Chandrayaan 3 Moon Landing Highlights Tracking: ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಸಾಧನೆ: ಚಂದ್ರಯಾನ-3 ಯಶಸ್ವಿ ಉಡಾವಣೆಗೆ ಪ್ರಧಾನಿ ಮೋದಿ ಅಭಿನಂದನೆ

| Updated By: ಗಂಗಾಧರ​ ಬ. ಸಾಬೋಜಿ

Updated on:Jul 14, 2023 | 5:41 PM

Chandrayaan 3 Launch Highlights Updates in Kannada: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ. ನೌಕೆ ಆಗಸ್ಟ್​ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ.

ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಇಂದು (ಜು.14) ಉಡಾವಣೆಯಾಗಿದೆ. ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ನಭಕ್ಕೆ ಯಶಸ್ವಿಯಾಗಿ ಹಾರಿದೆ. ಚಂದ್ರಯಾನ-3 ನೌಕೆ GSLV-MK3 ರಾಕೆಟ್ ಹೊತ್ತೊಯ್ದಿದೆ. ಚಂದ್ರಯಾನ-3 ನೌಕೆ ಲ್ಯಾಂಡರ್​, ರೋವರ್ ಒಳಗೊಂಡಿದೆ. ಚಂದ್ರನ ನೆಲದಲ್ಲಿ ಅಧ್ಯಯನ ನಡೆಸಲು ಇಸ್ರೋ ಕಳಿಸಿರುವ 3ನೇ ನೌಕೆ ಇದಾಗಿದೆ. ನೌಕೆ ಆಗಸ್ಟ್​ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ.

LIVE NEWS & UPDATES

The liveblog has ended.
  • 14 Jul 2023 05:40 PM (IST)

    Chandrayaan 3 Moon Landing LIVE Tracking: ಭಾರತ ಹೆಮ್ಮೆಪಡುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

    ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿ ಹಿನ್ನೆಲೆ ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದರು. ಭಾರತ ಹೆಮ್ಮೆಪಡುತ್ತದೆ. 45 ದಿನಗಳ ಚಂದ್ರಯಾನ-3 ಯಶಸ್ವಿಯಾಗಿ ಆರಂಭವಾಗಿದೆ. ಇಸ್ರೋದ ಈ ಪ್ರಯತ್ನ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸವಿದೆ. ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತದೆ ಎಂದು ಟ್ವೀಟ್​ ಮಾಡಿದ್ದಾರೆ.

  • 14 Jul 2023 04:30 PM (IST)

    Chandrayaan 3 Moon Landing LIVE Tracking: ಆಗಸ್ಟ್​ 23ಕ್ಕೆ ಚಂದ್ರನ ಅಂಗಳಕ್ಕೆ ನೌಕೆ

    ಚಂದ್ರಯಾಣ 3 ಯಶಸ್ವಿ  ಉಡಾವಣೆ ಆಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ 23 ರಂದು ಸಂಜೆ 5.47 ಕ್ಕೆ ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್​ ಹೇಳಿದರು.

  • 14 Jul 2023 03:53 PM (IST)

    Chandrayaan 3 Moon Landing LIVE Tracking: ಚಂದ್ರಯಾನ-3 ಯಶಸ್ವಿ ಉಡಾವಣೆ: ವಿಜ್ಞಾನಿಗಳಿಗೆ ಅಭಿನಂದಿಸಿದ ರಾಷ್ಟ್ರ ನಾಯಕರು

    ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಯಶಸ್ವಿ ಉಡಾವಣೆ ಶುಕ್ರವಾರ ಮಾಡಲಾಯಿತು. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್​, ಸಚಿನ್ ತೆಂಡೂಲ್ಕರ್​ ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ​

  • 14 Jul 2023 03:43 PM (IST)

    Chandrayaan 3 Moon Landing LIVE Tracking: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್​​ ಪ್ರತಿಕ್ರಿಯೆ

