AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Mann Ki Baat: ಚಂದ್ರಯಾನ 3ರ ಯಶಸ್ಸು, ನಾರಿ ಶಕ್ತಿಯ ಜೀವಂತ ಉದಾಹರಣೆ: ಪ್ರಧಾನಿ ಮೋದಿ

ಚಂದ್ರಯಾನ 3 ರ ಯಶಸ್ಸು ನಾರಿ ಶಕ್ತಿಗೆ ಜೀವಂತ ಉದಾಹರಣೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 104ನೇ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಚಂದ್ರಯಾನ 3 ರ ಯಶಸ್ಸಿನ ಹಿಂದೆ ಮಹಿಳೆಯರ ಕೆಲಸ ತುಂಬಾ ಇದೆ, ಅಸಾಧ್ಯವಾದುದ್ದನ್ನು ಸಾಧ್ಯವೆಂದು ತೋರಿಸಿದ್ದಾರೆ. ಚಂದ್ರಯಾನ 3 ರಲ್ಲಿ ಹಲವು ಮಂದಿ ಮಹಿಳಾ ವಿಜ್ಞಾನಿಗಳು ಹಾಗೂ ಎಂಜಿನಿಯರ್​ಗಳು ಕೆಲಸ ಮಾಡಿದ್ದಾರೆ ಎಂದರು.

Narendra Modi Mann Ki Baat: ಚಂದ್ರಯಾನ 3ರ ಯಶಸ್ಸು, ನಾರಿ ಶಕ್ತಿಯ ಜೀವಂತ ಉದಾಹರಣೆ: ಪ್ರಧಾನಿ ಮೋದಿ
Narendra Modi
ನಯನಾ ರಾಜೀವ್
|

Updated on:Aug 27, 2023 | 11:55 AM

Share

ಚಂದ್ರಯಾನ 3 ರ ಯಶಸ್ಸು ನಾರಿ ಶಕ್ತಿಗೆ ಜೀವಂತ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. 104ನೇ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಚಂದ್ರಯಾನ 3 ರ ಯಶಸ್ಸಿನ ಹಿಂದೆ ಮಹಿಳೆಯರ ಕೆಲಸ ತುಂಬಾ ಇದೆ, ಅಸಾಧ್ಯವಾದುದ್ದನ್ನು ಸಾಧ್ಯವೆಂದು ತೋರಿಸಿದ್ದಾರೆ. ಚಂದ್ರಯಾನ 3 ರಲ್ಲಿ ಹಲವು ಮಂದಿ ಮಹಿಳಾ ವಿಜ್ಞಾನಿಗಳು ಹಾಗೂ ಎಂಜಿನಿಯರ್​ಗಳು ಕೆಲಸ ಮಾಡಿದ್ದಾರೆ ಎಂದರು.

104ನೇ ಮನ್​ ಕಿ ಬಾತ್​ನಲ್ಲಿ ಮಾತನಾಡಿದ ಮೋದಿ,  ಚಂದ್ರಯಾನ ಮಿಷನ್ ನವ ಭಾರತದ ಚೈತನ್ಯದ ಸಂಕೇತವಾಗಿದೆ. ಅದು ಯಾವುದೇ ಪರಿಸ್ಥಿತಿಯಲ್ಲಿ ಗೆಲ್ಲಲು ಬಯಸುತ್ತಿದೆ, ಗೆಲ್ಲುವುದು ಹೇಗೆಂಬುದು ಕೂಡ ತಿಳಿದಿದೆ. ಆಗಸ್ಟ್ 23 ರಂದು ಚಂದ್ರಯಾನ ಎಂಬ ಸಂಕಲ್ಪದ ಸೂರ್ಯ ಚಂದ್ರನ ಮೇಲೆ ಉದಯಿಸಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದರು.

