National Space Day: ಚಂದ್ರಯಾನ-3 ಯಶಸ್ವಿಯಾದ ದಿನ, ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ; ಮೋದಿ ಘೋಷಣೆ

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚಂದ್ರಯಾನ-3 ಯೋಜನೆ ಯಶಸ್ವಿಯಾದ, ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವನ್ನು, ಅಂದರೆ ಆಗಸ್ಟ್ 23 ಅನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಆಚರಿಸಲಾಗುವುದು ಎಂದು ಘೋಷಿಸಿದರು.

National Space Day: ಚಂದ್ರಯಾನ-3 ಯಶಸ್ವಿಯಾದ ದಿನ, ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ; ಮೋದಿ ಘೋಷಣೆ
ಇಸ್ರೋ ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಮಾತು
Follow us
|

Updated on:Aug 26, 2023 | 8:55 AM

ಬೆಂಗಳೂರು, ಆಗಸ್ಟ್ 26: ಚಂದ್ರಯಾನ-3 ಯೋಜನೆ ಯಶಸ್ವಿಯಾದ, ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವನ್ನು, ಅಂದರೆ ಆಗಸ್ಟ್ 23 ಅನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ (National Space Day)’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಘೋಷಣೆ ಮಾಡಿದರು. ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿನಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು.

ಚಂದ್ರಯಾನ-2 ಪತನ ಸ್ಥಳಕ್ಕೆ ‘ತಿರಂಗ ಪಾಯಿಂಟ್’​ ಎಂದು ನಾಮಕರಣ ಮಾಡಿದ ಅವರು, ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಚಂದ್ರನವರೆಗೂ ತಲುಪಿದೆ. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ. ಹೀಗಾಗಿ ಆಗಸ್ಟ್​ 23ರಂದು ರಾಷ್ಟ್ರೀಯ ಬಾಹ್ಯಾಕಾಶ​ ದಿನ ಎಂದು ಘೋಷಣೆ ಮಾಡಲಾಗುವುದು ಎಂದು ಮೋದಿ ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗ್ತಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಮೋದಿ ಹೇಳಿದರು.

ಇದಕ್ಕೂ ಮುನ್ನ ಅವರು, ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಮೋದಿ ಘೋಷಣೆ ಮಾಡಿದರು.

ಇದನ್ನೂ ಓದಿ: Shiv Shakti Point: ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳಕ್ಕೆ ಶಿವಶಕ್ತಿ ಎಂದು ಪ್ರಧಾನಿ ಮೋದಿ ನಾಮಕರಣ

ಗ್ರೀಕ್​ ದೇಶದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್​ಎಎಲ್​​ ಏರ್​ಪೋರ್ಟ್​​ನಲ್ಲಿ ವಿಜ್ಞಾನಿಗಳು, ಅಧಿಕಾರಿಗಳು ಸ್ವಾಗತಿಸಿದರು. ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಎಸ್​​​.ಮುನಿಸ್ವಾಮಿ, ಶಾಸಕರಾದ ಭೈರತಿ ಬಸವರಾಜ್​​, ಮಂಜುಳಾ ಲಿಂಬಾವಳಿ ಪ್ರಧಾನಿಯವರನ್ನು ಸ್ವಾಗತಿಸಿದರು.

ನಂತರ ಇಸ್ರೋ ಕೇಂದ್ರಕ್ಕೆ ತೆರಳುವ ಮುನ್ನ ಜನರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್ ಘೋಷಣೆ ಮೊಳಗಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 am, Sat, 26 August 23

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್