    ಕೇರಳ: ಚಂದ್ರಯಾನ 3 ಯಶಸ್ವಿ ಉಡಾವಣೆ ಹಿನ್ನೆಲೆ ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್​​ ಪ್ರತಿಕ್ರಿಯೆ ನೀಡಿದ್ದು, ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

  • 14 Jul 2023 03:28 PM (IST)

    Chandrayaan 3 Moon Landing LIVE Tracking: ಚಂದ್ರಯಾನ 3 ರಾಕೆಟ್ ಜೋಡಿಸಿದ್ದು ಹೇಗೆ ನೋಡಿ

    ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದೆ. GSLV-MK3 ರಾಕೆಟ್ ಮೂಲಕ ಚಂದ್ರಯಾನ-3. ಲ್ಯಾಂಡರ್​, ರೋವರ್ ಯಂತ್ರ ಒಳಗೊಂಡ ಚಂದ್ರಯಾನ-3 ನೌಕೆ ನಿಗಧಿತ ಸಮಯಕ್ಕೆ ಲಾಂಚ್ ಆಗಿದ್ದು, ವಿಕ್ರಂ ಹೆಸರಿನ ಲ್ಯಾಂಡರ್​​, ಪ್ರಗ್ಯಾನ್ ಹೆಸರಿನ ರೋವರ್ ಚಂದ್ರನ ನೆಲದಲ್ಲಿ ಅಧ್ಯಯನ ನಡೆಸಲು ಕಳಿಸಲಾಗಿದೆ. ಆದರೆ ಚಂದ್ರಯಾನ 3 ರಾಕೆಟ್ ಜೋಡಿಸಿದ್ದು ಹೇಗೆ ವಿಡಿಯೋ ನೋಡಿ.

  • 14 Jul 2023 03:20 PM (IST)

    Chandrayaan 3 Moon Landing LIVE Tracking: ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

    ಚಂದ್ರಯಾನ-3 ಯಶಸ್ವಿ ಉಡಾವಣೆ ಹಿನ್ನೆಲೆ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ವಿಜ್ಞಾನಿಗಳಿಗೆ ಅಭಿನಂದಿಸಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದಿದ್ದಾರೆ.

  • 14 Jul 2023 03:15 PM (IST)

    Chandrayaan 3 Moon Landing LIVE Tracking: ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ: ಪ್ರಧಾನಿ ಮೋದಿ ಟ್ವೀಟ್​

    ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಏರಲಿದ್ದು,  ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಉತ್ಸಾಹ ಮತ್ತು ಜಾಣ್ಮೆಗೆ ನಾನು ನಮಸ್ಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

  • 14 Jul 2023 03:10 PM (IST)

    Chandrayaan 3 Moon Landing LIVE Tracking: ಇಸ್ರೋ ಅಧ್ಯಕ್ಷ ಸೋಮನಾಥ್​ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶ್ಲಾಘನೆ

    ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಯಶಸ್ವಿ ಉಡಾವಣೆ ಹಿನ್ನೆಲೆ ಇಸ್ರೋ ಅಧ್ಯಕ್ಷ ಸೋಮನಾಥ್​ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶ್ಲಾಘಿಸಿದರು. ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಯಶಸ್ವಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

  • 14 Jul 2023 03:06 PM (IST)

    Chandrayaan 3 Moon Landing LIVE Tracking: ಎಲ್ಲರಿಗೂ ಧನ್ಯವಾದ ತಿಳಿಸಿದ ಅಧ್ಯಕ್ಷ ಸೋಮನಾಥ್

    ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಆಗಿದ್ದು, ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಯಶಸ್ವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಎಂದು ಸತೀಶ್ ಧವನ್​ ಕೇಂದ್ರದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್​ ಹೇಳಿದರು.

