AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi on Chandrayaan 3: ಚಂದ್ರಯಾನ-3ರ ಯಶಸ್ಸಿಗೆ ಮೋದಿ ಹರ್ಷ; ಅಮೃತಕಾಲದಲ್ಲಿ ಸುರಿಯಿತು ಯಶಸ್ಸಿನ ಮಕರಂದ ಎಂದ ಪ್ರಧಾನಿ

ಚಂದ್ರಯಾನ -3ರ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಬ್ರಿಕ್ಸ್ ಶೃಂಗಸಭೆ ಪ್ರಯುಕ್ತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಮೋದಿ ಅವರು ಜೊಹಾನ್ಸ್​ಬರ್ಗ್​​ನಿಂದಲೇ ಇಸ್ರೋ ವಿಜ್ಞಾನಿಗಳನ್ನು ಹಾಗೂ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಕ್ಷಣ ಅಭೂತಪೂರ್ವ ಎಂದು ಬಣ್ಣಿಸಿದ್ದು, ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ.

PM Modi on Chandrayaan 3: ಚಂದ್ರಯಾನ-3ರ ಯಶಸ್ಸಿಗೆ ಮೋದಿ ಹರ್ಷ; ಅಮೃತಕಾಲದಲ್ಲಿ ಸುರಿಯಿತು ಯಶಸ್ಸಿನ ಮಕರಂದ ಎಂದ ಪ್ರಧಾನಿ
ಚಂದ್ರಯಾನ ಯಶಸ್ಸಿನ ಬಳಿಕ ಮೋದಿ ಮಾತು
ಗಣಪತಿ ಶರ್ಮಾ
|

Updated on:Aug 23, 2023 | 6:30 PM

Share

ಜೊಹಾನ್ಸ್​​ಬರ್ಗ್, ಆಗಸ್ಟ್ 23: ಚಂದ್ರಯಾನ-3ರ (Chandrayaan 3) ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದು, ಅಮೃತಕಾಲದಲ್ಲಿ ಯಶಸ್ಸಿನ ಅಮೃತ ಸುರಿದಿದೆ ಎಂದು ಬಣ್ಣಿಸಿದರು. ಬ್ರಿಕ್ಸ್ ಶೃಂಗಸಭೆ ಪ್ರಯುಕ್ತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಮೋದಿ ಅವರು ಜೊಹಾನ್ಸ್​ಬರ್ಗ್​​ನಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ವಿಜ್ಞಾನಿಗಳು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಚಂದ್ರಯಾನ ಮಿಷನ್ ಚಂದ್ರನ ಮೇಲೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ. ಈ ಕ್ಷಣ ಅಭೂತಪೂರ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಭಾರತದ ಹೊಸ ಯುಗಕ್ಕೆ ಸಾಕ್ಷಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಕ್ಷಣ ಭಾರತದ ಹೊಸ ವೈಭವ. ಕಷ್ಟಗಳ ಸಾಗರವನ್ನು ದಾಟಿದ ಕ್ಷಣ ಇದಾಗಿದೆ. ಇಂತಹ ಐತಿಹಾಸಿಕ ಕ್ಷಣವನ್ನು ನೋಡಿದಾಗ ನಮಗೆ ತುಂಬಾ ಹೆಮ್ಮೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಜತೆಗೆ, ಇದು ನವ ಭಾರತದ ಸೂರ್ಯೋದಯ ಎಂದು ಬಣ್ಣಿಸಿದರು.

ಪ್ರತಿಯೊಬ್ಬ ಭಾರತೀಯನೂ ಇಂದು ಸಂಭ್ರಮ ಆಚರಿಸುತ್ತಿದ್ದಾನೆ. ಪ್ರತಿ ಮನೆಯೂ ಆಚರಿಸುತ್ತಿದೆ. ಈ ಹೆಮ್ಮೆಯ ಕ್ಷಣದಲ್ಲಿ ನಾನು ನನ್ನ ದೇಶದ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ಇದು ಹೊಸ ಯುಗದ ಉದಯವಾಗಿದೆ ಎಂದು ಮೋದಿ ಹೇಳಿದರು. ಈ ಹಿಂದೆ ಯಾವುದೇ ದೇಶವು (ಚಂದ್ರನ ದಕ್ಷಿಣ ಧ್ರುವ) ಅಲ್ಲಿಗೆ ತಲುಪಿಲ್ಲ. ಕಠಿಣ ಪರಿಶ್ರಮದಿಂದ ನಮ್ಮ ವಿಜ್ಞಾನಿಗಳನ್ನು ನಾವು ಅಲ್ಲಿಗೆ ತಲುಪಿದ್ದೇವೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: Chandrayaan-3: ಚಂದ್ರನನ್ನು ಸ್ಪರ್ಶಿಸಿದ ವಿಕ್ರಮ್ ಲ್ಯಾಂಡರ್; ಇದು ಭಾರತದ ಸಾಧನೆ, ಐತಿಹಾಸಿಕ ಕ್ಷಣ

ಈ ಅಭೂತಪೂರ್ವ ಸಾಧನೆಗಾಗಿ ನಾನು ಇಸ್ರೋ ಮತ್ತು ಅದರ ವಿಜ್ಞಾನಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪ್ರಧಾನಿ ತಮ್ಮ ವರ್ಚುವಲ್ ಭಾಷಣದಲ್ಲಿ ಹೇಳಿದರು.

ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ದಿನ. ಚಂದ್ರಯಾನ-3 ಗಮನಾರ್ಹ ಯಶಸ್ಸಿಗಾಗಿ ಇಸ್ರೋಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್​ ಸಹ ಮಾಡಿದ್ದಾರೆ.

ಚಂದ್ರಯಾನದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಲಿಂಕ್ ಮೂಲಕ ಇಸ್ರೋ ವಿಜ್ಞಾನಿಗಳ ಸಂಭ್ರಮಕ್ಕೆ ಜತೆಯಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:19 pm, Wed, 23 August 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!