭಾಷಣವನ್ನು ಮುಗಿಸಿದರು.

ಚಂದ್ರ ಆರ್ಯ, ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದವರು. ಕೆನಡಾದ ಲಿಬರಲ್ ರಾಜಕಾರಣಿ. ಅವರು 2015 ರ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಹೌಸ್ ಆಫ್ ಕಾಮನ್ಸ್‌ನಲ್ಲಿ ನೇಪಿಯನ್ ಆಗಿ ಪ್ರತಿನಿಧಿಸಲು ಆಯ್ಕೆಯಾದರು. ಮತ್ತು 2019 ರಲ್ಲಿ ಫೆಡರಲ್ ಚುನಾವಣೆಯಲ್ಲಿ ಮರು ಚುನಾಯಿತರಾದರು. ಅವರು ಪ್ರಸ್ತುತ ಅಂತರಾಷ್ಟ್ರೀಯ ವ್ಯಾಪಾರದ (CIIT) ಸ್ಥಾಯಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:46 am, Fri, 20 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್