  • 14 Jul 2023 03:03 PM (IST)

    Chandrayaan 3 Moon Landing LIVE Tracking: ನಿಗದಿತ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

    ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಯಶಸ್ವಿ ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಸಹೋದ್ಯೋಗಿಗಳ ಜೊತೆ ಇಸ್ರೋ ಅಧ್ಯಕ್ಷ ಸೋಮನಾಥ್​ ಸಂಭ್ರಮಿಸಿದ್ದಾರೆ. ಇಸ್ರೋ ಅಧ್ಯಕ್ಷರಿ​ಗೆ ‘ಚಂದ್ರಯಾನ-3’ ಮಾಡಲ್​ನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ನೀಡಿದರು.

  • 14 Jul 2023 02:58 PM (IST)

    Chandrayaan 3 Launch Live: ಚಂದ್ರಯಾಣ 3 ಯಶಸ್ವಿ ಉಡಾವಣೆ: ಸಂಭ್ರಮಾಚರಣೆ

    ಚಂದ್ರಯಾಣ 3 ಅನ್ನು ಕಕ್ಷೆಗೆ ಯಶಸ್ವಿಯಾಗಿ ಉಡಾವಣೆ ಮಾಡಿದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ಸಂಭ್ರಮಾಚರಣೆ ಮಾಡಿದ್ದು ಹೀಗೆ.

  • 14 Jul 2023 02:49 PM (IST)

    Chandrayaan 3 Launch Live: ಇಸ್ರೋ ತಂಡದಿಂದ ಚಂದ್ರಯಾನ 3 ಮೇಲ್ವಿಚಾರಣೆ

    ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಚಂದ್ರಯಾನ 3ರ ಪ್ರಗತಿಯನ್ನು ಇಸ್ರೋ ತಂಡ ಮೇಲ್ವಿಚಾರಣೆ ಮಾಡುತ್ತಿದೆ.

  • 14 Jul 2023 02:47 PM (IST)

    Chandrayaan 3 Launch Live: ಚಂದ್ರಯಾನ-3 ಉಪಗ್ರಹ ಉಡಾವಣೆಗೆ ವಿಶೇಷ ಪೂಜೆ

    ಕಲಬುರಗಿ: ಚಂದ್ರಯಾನ-3 ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಲೆಂದು ನಗರದ ಶ್ರೀ ಶರಣಬಸವೇಶ್ವರ ದೇಗುಲದಲ್ಲಿ ಹಿಂದೂ ಜಾಗೃತಿ ಸೇನೆ ವತಿಯಿಂದ ವಿಶೇಷ ಪೂಜೆ ಮಾಡಲಾಗಿದೆ. ಇಸ್ರೋ ವಿಜ್ಞಾನಗಳಿಗೆ ಶುಭವಾಗಲೆಂದು ಘೋಷಣೆ ಕೂಗಿದ್ದಾರೆ.

  • 14 Jul 2023 02:45 PM (IST)

    Chandrayaan 3 Launch Live: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್​ರಿಂದ ಚಾಲನೆ

    ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ಯೋಜನೆಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಚಾಲನೆ ನೀಡಿದರು.

  • 14 Jul 2023 02:40 PM (IST)

    Chandrayaan 3 Launch Live: ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ

    ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ  ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.

  • 14 Jul 2023 02:32 PM (IST)

    Chandrayaan 3 Launch Live: ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆ

    ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್​, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್​​-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3 ಯೋಜನೆಗೆ 630 ಕೋಟಿ ರೂ. ಆಗಿರುವ ವೆಚ್ಚ ತಗುಲಿದೆ.

  • 14 Jul 2023 02:10 PM (IST)

    Chandrayaan 3 Launch Live: ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ: ಯಶಸ್ವಿಯಾಗಿ 3ನೇ ಹಂತ ತಲುಪಿದ ಚಂದ್ರಯಾನ ನೌಕೆ

    ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 2.35 ಕ್ಕೆ ನಿಗದಿತ ಉಡಾವಣೆಗೆ ಸಿದ್ಧವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ ಅಂತ್ಯದ ವೇಳೆಗೆ ಚಂದ್ರಯಾನ -3 ಮಿಷನ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಸುವ ಗುರಿಯನ್ನು ಹೊಂದಿದೆ.  ಯಶಸ್ವಿ ಲ್ಯಾಂಡಿಂಗ್ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.