ಮುಂದಿನ ತಿಂಗಳು ನಡೆಯಲಿರುವ ಜಿ20 ಶೃಂಗಸಭೆಗೆ ಭಾರತ ಸಿದ್ಧವಾಗಿದೆ. ಇದರಲ್ಲಿ ಭಾಗವಹಿಸಲು 40 ದೇಶಗಳ ಮುಖ್ಯಸ್ಥರು ಭಾರತಕ್ಕೆ ಬರುತ್ತಿದ್ದಾರೆ. ಭಾರತದ ಆಹ್ವಾನದ ಮೇರೆಗೆ ಮಾತ್ರ ಆಫ್ರಿಕನ್ ರಾಷ್ಟ್ರಗಳ ಮುಖ್ಯಸ್ಥರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

ವಿಶ್ವ ವಿದ್ಯಾಲಯ ಕ್ರೀಡಾಕೂಟದಲ್ಲಿ ಭಾರತಕ್ಕೆ ಪದಕ ಗೆದ್ದ ಆಟಗಾರರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕೆಲವು ದಿನಗಳ ಹಿಂದೆ ವಿಶ್ವವಿದ್ಯಾಲಯ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಪಂದ್ಯಗಳಲ್ಲಿ ಭಾರತದ ಆಟಗಾರರು ಇಲ್ಲಿಯವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 26 ಪ್ರಶಸ್ತಿಗಳನ್ನು ಗೆದ್ದಿದ್ದಾರೆ ಎಂದರು.

1959 ರಿಂದ ನಡೆದ ವಿಶ್ವ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ಗೆದ್ದ ಎಲ್ಲಾ ಪದಕಗಳನ್ನು ಸೇರಿಸಿದರೂ, ಈ ಸಂಖ್ಯೆ ಕೇವಲ 18 ಅನ್ನು ತಲುಪುತ್ತದೆ ಎಂದು ತಿಳಿದರೆ ನಿಮಗೆ ಸಂತೋಷವಾಗುತ್ತದೆ ಎಂದರು.

ಬೆಂಗಳೂರಿನ ಧನ್​ ಪಾಲ್​ ಅವರ ಕುರಿತು ಪ್ರಧಾನಿ ಮೋದಿ ಮಾತು ಯಾವಾಗ ಸಮಯ ಸಿಕ್ಕರೂ ನಮ್ಮ ದೇಶದ ವಿವಿಧತೆ ಹಾಗೂ ಸಂಪ್ರದಾಯವನ್ನು ನೋಡುವ ಅರಿಯುವ ಪ್ರಯತ್ನ ಮಾಡಿ. ಸಾಕಷ್ಟು ಮಂದಿ ತಮ್ಮ ಊರಿನ ಐತಿಹಾಸಿಕ ಪ್ರದೇಶಗಳ ಬಗ್ಗೆ ಅರಿವೇ ಇರುವುದಿಲ್ಲ.

ಹಾಗೆಯೇ ಬೆಂಗಳೂರಿನ ಧನ್​ಪಾಲ್ ಅವರು ಟ್ರಾನ್ಸ್​ಪೋರ್ಟ್​ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಅವರಿಗೆ ದರ್ಶಿನಿಯಲ್ಲಿ ಬೇರೆ ರಾಜ್ಯ ಹಾಗೂ ಬೇರೆ ದೇಶಗಳ ಜನರಿಗೆ ಬೆಂಗಳೂರು ದರ್ಶನ ಮಾಡುವ ಅವಕಾಶ ದೊರೆಯಿತು.

ಆಗ ಒಂದು ದಿನ ಪ್ರವಾಸಿಗರೊಬ್ಬರು ಬೆಂಗಳೂರಿನಲ್ಲಿ ಸ್ಯಾಂಕಿ ಟ್ಯಾಂಕಿ ಇದೆಯಲ್ಲಾ ಅದಕ್ಕೆ ಆ ಹೆಸರು ಹೇಗೆ ಬಂತು ಎನ್ನುವ ಪ್ರಶ್ನೆ ಕೇಳಿದ್ದರು, ಆದರೆ ಧನ್ ಪಾಲ್ ಅವರಿಗೆ ತಮ್ಮ ಬಗ್ಗೆಯೇ ಬೇಸರವೆನಿಸಿತು, ನಂತರ ಕಲಿಕೆ ಶುರು ಮಾಡಿದರು. ಶಿಲಾಲೇಖದಲ್ಲಿ ಡಿಪ್ಲೊಮಾ ಕೂಡ ಮಾಡಿದ್ದಾರೆ, ಈಗ ರಿಟೈರ್ ಆಗಿದ್ದರೂ ಕೂಡ ತಮ್ಮ ಅಭಿರುಚಿ ಒಂದು ಚೂರು ಕಡಿಮೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:14 am, Sun, 27 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