  • 14 Jul 2023 01:43 PM (IST)

    Chandrayaan 3 Launch Live: ಚಂದ್ರಯಾನ-3ಗೆ 615 ಕೋಟಿ ರೂ. ವೆಚ್ಚ

    ಇಸ್ರೋ ಪ್ರಕಾರ ಚಂದ್ರಯಾನ-3 ಅನ್ನು ಸುಮಾರು 615 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಲ್ಯಾಂಡರ್ ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್‌ಗೆ ಸುಮಾರು 250 ಕೋಟಿ ರೂ. ವೆಚ್ಚವಾಗಲಿದೆ. ಉಡಾವಣಾಗೆ 365 ಕೋಟಿ ರೂ. ವೆಚ್ಚವಾಗಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಕೆ ಶಿವನ್ ಹೇಳಿದ್ದರು.

  • 14 Jul 2023 01:32 PM (IST)

    Chandrayaan 3 Launch Live: ಮಾನವನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡಲಾಗಿದೆ: ಇಸ್ರೋ ಮಾಜಿ ಅಧ್ಯಕ್ಷ

    “ಮಾನವವಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡಲಾಗಿದೆ. ಮಿಷನ್ ಚಂದ್ರಯಾನ-3 ವಿಫಲವಾಗಲು ಸಾಧ್ಯವಿಲ್ಲವೆಂದು ಮಿಷನ್ ಚಂದ್ರಯಾನ-3 ಕುರಿತು ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಹೇಳಿದ್ದಾರೆ.

  • 14 Jul 2023 01:26 PM (IST)

    Chandrayaan 3 Launch Live: ಚಂದ್ರನ ಮೇಲೆ ಇಳಿಯುವ 2ನೇ ಪ್ರಯತ್ನ

    ಚಂದ್ರಯಾನ-3 ಇದು ಚಂದ್ರಯಾನ-2 ಮಿಷನ್​ ಅನುಸರಣೆಯಾಗಿದೆ. 2019ರಲ್ಲಿ ಚಂದ್ರನ ಮೇಲೆ ಇಳಿಯುವ ಕೊನೆಯ ಹಂತದಲ್ಲಿ ಮಿಷನ್​​ ವಿಫಲವಾಗಿತ್ತು. ಇದೀಗ ಎರಡನೇ ಪ್ರಯತ್ನದಲ್ಲಿರುವ ಇಸ್ರೋ ಮೃದುವಾಗಿ ಉಪಗ್ರಹ ಇಳಿಸಲಿದೆ

  • 14 Jul 2023 12:46 PM (IST)

    Chandrayaan 3 Launch Live: ಶುಭಕೋರಿದ ಡಿಕೆ ಶಿವಕುಮಾರ್​​

    ಭಾರತೀಯ ಬಾಹ್ಯಾಕಾಶ ಪರಿಶೋಧನಾ ಪ್ರಯಾಣಕ್ಕೆ ಇಂದು ದೊಡ್ಡ ದಿನ. Chandrayan 3 ಉಡಾವಣೆ ಇಸ್ರೋ ಸಜ್ಜಾಗಿದೆ. ಭಾರತ ದೇಶವು ಚಂದ್ರನತ್ತ ಅದ್ಭುತವಾದ ಹೆಜ್ಜೆಯನ್ನು ಇಡುತ್ತಿದೆ. ಇದಕ್ಕಾಗಿ ಹಗಲಿರುಳು ಶ್ರಮಿಸಿದ ಇಸ್ರೋದ (ISRO) ಎಲ್ಲ ವಿಜ್ಞಾನಿಗಳು, ತಂತ್ರಜ್ಞರು ಮತ್ತು ಸಹಾಯಕ ಸಿಬ್ಬಂದಿಗೆ ನನ್ನ ಶುಭಾಶಯಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

  • 14 Jul 2023 12:42 PM (IST)

    Chandrayaan 3 Launch Live: ಶುಭಹಾರೈಸಿದ ಪ್ರಧಾನಿ ಮೋದಿ

    ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ಜುಲೈ 14ರ ದಿನವನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಟ್ಟಿದೆ. ಇಂದು ನಮ್ಮ ಮೂರನೇ ಚಂದ್ರಯಾನದ ಪ್ರಯಾಣ ಪ್ರಾರಂಭಿಸಲಿದೆ. ಈ ಗಮನಾರ್ಹ ಮಿಷನ್ ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

  • 14 Jul 2023 12:38 PM (IST)

    Chandrayaan 3 Launch Live: ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿಡಲಿದೆ ಚಂದ್ರಯಾನ-3

    ಭಾರತವು ತನ್ನ ಮೂರನೇ ಚಂದ್ರನ ಮಿಷನ್ ಅನ್ನು ಜುಲೈ 14ರಂದು ಶುಕ್ರವಾರ ಮಧ್ಯಾಹ್ನ 2:35 ಪ್ರಾರಂಭಿಸಲಿದೆ. ಮೂರು ಹಂತದ ವಿಶೇಷ ಸಾಮರ್ಥ್ಯ ಹೊಂದಿರುವ ಬಾಹ್ಯಾಕಾಶ ನೌಕೆಯು ಚಂದ್ರನ ದಕ್ಷಿಣ ಭಾಗದ ಮೇಲ್ಮೈನಲ್ಲಿ ಸುಸೂತ್ರವಾಗಿ ಲ್ಯಾಂಡ್ ಆಗಲಿದೆ.

  • 14 Jul 2023 11:59 AM (IST)

    Chandrayaan 3 Launch Live: ಚಂದ್ರನಲ್ಲಿ ಮಿಷನ್​ನ್ನು ಸುರಕ್ಷಿತ ಲ್ಯಾಂಡಿಂಗ್ ಮಾಡುವ ನಾಲ್ಕನೇ ರಾಷ್ಟ್ರ ಭಾರತ

    ಚಂದ್ರಯಾನ-3ಯ ಎಲ್ಲ ಕಾರ್ಯತಂತ್ರಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಭಾರತವು ಚಂದ್ರನಲ್ಲಿ ತನ್ನ ಮಿಷನ್​ನ್ನು ಸುರಕ್ಷಿತ ಲ್ಯಾಂಡಿಂಗ್ ಮಾಡುವ ನಾಲ್ಕನೇ ರಾಷ್ಟ್ರವಾಗಲಿದೆ. ಬಾಹ್ಯಾಕಾಶ ಸಂಶೋಧನೆಯ ಕ್ಷೇತ್ರದಲ್ಲಿ ಭಾರತ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಈ ಮೂಲಕ ಪ್ರದರ್ಶಿಸುತ್ತಿದೆ.

  • 14 Jul 2023 11:48 AM (IST)

    Chandrayaan 3 Launch Live: 10 ಇಂಚಿನ LMV ವಾಹಕದ ಪ್ರತಿಕೃತಿ ತಯಾರಿಸಿದ ಕಲಾವಿದ

    ಧಾರವಾಡ: ಇಂದು (ಜು.14) ಮಧ್ಯಾಹ್ನ ಚಂದ್ರಯಾನ-3 ಆಂಧ್ರಪ್ರದೇಶದ ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗುವ ಹಿನ್ನೆಲೆ ನಗರದ ಮಂಜುನಾಥ ಹಿರೇಮಠ ಕಲಾವಿದ 10 ಇಂಚಿನ ಕಲಾಕೃತಿ ತಯಾರಿಸಿ ಶುಭಕೋರಿದ್ದಾರೆ. ಕಲಾವಿದ ಮಂಜುನಾಥ ಎಲ್​ಎಮ್​​ವಿ ವಾಹಕದ ಪ್ರತಿಕೃತಿ ತಯಾರಿಸಿದ್ದಾರೆ.

  • 14 Jul 2023 11:42 AM (IST)

    Karnataka News Live: ಚಂದ್ರಯಾನ-3 ಯಶಸ್ವಿಗೆ ಸದನದಲ್ಲಿ ಸ್ಪೀಕರ ಶುಭ ಹಾರೈಕೆ

    ಬೆಂಗಳೂರು: ಚಂದ್ರಯಾನ ನೌಕೆ ಮಧ್ಯಾಹ್ನ ಉಡಾವಣೆ ಆಗಲಿದೆ, ಸಂಭ್ರಮದ ಕ್ಷಣಗಳಲ್ಲಿ ನಾವು ಹೆಮ್ಮೆ ಪಡೋಣ ಚಂದ್ರಯಾನ ಯಶಸ್ವಿ ಆಗಲಿ ಎಂದು ಶುಭಾಶಯ ಕೋರೋಣ ಎಂದು ಸದನದಲ್ಲಿ ಸ್ಪೀಕರ್​ ಯುಟಿ ಖಾದರ್​ ಅವರು ಹೇಳಿದರು.

  • 14 Jul 2023 11:39 AM (IST)

    Karnataka News Live: ರಾಜ್ಯಪಾಲರ ಭಾಷಣದ ಮೇಲೆ ವಿಧಾನ ಪರಿಷತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತು

    ಬೆಂಗಳೂರು:  ರಾಜ್ಯಪಾಲರು ಸರ್ಕಾರದ ನೀತಿ ನಿಲುವುಗಳು, ಅವರ ದೂರ ದೃಷ್ಟಿ ಮುನ್ನೋಟ ಒಳಗೊಂಡಂತೆ ಸದನದ ಮುಂದೆ ಮಂಡಿಸಿದ್ದಾರೆ. ಭಾಷಣದಲ್ಲಿ ಐದು ವರ್ಷಗಳ ಕಾಲ ನಾವು ಅಭಿವೃದ್ಧಿ ಮಾಡುತ್ತವೆ. ಟೀಕೆ ಮಾಡಲಿ ನಾನು ಸ್ವೀಕಾರ ಮಾಡುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೊಗಳಿಕೆ ತೆಗಳಿಕೆ ಎರಡವನ್ನು ನಾನು ಸಮ ಚಿತ್ತದಿಂದ ಸ್ವೀಕಾರ ಮಾಡುತ್ತೇವೆ. ಪ್ರಭಲವಾದ ವಿರೋಧ ಪಕ್ಷ ಇರಬೇಕು. ಆಗ ಸರ್ಕಾರ ಸಮರ್ಪಕವಾಗಿ ಕೆಲಸ ಮಾಡಲು ಅವಕಾಶ ಆಗುತ್ತದೆ. ಸಂವಿಧಾನದ ಅಡಿಯಲ್ಲಿ ನಾವು ಕೆಲಸ ಮಾಡಬೇಕು. ಸಂವಿಧಾನದ ವಿರುದ್ಧ ಕೆಲಸ ಮಾಡಲು ಅಗಲ್ಲ ಎಂದು ರಾಜ್ಯಪಾಲರ ಭಾಷಣದ ಮೇಲೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  • 14 Jul 2023 11:29 AM (IST)

    Chandrayaan 3 Launch Live: ಚಂದ್ರಯಾನ-3 ಇಂದು ಉಡಾವಣೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಇಂದು ಜುಲೈ 14 ರಂದು ಮಧ್ಯಾಹ್ನ 2.30 ಕ್ಕೆ ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ.

  • Published On - Jul 14,2023 11:25 AM

    Follow us
    ‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
    ‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
    ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
    ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
    ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
    ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
    ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
    ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
    ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
    ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
    ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
    ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
    ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
    ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
    ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
    ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
    ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
    ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
    ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
    ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?